High Court Recruitment: ಕರ್ನಾಟಕ ಹೈ ಕೋರ್ಟ್​ನಲ್ಲಿ ಗ್ರೂಪ್​ ಡಿ ಹುದ್ದೆಗೆ ಅರ್ಜಿ ಸಲ್ಲಿಸಲು ನಾಳೆಯೇ ಕಡೆಯ ದಿನ

ಒಟ್ಟು 150 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಇದರಲ್ಲಿ 21 ಹುದ್ದೆಗಳನ್ನು ಕಲ್ಯಾಣ ಕರ್ನಾಟಕಕ್ಕೆ ಮೀಸಲಾಗಿರಸಲಾಗಿದೆ. 

ಕರ್ನಾಟಕ ಉಚ್ಛ ನ್ಯಾಯಾಲಯ

ಕರ್ನಾಟಕ ಉಚ್ಛ ನ್ಯಾಯಾಲಯ

  • Share this:
    ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ (High Court of Karnataka) ಗ್ರೂಪ್​ ಡಿ (Group-D Posts) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 150 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಹತ್ತನೇ ತರಗತಿ ಪಾಸ್​ ಆಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿಯನ್ನು ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 17 ಆಗಿದೆ.

    150 ಹುದ್ದೆಗಳಲ್ಲಿ 21 ಹುದ್ದೆಗಳನ್ನು ಕಲ್ಯಾಣ ಕರ್ನಾಟಕಕ್ಕೆ ಮೀಸಲಾಗಿರಸಲಾಗಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.




























    ಹುದ್ದೆ ಮಾಹಿತಿಹುದ್ದೆ ವಿವರ
    ಸಂಸ್ಥೆಕರ್ನಾಟಕ ಹೈಕೋರ್ಟ್
    ಹುದ್ದೆಯ ಹೆಸರುಗ್ರೂಪ್​​ ಡಿ
    ಹುದ್ದೆಗಳ ಸಂಖ್ಯೆ150
    ಕಾರ್ಯ ನಿರ್ವಹಣೆ ಸ್ಥಳಬೆಂಗಳೂರು
    ವೇತನ19900-63200 ರೂ. ಪ್ರತಿ ತಿಂಗಳು


    ಶೈಕ್ಷಣಿಕ ಅರ್ಹತೆ: ಕರ್ನಾಟಕ ಹೈಕೋರ್ಟ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

    ವಯೋಮಿತಿ: ಕರ್ನಾಟಕ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು  ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

    ವಯೋಮಿತಿ ಸಡಿಲಿಕೆ:
    ಪ.ಜಾ, ಪ.ಪಂ ಮತ್ತು ಪ್ರವರ್ಗ-1  ಅಭ್ಯರ್ಥಿಗಳು: 05 ವರ್ಷಗಳು
    ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: 03 ವರ್ಷಗಳು

    ಅರ್ಜಿ ಶುಲ್ಕ:
    ಪ.ಜಾ, ಪ.ಪಂ ಮತ್ತು ಪ್ರವರ್ಗ-1, ವಿಕಲಚೇತನ ಅಭ್ಯರ್ಥಿಗಳು: 100 ರೂ.
    ಸಾಮಾನ್ಯ, ಒಬಿಸಿ ಅಭ್ಯರ್ಥಿಗಳು: 200 ರೂ

    ಇದನ್ನು ಓದಿ: ಕೆಪಿಎಸ್​ಸಿಯಿಂದ ಸಹಾಯಕ ನಿರ್ದೇಶಕರ ಹುದ್ದೆಗೆ ಅರ್ಜಿ ಆಹ್ವಾನ

    ಪಾವತಿ ವಿಧಾನ: ಆನ್‌ಲೈನ್ ಅಥವಾ ಚಲನ್

    ಆಯ್ಕೆ ಪ್ರಕ್ರಿಯೆ:
    ಮೆರಿಟ್ ಪಟ್ಟಿ ಮತ್ತು ಸಂದರ್ಶನ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 17 ಸೆಪ್ಟೆಂಬರ್​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17ಸೆಪ್ಟೆಂಬರ್​ 2022
    ಶುಲ್ಕ ಪಾವತಿಗೆ ಕೊನೆಯ ದಿನಾಂಕ: 21ಸೆಪ್ಟೆಂಬರ್​ 2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ - ಆರ್​ಪಿಸಿ: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ಅಧಿಸೂಚನೆ - ಕಲ್ಯಾಣ ಕರ್ನಾಟಕ: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: karnatakajudiciary.kar.nic.in

    ಇದನ್ನು ಓದಿ: ಬೆಂಗಳೂರು ವಿವಿಯಲ್ಲಿ ಪೂರ್ಣ-ಅರೆಕಾಲಿಕ ಉಪನ್ಯಾಸಕ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ

    - ಆನ್‌ಲೈನ್ ಮೋಡ್ ಮೂಲಕ ನಿಗದಿತ ಅರ್ಜಿಯನ್ನು ಡೌನ್​ ಲೋಡ್​ ಮಾಡಿ. ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ.

    ಆನ್‌ಲೈನ್‌ನಲ್ಲಿ ಲಾಗ್​ ಇನ್​ ಆಗಿ. ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.

    ನಿಮ್ಮ ವರ್ಗಕ್ಕೆ ಅನುಸಾರವಾಗಿ ಅರ್ಜಿ ಶುಲ್ಕ ಪಾವತಿಸಿ, ಈ ಕುರಿತ ಮಾಹಿತಿ ಅಪ್​ಲೋಡ್​ ಮಾಡಿ

    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಮೇಲಿನ ವಿಳಾಸಕ್ಕೆ ಸ್ಪೀಡ್​ ಅಥವಾ ರಿಜಿಸ್ಟರ್​ ಪೋಸ್ಟ್​ ಮೂಲಕ ನಿಗದಿತ ದಿನಾಂಕಕ್ಕೆ ಮುನ್ನ ಕಳುಹಿಸಬೇಕಿದೆ
    Published by:Seema R
    First published: