Karnataka Gram Panchayat Recruitment: ಶೀಘ್ರದಲ್ಲೇ 1280 ಗ್ರಾಮ ಪಂಚಾಯತ್​ ಕಾರ್ಯದರ್ಶಿ ಹುದ್ದೆಗೆ ಅಧಿಸೂಚನೆ

ರಾಜ್ಯ ಸರ್ಕಾರದ ಹುದ್ದೆ ಆಕಾಂಕ್ಷಿಗಳಿಗೆ ಈ ಮೂಲಕ ಸಿಹಿ ಸುದ್ದಿ ನೀಡಿದ್ದಾರೆ. ಆಸಕ್ತ ಮತ್ತು ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಸರಕಾರಿ ಉದ್ಯೋಗ

ಸರಕಾರಿ ಉದ್ಯೋಗ

  • Share this:
    ರಾಜ್ಯದಲ್ಲಿ ಶೀಘ್ರದಲ್ಲೇ 1280 ಪಂಚಾಯತ್​ ಕಾರ್ಯದರ್ಶಿ (Karnataka Gram Panchayat official), ಪಂಚಾಯತ್​ ಅಭಿವೃದ್ಧಿ ಅಧಿಕಾರಿ ಮತ್ತು ಎಸ್​ಡಿಎ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗುವುದು. ಶೀಘ್ರದಲ್ಲೇ ಈ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ ಮಾಡುವ ಸಂಬಂಧ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದು, ರಾಜ್ಯ ಸರ್ಕಾರದ ಹುದ್ದೆ ಆಕಾಂಕ್ಷಿಗಳಿಗೆ ಈ ಮೂಲಕ ಸಿಹಿ ಸುದ್ದಿ ನೀಡಿದ್ದಾರೆ. ಆಸಕ್ತ ಮತ್ತು ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

    ಸಂಸ್ಥೆಯ ಹೆಸರು: ಕರ್ನಾಟಕ ಗ್ರಾಮ ಪಂಚಾಯತ್
    ಹುದ್ದೆಯ ಹೆಸರು: ಪಂಚಾಯತ್ ಕಾರ್ಯದರ್ಶಿ,ಪಿಡಿಒ ಮತ್ತು ಎಸ್​ಡಿಎ
    ಹುದ್ದೆಗಳ ಸಂಖ್ಯೆ: 1280
    ಉದ್ಯೋಗ ಸ್ಥಳ: ಕರ್ನಾಟಕ
    ವೇತನ: ಕರ್ನಾಟಕ ಗ್ರಾಮ ಪಂಚಾಯತ್ ನಿಯಮಗಳ ಪ್ರಕಾರ























    ಹುದ್ದೆಹುದ್ದೆ ಸಂಖ್ಯೆ
    ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO)326
    ಪಂಚಾಯತ್ ಕಾರ್ಯದರ್ಶಿ ಗ್ರೇಡ್-I487
    ಪಂಚಾಯತ್ ಕಾರ್ಯದರ್ಶಿ ಗ್ರೇಡ್-II343
    ದ್ವಿತೀಯ ದರ್ಜೆ ಸಹಾಯಕರು124

    ಶೈಕ್ಷಣಿಕ ಅರ್ಹತೆ: ಕರ್ನಾಟಕ ಗ್ರಾಮ ಪಂಚಾಯತ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪಿಯುಸಿ, ಪದವಿ ಪೂರ್ಣಗೊಳಿಸಿರಬೇಕು.

    ಇದನ್ನು ಓದಿ: ಕೇಂದ್ರ ರೈಲ್ವೇ ಇಲಾಖೆಯಲ್ಲಿ ಶಿಕ್ಷಕರ ಹುದ್ದೆಗೆ ವಾಕ್​ ಇನ್​ ಇಂಟರ್​ವ್ಯೂ; ಇಲ್ಲಿದೆ ಹುದ್ದೆ ಮಾಹಿತಿ

    ವಯೋಮಿತಿ: ಕರ್ನಾಟಕ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಟ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

    ವಯೋಮಿತಿ ಸಡಿಲಿಕೆ:
    ಕರ್ನಾಟಕ ಗ್ರಾಮ ಪಂಚಾಯತ್ ನಿಯಮಗಳ ಪ್ರಕಾರ

    ಅರ್ಜಿ ಶುಲ್ಕ:
    ಅರ್ಜಿ ಶುಲ್ಕವಿಲ್ಲ

    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಶೀಘ್ರದಲ್ಲೇ ಅಧಿಸೂಚನೆ ಹೊರಬೀಳಲಿದೆ
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಶೀಘ್ರದಲ್ಲೇ ಅಧಿಸೂಚನೆ ಹೊರಬೀಳಲಿದೆ

    ಇದನ್ನು ಓದಿ: ಬಿಇಎಲ್​ನಲ್ಲಿ 24 ಡೆಪ್ಯುಟಿ ಇಂಜಿನಿಯರ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

    ಪ್ರಮುಖ ಲಿಂಕ್​ಗಳು

    ಅಧಿಕೃತ ವೆಬ್‌ಸೈಟ್: rdpr.karnataka.gov.in

    ಅರ್ಜಿ ಸಲ್ಲಿಕೆ ವಿಧಾನ

    ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

    ಅಧಿಕೃತ ವೆಬ್​ಸೈಟ್​ ಮೂಲಕ ಅರ್ಜಿ ನಮೂನೆಯನ್ನು ಡೌನ್​ಲೋಡ್​ ಮಾಡಿ ಸ್ವಯಂ ದೃಢೀಕರಿಸಿದ ಅರ್ಜಿಗಳನ್ನು ಲಗತ್ತಿಸಿ

    ಅರ್ಜಿಜೊತೆಗೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.

    ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.

    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ
    Published by:Seema R
    First published: