Karnataka Jobs: ಧಾರವಾಡ ಕೃಷಿ ವಿವಿಯಲ್ಲಿ 74 ಹುದ್ದೆಗಳು ಖಾಲಿ, ತಿಂಗಳಿಗೆ ₹70,000 ಸಂಬಳ

ಇದೇ ಅಕ್ಟೋಬರ್ 28 ಮತ್ತು 29ರಂದು ನೇರ ಸಂದರ್ಶನ ನಡೆಯಲಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಭಾಗವಹಿಸಬಹುದು.

ಧಾರವಾಡ ಕೃಷಿ ವಿಶ್ವವಿದ್ಯಾಲಯ

ಧಾರವಾಡ ಕೃಷಿ ವಿಶ್ವವಿದ್ಯಾಲಯ

 • Share this:
  ಧಾರವಾಡ ಕೃಷಿ ವಿಶ್ವವಿದ್ಯಾಲಯ(Dharawad Agriculture University Recruitment-2021) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಧಾರವಾಡ ಕೃಷಿ ವಿಶ್ವವಿದ್ಯಾಲಯ(Dharawad Agriculture University)ದಲ್ಲಿ ಒಟ್ಟು 74 ವಿವಿಧ ಹುದ್ದೆಗಳು ಖಾಲಿ ಇದ್ದು, ನೇರ ಸಂದರ್ಶನ(Direct Interview)ದ ಮೂಲಕ ಆಯ್ಕೆ ಮಾಡಲಾಗುತ್ತದೆ. ಇದೇ ಅಕ್ಟೋಬರ್ 28 ಮತ್ತು 29ರಂದು ನೇರ ಸಂದರ್ಶನ ನಡೆಯಲಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಭಾಗವಹಿಸಬಹುದು.

  ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

  ಸಂಸ್ಥೆ ಧಾರವಾಡ ಕೃಷಿ ವಿಶ್ವವಿದ್ಯಾಲಯ
  ಒಟ್ಟು ಹುದ್ದೆಗಳು 74
  ವಿದ್ಯಾರ್ಹತೆ 10th, M.Sc, B.Sc, M.E/M.Tech, BE/B.Tech
  ಆಯ್ಕೆ ವಿಧಾನ ನೇರ ಸಂದರ್ಶನ
  ಸಂಬಳ ಮಾಸಿಕ ₹15,000-70,000
  ಅಧಿಕೃತ ವೆಬ್​ಸೈಟ್ https://uasd.edu/
  ಸಂದರ್ಶನದ ದಿನಾಂಕ ಅ.28 &29, 2021  ವಿದ್ಯಾರ್ಹತೆ:

  ಧಾರವಾಡ ಕೃಷಿ ವಿಶ್ವವಿದ್ಯಾಲಯ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಸಂಸ್ಥೆ/ಬೋರ್ಡ್​​ನಿಂದ Ph.D, M.Sc, B.Sc, SSLC, ME/M.Tech, BE/B.Tech ಮತ್ತು ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು. ಈ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

  ಇದನ್ನೂ ಓದಿ:

  ವಯೋಮಿತಿ:

  ಕೃಷಿ ವಿಶ್ವವಿದ್ಯಾಲಯ, ಧಾರವಾಡ ನೇಮಕಾತಿಯ ವಿವಿಧ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು Walk-in-Interview ನಲ್ಲಿ ಭಾಗವಹಿಸಬಹುದು.

  ವೇತನ:

  ಕೃಷಿ ವಿಶ್ವವಿದ್ಯಾಲಯ, ಧಾರವಾಡ ನೇಮಕಾತಿಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,000/-ರಿಂದ 70,000/-ರೂಗಳ ವರೆಗೆ ಸಂಬಳ ನೀಡಲಾಗುವುದು.

  ಆಯ್ಕೆ ಪ್ರಕ್ರಿಯೆ:

  ಕೃಷಿ ವಿಶ್ವವಿದ್ಯಾಲಯ, ಧಾರವಾಡ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

  ಇದನ್ನೂ ಓದಿ: Mandya Anganwadi Recruitment 2021: ಮಂಡ್ಯದಲ್ಲಿ ಅಂಗನವಾಡಿ ಕಾರ್ಯಕರ್ತೆ & ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

  ಅರ್ಜಿ ಸಲ್ಲಿಸುವುದು ಹೇಗೆ?

  • ಕೃಷಿ ವಿಶ್ವವಿದ್ಯಾಲಯ, ಧಾರವಾಡ ವಿವಿಧ ಹುದ್ದೆಗಳ ನೇಮಕಾತಿಗೆ ನಡೆಸಲಾಗುತ್ತಿರುವ ಸಂದರ್ಶನದಲ್ಲಿ ಭಾಗವಹಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://uasd.edu/ ನಲ್ಲಿ ನೀಡಲಾಗಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು.

  • ಅರ್ಜಿಯನ್ನು ಸೂಕ್ತ ಮಾಹಿತಿಯೊಂದಿಗೆ ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಬೇಕು.

  • ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಇದೇ ಅಕ್ಟೋಬರ್ 28 & 29, 2021ರಂದು ಬೆಳಿಗ್ಗೆ 10 ಗಂಟೆಯಿಂದ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.


  ಸಂದರ್ಶನ ನಡೆಯುವ ಸ್ಥಳ:

  ಡೀನ್ (ಕೃಷಿ)
  ಕೃಷಿ ಮಹಾವಿದ್ಯಾಲಯ
  ಧಾರವಾಡ
  Published by:Latha CG
  First published: