ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ(Karnataka State Khadi and Village Industries Board) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ, ಪ್ರಥಮ ದರ್ಜೆ ಸಹಾಯಕರು, ತಾಂತ್ರಿಕ ಮೇಲ್ವಿಚಾರಕರು, ತಾಂತ್ರಿಕ ಸಹಾಯಕರು ಹುದ್ದೆಗಳು ಖಾಲಿ ಇದ್ದು, ಇವುಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಆಯಾ ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆಯನ್ನು ಕೇಳಲಾಗಿದೆ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ |
ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ |
ಹುದ್ದೆಯ ಹೆಸರು |
ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ, ಪ್ರಥಮ ದರ್ಜೆ ಸಹಾಯಕರು, ತಾಂತ್ರಿಕ ಮೇಲ್ವಿಚಾರಕರು, ತಾಂತ್ರಿಕ ಸಹಾಯಕರು. |
ಒಟ್ಟು ಹುದ್ದೆಗಳು |
29 |
ವಿದ್ಯಾರ್ಹತೆ |
ಸ್ನಾತಕೋತ್ತರ ಪದವಿ, ಪದವಿ, ಡಿಪ್ಲೋಮಾ, ಐಟಿಐ |
ವಯೋಮಿತಿ |
18-38 ವರ್ಷ |
ಉದ್ಯೋಗದ ಸ್ಥಳ |
ಬೆಂಗಳೂರು |
ವೇತನ |
ಮಾಸಿಕ ₹23,000- ₹ 88,000 |
ಅರ್ಜಿ ಸಲ್ಲಿಸುವ ವಿಧಾನ |
ಆನ್ಲೈನ್ |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ |
25/10/2021 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
24/11/2021 |
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 25/10/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24/11/2021
ಇದನ್ನೂ ಓದಿ:Karnataka Jobs: ಧಾರವಾಡ ಕೃಷಿ ವಿವಿಯಲ್ಲಿ 74 ಹುದ್ದೆಗಳು ಖಾಲಿ, ತಿಂಗಳಿಗೆ ₹70,000 ಸಂಬಳ
ಹುದ್ದೆಯ ವಿವರ:
ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ- 2 ಹುದ್ದೆಗಳು
ಪ್ರಥಮ ದರ್ಜೆ ಸಹಾಯಕರು(FDA)- 9 ಹುದ್ದೆಗಳು
ತಾಂತ್ರಿಕ ಮೇಲ್ವಿಚಾರಕರು- 5 ಹುದ್ದೆಗಳು
ತಾಂತ್ರಿಕ ಸಹಾಯಕರು- 13 ಹುದ್ದೆಗಳು
ವಿದ್ಯಾರ್ಹತೆ:
- ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ- ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.
- ಪ್ರಥಮ ದರ್ಜೆ ಸಹಾಯಕರು(FDA)- ಯಾವುದೇ ಪದವಿ ಪಡೆದಿರಬೇಕು.
- ತಾಂತ್ರಿಕ ಮೇಲ್ವಿಚಾರಕರು- ಬಿಎಸ್ಸಿ ಅಥವಾ ಡಿಪ್ಲೋಮಾ ಪಾಸಾಗಿರಬೇಕು
- ತಾಂತ್ರಿಕ ಸಹಾಯಕರು- ಯಾವುದೇ ಟ್ರೇಡ್ನಲ್ಲಿ ಐಟಿಐ ಪಾಸಾಗಿರಬೇಕು.
ಅರ್ಜಿ ಶುಲ್ಕ:
- ಸಾಮಾನ್ಯ ವರ್ಗ/ ಹಿಂದುಳಿದ ವರ್ಗದ ಅಭ್ಯರ್ಥಿಗಳು 800 ರೂ. ಅರ್ಜಿ ಶುಲ್ಕ
ಪಾವತಿಸಬೇಕು.
- ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1/ ಮಾಜಿ ಸೈನಿಕ ಅಭ್ಯರ್ಥಿಗಳು 400 ರೂ. ಅರ್ಜಿ ಶುಲ್ಕ ಪಾವತಿಸಬೇಕು.
- ವಿಶೇಷ ಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಇದನ್ನೂ ಓದಿ:Mandya Anganwadi Recruitment 2021: ಮಂಡ್ಯದಲ್ಲಿ ಅಂಗನವಾಡಿ ಕಾರ್ಯಕರ್ತೆ & ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ವಯೋಮಿತಿ:
ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯಲ್ಲಿ ಖಾಲಿ ಇರುವ ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಅದೇ ರೀತಿ ಗರಿಷ್ಠ 38 ವರ್ಷ ಮೀರಿರಬಾರದು. ಸಾಮಾನ್ಯ ಅಭ್ಯರ್ಥಿಗೆ 35 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 38 ವರ್ಷ, ಎಸ್ಸಿ/ಎಸ್ಟಿ/ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ಆಯ್ಕೆ ಪ್ರಕ್ರಿಯೆ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ. ಬಳಿಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಅಧಿಕೃತ ವೆಬ್ಸೈಟ್
https://khadi.karnataka.gov.in/ ಗೆ ಭೇಟಿ ನೀಡಿ.
ಪರೀಕ್ಷಾ ಕೇಂದ್ರಗಳು:
ಬೆಂಗಳೂರು, ಮಂಗಳೂರು, ಮಂಡ್ಯ, ಮೈಸೂರು, ಶಿವಮೊಗ್ಗ, ಉಡುಪಿ, ಹುಬ್ಬಳ್ಳಿ, ಧಾರವಾಡ, ಕಲಬುರಗಿ, ಬೆಳಗಾವಿ, ದಾವಣಗೆರೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ