PU Lecturer Recruitment 2022: 778 ಪಿಯು ಉಪನ್ಯಾಸಕರ ನೇಮಕಾತಿ; ಶೀಘ್ರದಲ್ಲೇ ಹೊರಬೀಳಲಿದೆ ಅಧಿಸೂಚನೆ

PU Lecturer Recruitment 2022: ರಾಜ್ಯದ ವಿವಿಧ ಕಾಲೇಜುಗಳಲ್ಲಿ ಖಾಲಿ ಇರುವ ಸುಮಾರು 10 ವಿಷಯಗಳ 778 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಲಿದೆ.

ಬೇಗ ಅರ್ಜಿ ಸಲ್ಲಿಸಿ

ಬೇಗ ಅರ್ಜಿ ಸಲ್ಲಿಸಿ

  • Share this:
    ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ (Department of Pre-University Education)  ಶೀಘ್ರವೇ ಅಭ್ಯರ್ಥಿಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಿದೆ. ಈ ಮೂಲಕ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ರಾಜ್ಯದ ಕಾಲೇಜುಗಳಲ್ಲಿ ಖಾಲಿ ಇರುವ 778 ಉಪನ್ಯಾಸಕರ ಖಾಲಿ ಹುದ್ದೆಗಳನ್ನು ನೇರ ನೇಮಕಾತಿ ಮಾಡಲು ಸರ್ಕಾರದ ಪ್ರಧಾನ ಕಾರ್ಯದರ್ಶಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಈಗಾಗಲೇ ಅನುಮತಿ ನೀಡಿದ್ದು, ಶೀಘ್ರದಲ್ಲಿಯೇ ಅಧಿಸೂಚನೆ ಹೊರ ಬೀಳಲಿದೆ.

    ರಾಜ್ಯದ ವಿವಿಧ ಕಾಲೇಜುಗಳಲ್ಲಿ ಖಾಲಿ ಇರುವ ಸುಮಾರು 10 ವಿಷಯಗಳ 778 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಲಿದೆ.

    ಸಂಸ್ಥೆಯ ಹೆಸರು: ಪದವಿ ಪೂರ್ವ ಶಿಕ್ಷಣ ಇಲಾಖೆಯ
    ಹುದ್ದೆಯ ಹೆಸರು: ಪಿಯು ಉಪನ್ಯಾಸಕರು
    ಹುದ್ದೆಗಳ ಸಂಖ್ಯೆ: 778
    ಉದ್ಯೋಗ ಸ್ಥಳ: ಕರ್ನಾಟಕ
    ಸಂಬಳ: ನಿಯಮಗಳ ಪ್ರಕಾರ















































    ಹುದ್ದೆ ವಿಷಯಹುದ್ದೆ ಸಂಖ್ಯೆ
    ಕನ್ನಡ100
    ಇಂಗ್ಲೀಷ್120
    ಇತಿಹಾಸ120
    ಅರ್ಥಶಾಸ್ತ್ರ180
    ಭೂಗೋಳ20
    ವಾಣಿಜ್ಯ80
    ಸಮಾಜಶಾಸ್ತ್ರ75
    ರಾಜ್ಯಶಾಸ್ತ್ರ75
    ಮನೋವಿಜ್ಞಾನ2
    ಕಂಪ್ಯೂಟರ್ ಸೈನ್ಸ್6

    ಶೈಕ್ಷಣಿಕ ಅರ್ಹತೆ: ನೇಮಕಾತಿ ನಿಯಮ ಅನುಸಾರ ಅಭ್ಯರ್ಥಿಯು ಅಧಿಕೃತ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಸ್ನಾತಕೋತ್ತರ ಪದವಿ ಜೊತೆಗೆ - ಎರಡು ವರ್ಷದ ಬಿ.ಇಡ್​ ಶಿಕ್ಷಣ ಪಡೆದಿರಬೇಕು.



    ವಯೋಮಿತಿ: ನೇಮಕಾತಿ ನಿಯಮ ಅನುಸಾರ ಅಭ್ಯರ್ಥಿ ಕನಿಷ್ಟ 21 ವರ್ಷಗಳು ಮತ್ತು ಗರಿಷ್ಟ 40 ವರ್ಷಗಳ ವಯೋಮಿತಿ ಹೊಂದಿರಬೇಕು.

    ವಯೋಮಿತಿ ಸಡಿಲಿಕೆ
    ಪ.ಜಾ, ಪ. ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ: 5 ವರ್ಷ
    ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ : 3 ವರ್ಷ

    ಅರ್ಜಿ ಸಲ್ಲಿಕೆ: ಆನ್​ಲೈನ್​ ಮುಖಾಂತರ

    ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ಇದನ್ನು ಓದಿ: ಕೆಎಸ್​ಯುನಲ್ಲಿದೆ ಡೇಟಾ ಎಂಟ್ರಿ ಆಪರೇಟರ್ ಹುದ್ದೆ; ವಾಕ್​ ಇನ್​ನಲ್ಲಿ ಭಾಗಿಯಾಗಿ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಶೀಘ್ರದಲ್ಲೇ ಅಧಿಸೂಚನೆ ಹೊರಬೀಳಲಿದೆ
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಶೀಘ್ರದಲ್ಲೇ ಅಧಿಸೂಚನೆ ಹೊರಬೀಳಲಿದೆ

    ಪ್ರಮುಖ ಲಿಂಕ್​ಗಳು

    ಅಧಿಕೃತ ವೆಬ್‌ಸೈಟ್: pue.karnataka.gov.in

    ಅರ್ಜಿ ಸಲ್ಲಿಕೆ ವಿಧಾನ

    ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

    ಅಧಿಕೃತ ವೆಬ್​ಸೈಟ್​ ಮೂಲಕ ಅರ್ಜಿ ನಮೂನೆಯನ್ನು ಡೌನ್​ಲೋಡ್​ ಮಾಡಿ ಸ್ವಯಂ ದೃಢೀಕರಿಸಿದ ಅರ್ಜಿಗಳನ್ನು ಲಗತ್ತಿಸಿ

    ಅರ್ಜಿಜೊತೆಗೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.

    ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.

    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ
    Published by:Seema R
    First published: