Karnataka High Court Recruitment: ಜಿಲ್ಲಾ ನ್ಯಾಯಾಧೀಶರ ಹುದ್ದೆಗೆ ಅರ್ಜಿ ಆಹ್ವಾನ

ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 19 ಆಗಿದೆ.

ಕರ್ನಾಟಕ ಉಚ್ಛ ನ್ಯಾಯಾಲಯ

ಕರ್ನಾಟಕ ಉಚ್ಛ ನ್ಯಾಯಾಲಯ

  • Share this:
    ಕರ್ನಾಟಕ ಹೈ ಕೋರ್ಟ್ (Karnataka High Court)​ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನ್ಯಾಯಾಧೀಶರ ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 16 ಜಿಲ್ಲಾ ನ್ಯಾಯಾಧೀಶರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ವಕೀಲಿ ವೃತ್ತಿಯಲ್ಲಿ ತೊಡಗಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 19 ಆಗಿದೆ.

    16 ಹುದ್ದೆಗಳಲ್ಲಿ 14 ಬ್ಯಾಕ್​​​ಲಗ್​​ ಹುದ್ದೆಗಳಾಗಿದ್ದು, 2 ಹೊಸ ಹುದ್ದೆಗಳಾಗಿದೆ. ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.



























    ಹುದ್ದೆ ಮಾಹಿತಿಹುದ್ದೆ ವಿವರ
    ಸಂಸ್ಥೆಯ ಹೆಸರುಕರ್ನಾಟಕ ಹೈಕೋರ್ಟ್
    ಹುದ್ದೆಯ ಹೆಸರುಜಿಲ್ಲಾ ನ್ಯಾಯಾಧೀಶರು
    ಹುದ್ದೆಗಳ ಸಂಖ್ಯೆ16
    ಉದ್ಯೋಗ ಸ್ಥಳಬೆಂಗಳೂರು
    ವೇತನ51550-63070 ರೂ. ಪ್ರತಿ ತಿಂಗಳು

    ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಕಾನೂನು ಪದವಿ  ಪೂರ್ಣಗೊಳಿಸಿರಬೇಕು.

    ಇದನ್ನು ಓದಿ: ಸಶಸ್ತ್ರ ಸೀಮಾ ಬಲದಲ್ಲಿ 399 ಕಾನ್ಸ್​ಟೇಬಲ್​ ಹುದ್ದೆಗೆ ಅರ್ಜಿ ಆಹ್ವಾನ

    ವಯೋಮಿತಿ: ಕರ್ನಾಟಕ ಹೈಕೋರ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 45 ವರ್ಷಗಳು ಮೀರಿರಬಾರದು.

    ವಯೋಮಿತಿ ಸಡಿಲಿಕೆ:
    ಮಾಜಿ ಸೈನಿಕರು, ಪ.ಜಾ, ಪ.ಪಂ ಅಭ್ಯರ್ಥಿಗಳು: 3 ವರ್ಷಗಳು

    ಅರ್ಜಿ ಶುಲ್ಕ: ಪೂರ್ವಭಾವಿ ಪರೀಕ್ಷಾ ಶುಲ್ಕ

    ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಎ ಅಭ್ಯರ್ಥಿಗಳು: 250 ರೂ.
    ಎಲ್ಲಾ ಇತರ ಅಭ್ಯರ್ಥಿಗಳು: 500 ರೂ.

    ಮುಖ್ಯ ಪರೀಕ್ಷಾ ಶುಲ್ಕ

    ಪ.ಜಾ, ಪ.ಪಂ ಮತ್ತು ಪ್ರವರ್ಗ 1ಎ ಅಭ್ಯರ್ಥಿಗಳು: 750 ರೂ.
    ಎಲ್ಲಾ ಇತರ ಅಭ್ಯರ್ಥಿಗಳು: 1000 ರೂ.

    ಪಾವತಿ ವಿಧಾನ: ಆನ್‌ಲೈನ್ ಅಥವಾ ಚಲನ್

    ಆಯ್ಕೆ ಪ್ರಕ್ರಿಯೆ:
    ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ, ವೈವಾ

    ಇದನ್ನು ಓದಿ: ಏರ್​ ಇಂಡಿಯಾದಲ್ಲಿದೆ ಭರ್ಜರಿ ಉದ್ಯೋಗಾವಕಾಶ; ಇಲ್ಲಿದೆ ಸಂಪೂರ್ಣ ಮಾಹಿತಿ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20ಸೆಪ್ಟೆಂಬರ್​​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19 ಅಕ್ಟೋಬರ್ 2022
    ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 21 ಅಕ್ಟೋಬರ್ 2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: karnatakajudiciary.kar.nic.in

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್ ನೀಡಿ. ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ನೀಡಿ.

    -ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕ ಪಾವತಿಸಿ, ಅದರ ಮಾಹಿತಿ ಅಪ್​ಲೋಡ್​ ಮಾಡಿ.

    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿದ ಬಳಿಕ ಸಲ್ಲಿಸು ಬಟನ್​ ಕ್ಲಿಕ್​ ಮಾಡಿ
    Published by:Seema R
    First published: