BRBNMPL Recruitment 2021: ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ್ ಪ್ರೈವೇಟ್ ಲಿಮಿಟೆಡ್(Bharatiya Reserve Bank Note Mudran Private Limited ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 9 ಮ್ಯಾನೇಜರ್(Manager) ಹಾಗೂ ಡೆಪ್ಯುಟಿ ಮ್ಯಾನೇಜರ್(Deputy Manager) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕಡ್ಡಾಯವಾಗಿ ಬಿಇ(BE)/ಬಿ.ಟೆಕ್(B.Tech)/ಎಂ.ಟೆಕ್(M.Tech)/ಎಂ.ಇ(ME) ಮಾಡಿರಲೇಬೇಕು. ಅಕ್ಟೋಬರ್ 27ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆನ್ಲೈನ್ ಮೂಲಕ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ನವೆಂಬರ್ 19ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಇದೆ. ಬೆಂಗಳೂರಿನ ಕಚೇರಿಯಲ್ಲೇ ಉದ್ಯೋಗ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ್ ಪ್ರೈವೇಟ್ ಲಿಮಿಟೆಡ್ |
ಜಾಹೀರಾತು ಸಂಖ್ಯೆ | 1/2021 |
ಹುದ್ದೆಯ ಹೆಸರು | ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್ |
ಒಟ್ಟು ಹುದ್ದೆಗಳು | 09 |
ವಿದ್ಯಾರ್ಹತೆ | ಬಿಇ, ಬಿಟೆಕ್, ಎಂಟೆಕ್, ಎಂಇ |
ಉದ್ಯೋಗದ ಸ್ಥಳ | ಬೆಂಗಳೂರು |
ಸಂಬಳ | ಮಾಸಿಕ ₹ 1,26,000 |
ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ | 27/10/2021 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 19/11/2021 |
ಅರ್ಜಿ ಶುಲ್ಕ:
ಅಭ್ಯರ್ಥಿಗಳು 300 ರೂ.ಗಳನ್ನು ಅರ್ಜಿ ಶುಲ್ಕವನ್ನಾಗಿ ಪಾವತಿಸಬೇಕು. ಎಸ್ಸಿ, ಎಸ್ಟಿ, PWD, ಮಹಿಳಾ ಅಭ್ಯರ್ಥಿಗಳು ಹಾಗೂ ಮಾಜಿ ಸೈನಿಕರಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಇದನ್ನೂ ಓದಿ:Karnataka Jobs: ವಿಜಯಪುರ ಶ್ರೀ ಸಿದ್ದೇಶ್ವರ ಕೋ-ಆಪರೇಟಿವ್ ಬ್ಯಾಂಕ್ನಲ್ಲಿ ಮ್ಯಾನೇಜಿಂಗ್ ಡೈರೆಕ್ಟರ್ ಹುದ್ದೆ ಖಾಲಿ
ಹುದ್ದೆಯ ವಿವರ:
ಡೆಪ್ಯುಟಿ ಮ್ಯಾನೇಜರ್ : 06
ಮ್ಯಾಬೇಜರ್-ERP (ಕಾಂಟ್ರ್ಯಾಕ್ಟ್): 03
ವಿದ್ಯಾರ್ಹತೆ:
ಡೆಪ್ಯುಟಿ ಮ್ಯಾನೇಜರ್: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಂಪ್ಯೂಟರ್ ಸೈನ್ಸ್/ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್/ ಇನ್ಫರ್ಮೇಶನ್ ಟೆಕ್ನಾಲಜಿ ವಿಷಯದಲ್ಲಿ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಯ/ ಸಂಸ್ಥೆಯಿಂದ ಪ್ರಥಮ ಶ್ರೇಣಿಯಲ್ಲಿ ಬಿಇ/ಬಿಟೆಕ್ ಉತ್ತೀರ್ಣರಾಗಿರಬೇಕು.
ಮ್ಯಾನೇಜರ್: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂಜಿನಿಯರಿಂಗ್ನ ಯಾವುದೇ ವಿಷಯದಲ್ಲಿ ಪ್ರಥಮ ಶ್ರೇಣಿಯಲ್ಲಿ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ/ ಸಂಸ್ಥೆಯಿಂದ ಪದವಿ/ಸ್ನಾತಕೋತ್ತರ ಪದವಿ ಪಡೆದಿರಬೇಕು.
ಅನುಭವ:
ಡೆಪ್ಯುಟಿ ಮ್ಯಾನೇಜರ್: ಕನಿಷ್ಠ 5 ವರ್ಷ ಅನುಭವ
ಮ್ಯಾನೇಜರ್: ಕನಿಷ್ಠ 8 ವರ್ಷ ಅನುಭವ ಇರಬೇಕು.
ವಯೋಮಿತಿ:
ಡೆಪ್ಯುಟಿ ಮ್ಯಾನೇಜರ್: 30-45 ವರ್ಷ
ಮ್ಯಾನೇಜರ್: 35-50 ವರ್ಷ
ಇದನ್ನೂ ಓದಿ:Karnataka High Court: ತಿಂಗಳಿಗೆ ₹81,100 ಸಂಬಳ, ಹೈ ಕೋರ್ಟ್ನಲ್ಲಿ 150 ಟೈಪಿಸ್ಟ್ ಹುದ್ದೆಗಳು ಖಾಲಿ
ಸಂಬಳ:
ಡೆಪ್ಯುಟಿ ಮ್ಯಾನೇಜರ್: 7ನೇ ವೇತನ ಆಯೋಗದ ನಿಯಮಾನುಸಾರ
ಮ್ಯಾನೇಜರ್: ಮಾಸಿಕ ₹ 1, 26,000 ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ದಾಖಲಾತಿ ಪರಿಶೀಲನೆ
ಗುಂಪು ಚರ್ಚೆ/ ಸಂದರ್ಶನ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ