• Home
  • »
  • News
  • »
  • jobs
  • »
  • Karnataka Jobs: ತಿಂಗಳಿಗೆ 1.5 ಲಕ್ಷ ಸಂಬಳ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಉದ್ಯೋಗ

Karnataka Jobs: ತಿಂಗಳಿಗೆ 1.5 ಲಕ್ಷ ಸಂಬಳ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಉದ್ಯೋಗ

RDWSD

RDWSD

ಫೆಬ್ರವರಿ 11ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. ಫೆಬ್ರವರಿ 25 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

  • Share this:

RDWSD Karnataka Recruitment 2022: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕರ್ನಾಟಕ (Rural Drinking Water and Sanitation Department Karnataka) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಡೈರೆಕ್ಟರ್, ಸ್ಟೇಟ್​ ಟೆಕ್ನಿಕಲ್ ಕೋ-ಆರ್ಡಿನೇಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 11ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆಫ್​ಲೈನ್(Offline)​ ಮೂಲಕ ಅರ್ಜಿ ಸಲ್ಲಿಸಬೇಕು. ಫೆಬ್ರವರಿ 25 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್​​ಸೈಟ್​ english.swachhamevajayate.org ಗೆ ಭೇಟಿ ನೀಡಬಹುದು.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕರ್ನಾಟಕ
ಹುದ್ದೆಯ ಹೆಸರುಡೈರೆಕ್ಟರ್, ಸ್ಟೇಟ್​ ಟೆಕ್ನಿಕಲ್ ಕೋ-ಆರ್ಡಿನೇಟರ್
ಒಟ್ಟು ಹುದ್ದೆಗಳು02
ವಿದ್ಯಾರ್ಹತೆಸ್ನಾತಕೋತ್ತರ ಪದವಿ
ಉದ್ಯೋಗದ ಸ್ಥಳಬೆಂಗಳೂರು
ವೇತನಮಾಸಿಕ ₹ 1,30,000-1,50,000
ಅರ್ಜಿ ಸಲ್ಲಿಕೆ ಬಗೆಆಫ್​ ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ11/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ25/03/2022

ಹುದ್ದೆಯ ಮಾಹಿತಿ:
ಡೈರೆಕ್ಟರ್-1
ಸ್ಟೇಟ್​ ಟೆಕ್ನಿಕಲ್ ಕೋ-ಆರ್ಡಿನೇಟರ್-1


ಇದನ್ನೂ ಓದಿ: KPSC ನೇಮಕಾತಿ: 188 ಅಸಿಸ್ಟೆಂಟ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ತಿಂಗಳಿಗೆ ₹ 84,000 ಸಂಬಳ


ವಿದ್ಯಾರ್ಹತೆ:
ಡೈರೆಕ್ಟರ್-ವಿಜ್ಞಾನ/ಪರಿಸರ ವಿಜ್ಞಾನ/HRD/ಪರಿಸರ ಎಂಜಿನಿಯರಿಂಗ್/ನಿರ್ವಹಣೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.
ಸ್ಟೇಟ್​ ಟೆಕ್ನಿಕಲ್ ಕೋ-ಆರ್ಡಿನೇಟರ್-ವಿಜ್ಞಾನ/ಪರಿಸರ ವಿಜ್ಞಾನ/ಸೂಕ್ಷ್ಮಜೀವಶಾಸ್ತ್ರ/ಪರಿಸರ ಎಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.


ಅನುಭವ:
ಡೈರೆಕ್ಟರ್- ಅಭ್ಯರ್ಥಿಗಳು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ 15 ವರ್ಷಗಳ ಕಾಲ ಕೆಲಸ ಮಾಡಿದ ಅನುಭವ ಹೊಂದಿರಬೇಕು.
ಸ್ಟೇಟ್​ ಟೆಕ್ನಿಕಲ್ ಕೋ-ಆರ್ಡಿನೇಟರ್- ಅಭ್ಯರ್ಥಿಗಳು 10 ವರ್ಷಗಳ ಅನುಭವವನ್ನು ಹೊಂದಿರಬೇಕು.


ವಯೋಮಿತಿ:
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ಗರಿಷ್ಠ ವಯಸ್ಸು ಫೆಬ್ರವರಿ 11, 2022ಕ್ಕೆ 50 ವರ್ಷ ಇರಬೇಕು.


ವೇತನ:
ಡೈರೆಕ್ಟರ್- ಮಾಸಿಕ ₹ 1,50,000
ಸ್ಟೇಟ್​ ಟೆಕ್ನಿಕಲ್ ಕೋ-ಆರ್ಡಿನೇಟರ್-ಮಾಸಿಕ ₹ 1,30,000


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25/03/2022


ಇದನ್ನೂ ಓದಿ: Government Job: ಕರ್ನಾಟಕ ರಾಜ್ಯ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ 27 ಹುದ್ದೆಗಳಿಗೆ ಅರ್ಜಿ ಆಹ್ವಾನ


ಅರ್ಜಿ ಸಲ್ಲಿಸುವುದು ಹೇಗೆ?


ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.


ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.


ಆಯುಕ್ತರು
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ,
2ನೇ ಮಹಡಿ
'ಇ' ಬ್ಲಾಕ್, KHB ಕಾಂಪ್ಲೆಕ್ಸ್
ಕಾವೇರಿ ಭವನ
ಬೆಂಗಳೂರು - 560009

Published by:Latha CG
First published: