Lecturer Recruitment: ಪಿಯು ಉಪನ್ಯಾಸಕರ ನೇಮಕಾತಿ; ಇಲ್ಲಿದೆ ಹುದ್ದೆಯ ಸಂಪೂರ್ಣ ಮಾಹಿತಿ

ಪ್ರಸಕ್ತ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ಸರ್ಕಾರಿ ಪಿಯುಸಿ ಕಾಲೇಜುಗಳಲ್ಲಿ ಖಾಲಿ ಇರುವ 778 ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುವುದಕ್ಕೆ ಸರ್ಕಾರ ಸೂಚಿಸಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
    ರಾಜ್ಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ (Department of Pre-University Education)  ಖಾಲಿ ಇರುವ ಬೋಧಕ ಹುದ್ದೆಗಳ ಭರ್ತಿಗೆ ಶಿಕ್ಷಣ ಇಲಾಖೆ ಮುಂದಾಗಿದೆ. ಈ ಸಂಬಂಧ ಆದೇಶ ಹೊರಡಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 10 ವಿಷಯಗಳಲ್ಲಿ 778 ಹುದ್ದೆಗಳ  ಭರ್ತಿಗೆ ಅತಿಥಿ ಉಪನ್ಯಾಸಕರ (Guest Lecture) ನೇಮಕ ಮಾಡಿಕೊಳ್ಳಲು ಮುಂದಾಗಿದ್ದು, ಶೀಘ್ರದಲ್ಲಿಯೇ ಈ ಸಂಬಂಧ ಅಧಿಸೂಚನೆ ಹೊರ ಬೀಳಲಿದೆ.

    ಪ್ರಸಕ್ತ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ಸರ್ಕಾರಿ ಪಿಯುಸಿ ಕಾಲೇಜುಗಳಲ್ಲಿ ಖಾಲಿ ಇರುವ 778 ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುವುದಕ್ಕೆ ಸರ್ಕಾರ ಸೂಚಿಸಿದೆ. ಈ ಸಂಬಂಧ ಶೀಘ್ರದಲ್ಲೇ ಅಧಿಸೂಚನೆ ಹೊರಬೀಳಲಿದೆ.



























    ಹುದ್ದೆ ವಿವರಹುದ್ದೆ ಮಾಹಿತಿ
    ಸಂಸ್ಥೆಯ ಹೆಸರುಪದವಿ ಪೂರ್ವ ಶಿಕ್ಷಣ ಇಲಾಖೆ
    ಹುದ್ದೆ:ಅತಿಥಿ ಉಪನ್ಯಾಸಕರು
    ಹುದ್ದೆಗಳ ಸಂಖ್ಯೆ778
    ಉದ್ಯೋಗ ಸ್ಥಳಕರ್ನಾಟಕ
    ವೇತನಪದವಿ ಪೂರ್ವ ಶಿಕ್ಷಣ ಇಲಾಖೆ ನಿಯಮ ಅನುಸಾರ

    ಶಿಕ್ಷಣ ಅರ್ಹತೆ: ಕಾಲೇಜು ಶಿಕ್ಷಣ ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ, ಎಂಫಿಲ್​, ಪಿಎಚ್​ಡಿ, ನೆಟ್​, ಕೆಸೆಟ್​, ಸ್ಲೆಟ್​ ಅನ್ನು ಪೂರ್ಣಗೊಳಿಸಿರಬೇಕು.



    ವಯೋಮಿತಿ: ಪದವಿ ಪೂರ್ವ ಶಿಕ್ಷಣ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಕನಿಷ್ಠ ವಯಸ್ಸು ಕಾಲೇಜು ಶಿಕ್ಷಣ ಇಲಾಖೆಯ ನೇಮಕಾತಿ ನಿಯಮಗಳ ಪ್ರಕಾರ ಇರಬೇಕು.

    ವಯೋಮಿತಿ ಸಡಿಲಿಕೆ: ಕಾಲೇಜು ಶಿಕ್ಷಣ ಇಲಾಖೆ ನಿಯಮಾವಳಿ ಪ್ರಕಾರ

    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ, ಮೆರಿಟ್ ಪಟ್ಟಿ ಮತ್ತು ಸಂದರ್ಶನ

    ಇದನ್ನು ಓದಿ: ಬೆಂಗಳೂರಿನ ದಾಸರಹಳ್ಳಿಯ ಶಾಲೆಯಲ್ಲಿದೆ ಶಿಕ್ಷಕರ ಹುದ್ದೆ; ಇಲ್ಲಿದೆ ಸಂಪೂರ್ಣ ಮಾಹಿತಿ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಶೀಘ್ರದಲ್ಲೇ ಅಧಿಸೂಚನೆ ಹೊರಬೀಳಲಿದೆ
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಶೀಘ್ರದಲ್ಲೇ ಅಧಿಸೂಚನೆ ಹೊರಬೀಳಲಿದೆ

    ಪ್ರಮುಖ ಲಿಂಕ್​ಗಳು

    ಅಧಿಕೃತ ವೆಬ್‌ಸೈಟ್: pue.karnataka.gov.in

    ಅರ್ಜಿ ಸಲ್ಲಿಕೆ ವಿಧಾನ

    ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

    ಅಧಿಕೃತ ವೆಬ್​ಸೈಟ್​ ಮೂಲಕ ಅರ್ಜಿ ನಮೂನೆಯನ್ನು ಡೌನ್​ಲೋಡ್​ ಮಾಡಿ ಸ್ವಯಂ ದೃಢೀಕರಿಸಿದ ಅರ್ಜಿಗಳನ್ನು ಲಗತ್ತಿಸಿ

    ಅರ್ಜಿಜೊತೆಗೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.

    ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.

    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ
    Published by:Seema R
    First published: