KAPL Recruitment 2022: ಕರ್ನಾಟಕ ಆ್ಯಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ (Karnataka Antibiotics and Pharmaceuticals Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು ಒಂದು ಅಸಿಸ್ಟೆಂಟ್ ಮ್ಯಾನೇಜರ್(Assistant Manager) ಹುದ್ದೆ ಖಾಲಿ ಇದೆ. ಅರ್ಹ ಅಭ್ಯರ್ಥಿಗಳು KAPLನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಜನವರಿ 13ರಿಂದ ರಿಂದ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕಡೆಯ ದಿನಾಂಕ ಜನವರಿ 31, 2022. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ kaplindia.com ಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ |
ಕರ್ನಾಟಕ ಆ್ಯಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ |
ಹುದ್ದೆಯ ಹೆಸರು |
ಅಸಿಸ್ಟೆಂಟ್ ಮ್ಯಾನೇಜರ್ |
ಒಟ್ಟು ಹುದ್ದೆಗಳು |
01 |
ವಿದ್ಯಾರ್ಹತೆ |
ಬಿ.ಫಾರ್ಮಾ, ಎಂ.ಫಾರ್ಮಾ |
ಉದ್ಯೋಗದ ಸ್ಥಳ |
ಬೆಂಗಳೂರು |
ವೇತನ |
ಮಾಸಿಕ ₹ 61,680 |
ಅರ್ಜಿ ಸಲ್ಲಿಸುವ ವಿಧಾನ |
ಆಫ್ಲೈನ್ |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ |
13/01/2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
31/01/2022 |
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 13/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/01/2022
ಇದನ್ನೂ ಓದಿ: Government Job: 6406 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ RDPR, ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಿ
ವಿದ್ಯಾರ್ಹತೆ:
ಕರ್ನಾಟಕ ಆ್ಯಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ನಿಂದ ಬಿ.ಫಾರ್ಮಾ, ಎಂ.ಫಾರ್ಮಾ ಪೂರ್ಣಗೊಳಿಸಿರಬೇಕು.
ಅನುಭವ:
ಅಭ್ಯರ್ಥಿಗಳು ಹೆಸರಾಂತ ಔಷಧ ತಯಾರಿಕಾ ಕಂಪನಿಯಲ್ಲಿ ಕನಿಷ್ಠ 5 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಅನುಭವ ಹೊಂದಿರಬೇಕು.
ಇದನ್ನೂ ಓದಿ: BSNL Recruitment 2022: ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ BSNL
ವಯೋಮಿತಿ:
ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ವಯಸ್ಸು ಕನಿಷ್ಠ 25 ವರ್ಷಗಳು ಮತ್ತು ಗರಿಷ್ಠ 40 ವರ್ಷ ಮೀರಿರಬಾರದು.
ವೇತನ:
ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ಮಾಸಿಕ ₹ 61,680 ವೇತನ ನೀಡಲಾಗುತ್ತದೆ.
ವಯೋಮಿತಿ ಸಡಿಲಿಕೆ:
ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ನಿಯಮಗಳ ಪ್ರಕಾರ ವರ್ಗಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
ಆಯ್ಕೆ ಪ್ರಕ್ರಿಯೆ
ಲಿಖಿತ ಪರೀಕ್ಷೆ
ಸಂದರ್ಶನ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ