• Home
  • »
  • News
  • »
  • jobs
  • »
  • Karnataka Jobs: ಸೈನಿಕ ಕಲ್ಯಾಣ ಇಲಾಖೆ ನೇಮಕಾತಿ- 13 SDA ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇವತ್ತೇ ಕೊನೆ ದಿನ

Karnataka Jobs: ಸೈನಿಕ ಕಲ್ಯಾಣ ಇಲಾಖೆ ನೇಮಕಾತಿ- 13 SDA ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇವತ್ತೇ ಕೊನೆ ದಿನ

ಬೇಗ ಅರ್ಜಿ ಸಲ್ಲಿಸಿ

ಬೇಗ ಅರ್ಜಿ ಸಲ್ಲಿಸಿ

ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, ಪಿಯುಸಿ ಪಾಸಾಗಿರಬೇಕು.

  • Share this:

    Sainik Welfare Department Karnataka Recruitment: ಕರ್ನಾಟಕ ಸೈನಿಕ ಕಲ್ಯಾಣ ಇಲಾಖೆ(Sainik Welfare Department Karnataka)ಯಲ್ಲಿ ಖಾಲಿ ಇರುವ 13 ದ್ವಿತೀಯ ದರ್ಜೆ ಸಹಾಯಕ (Second Division Assistant-SDA) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇವತ್ತು ಕೊನೆಯ ದಿನವಾಗಿದೆ. ಹೀಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಆಫ್​ಲೈನ್(Offline)​ ಮೂಲಕ ಅರ್ಜಿ ಹಾಕಿ. ಕರ್ನಾಟಕ ಸರ್ಕಾರದ ಉದ್ಯೋಗ ಮಾಡ ಬಯಸುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಸೈನಿಕ ಕಲ್ಯಾಣ ಇಲಾಖೆ
    ಹುದ್ದೆಯ ಹೆಸರುದ್ವಿತೀಯ ದರ್ಜೆ ಸಹಾಯಕ
    ಒಟ್ಟು ಹುದ್ದೆ13
    ವಿದ್ಯಾರ್ಹತೆSSLC, ಪಿಯುಸಿ
    ವೇತನಮಾಸಿಕ ₹ 21,400-42,000
    ಸ್ಥಳಕರ್ನಾಟಕ
    ಅರ್ಜಿ ಸಲ್ಲಿಕೆ ಬಗೆಆಫ್​ಲೈನ್​
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ18/10/2022
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ07/11/2022


    ಅರ್ಹತಾ ಮಾನದಂಡಗಳೇನು?
    ಕರ್ನಾಟಕ ಸೈನಿಕ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಎಸ್​ಡಿಎ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೆಲವೊಂದು ಅರ್ಹತಾ ಮಾನದಂಡಗಳನ್ನು ಹೊಂದಿರಬೇಕು. ಅವುಗಳು ಈ ಕೆಳಕಂಡಂತಿವೆ.


    ಇದನ್ನೂ ಓದಿ: Capgemini ಕಂಪನಿಯಲ್ಲಿ ಕೆಲಸ ಮಾಡುವ ಕನಸಿದೆಯಾ? ಇಲ್ಲಿ ಅರ್ಜಿ ಸಲ್ಲಿಸಿ


    ವಿದ್ಯಾರ್ಹತೆ:
    ಕರ್ನಾಟಕ ಸೈನಿಕ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಎಸ್​ಡಿಎ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, ಪಿಯುಸಿ ಪಾಸಾಗಿರಬೇಕು.


    ವಯೋಮಿತಿ:
    ಕರ್ನಾಟಕ ಸೈನಿಕ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಎಸ್​ಡಿಎ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ನವೆಂಬರ್ 07, 2022ಕ್ಕೆ ಗರಿಷ್ಠ 50 ವರ್ಷ ಮೀರಿರಬಾರದು.


    ವಯೋಮಿತಿ ಸಡಿಲಿಕೆ:
    ಕರ್ನಾಟಕ ಸೈನಿಕ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಎಸ್​ಡಿಎ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


    ಆಯ್ಕೆ ಪ್ರಕ್ರಿಯೆ:
    ಕನ್ನಡ ಭಾಷಾ ಪರೀಕ್ಷೆ
    ಸ್ಪರ್ಧಾತ್ಮಕ ಪರೀಕ್ಷೆ


    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.


    ಇದನ್ನೂ ಓದಿ: IISc Bangalore: ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಪ್ರಾಜೆಕ್ಟ್​ ಅಸಿಸ್ಟೆಂಟ್​ ಹುದ್ದೆಗಳಿಗೆ ಅರ್ಜಿ ಆಹ್ವಾನ


    ಮುಖ್ಯಸ್ಥರು
    ವಿಭಾಗೀಯ ನೇಮಕಾತಿ ಸಮಿತಿ
    ಸೈನಿಕರ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ
    #58, ಫೀಲ್ಡ್ ಮಾರ್ಷಲ್ ಕೆಎಂ ಕರಿಯಪ್ಪ ಭವನ
    ಫೀಲ್ಡ್ ಮಾರ್ಷಲ್ ಕೆಎಂ ಕರಿಯಪ್ಪ ರಸ್ತೆ
    ಬೆಂಗಳೂರು-560025


    ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್​ಸೈಟ್​ sainikwelfare.karnataka.gov.in ಗೆ ಭೇಟಿ ನೀಡಬಹುದು.


    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 18/10/2022
    ಅರ್ಜಿ ಸಲ್ಲಿಸಲು ಕೊನೆ ದಿನ: 07/11/2022

    Published by:Latha CG
    First published: