ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ (MGNREGA) ಓಂಬುಡ್ಸ್ಮನ್ ಮೇಲ್ಮನವಿ ಪ್ರಾಧಿಕಾರದ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (RDPR) ಅಡಿ ಈ ಉದ್ಯೋಗಕ್ಕೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಬೆಂಗಳೂರಿನಲ್ಲಿ ಉದ್ಯೋಗ ಸಲ್ಲಿಸಲು ಆಸಕ್ತಿಯಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಡಿ ಕರೆಯಲಾದ ಉದ್ಯೋಗದ ಕುರಿತ ಮಾಹಿತಿ
ಹುದ್ದೆ ಕುರಿತ ಮಾಹಿತಿ |
ವಿವರಗಳು |
ಹುದ್ದೆ ಹೆಸರು |
ಓಂಬುಡ್ಸ್ಮನ್ ಮೇಲ್ಮನವಿ ಪ್ರಾಧಿಕಾರದ ಹುದ್ದೆ |
ಹುದ್ದೆ ಸಂಖ್ಯೆ |
2 |
ಕಾರ್ಯ ನಿರ್ವಹಣೆ ಸ್ಥಳ |
ಬೆಂಗಳೂರು |
ವೇತನ |
ಮಾಸಿಕ 25 ಸಾವಿರ |
ಶೈಕ್ಷಣಿಕ ವಿವರ |
ಆರ್ಡಿಪಿಆರ್ ಕರ್ನಾಟಕ ನೇಮಕಾತಿ ನಿಯಮಗಳ ಅನುಸಾರ |
ಅನುಭವದ ವಿವರಗಳು
ಅಭ್ಯರ್ಥಿಗಳು ನಾಗರಿಕ ಸೇವೆಯಲ್ಲಿ 30 ವರ್ಷಗಳ ಅನುಭವವನ್ನು ಹೊಂದಿರಬೇಕು
ಅಭ್ಯರ್ಥಿಗಳು ಸಿವಿಲ್ ಸೊಸೈಟಿ ಸಂಸ್ಥೆಯಲ್ಲಿ 30 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು
ವಯೋಮಿತಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 31 ವರ್ಷ ಆಗಿದ್ದು. ಮೇ-2022 ರಂತೆ 66 ವರ್ಷಗಳು ಮೀರಿರಬಾರದು
ವಯೋಮಿತಿ ಸಡಿಲಿಕೆ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ ನಿಯಮಾವಳಿಗಳ ಪ್ರಕಾರ
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಆಯುಕ್ತರು, ಗ್ರಾಮೀಣಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಆಯೋಗ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, 5ನೇ ಮಹಡಿ, ಫ್ಲಾಟ್ ಸಂಖ್ಯೆ. 1234, K.S.I.I.D.C ಕಟ್ಟಡ, ಐಟಿ ಪಾರ್ಕ್, ಸೌತ್ ಬ್ಲಾಕ್, ಇವರಿಗೆ ಕಳುಹಿಸಬೇಕಾಗುತ್ತದೆ. ರಾಜಾಜಿನಗರ, ಇಂಡಸ್ಟ್ರಿಯಲ್ ಎಸ್ಟೇಟ್, ಬೆಂಗಳೂರು - 560044 ಈ ಅಂಚೆ ವಿಳಾಸಕ್ಕೆ ಮೇ 31ರ ಒಳಗೆ ತಲುಪಿಸತಕ್ಕದ್ದು.
ಇದನ್ನು ಓದಿ: ಸಹಾಯಕ ಕಮಿಷನರ್ ಹುದ್ದೆಗೆ ಅರ್ಜಿ ಹಾಕಿ - ತಿಂಗಳಿಗೆ 39 ಸಾವಿರ ಸಂಬಳ
ಪ್ರಮುಖ ದಿನಾಂಕಗಳು:
ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 06-05-2022
ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-ಮೇ-2022
RDPR ಕರ್ನಾಟಕ ಅಧಿಸೂಚನೆ ಪ್ರಮುಖ ಲಿಂಕ್ಗಳು
ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ:
ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್:
rdpr.karnataka.gov.in
ಇದನ್ನು ಓದಿ: 3614 ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಹಾಕಿ - ಬೇಗ ಅಪ್ಲೈ ಮಾಡಿ
ಅರ್ಜಿ ಸಲ್ಲಿಕೆ ವಿಧಾನ
- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ - ನೇಮಕಾತಿ ಲಿಂಕ್ ನೀಡಲಾಗಿದ್ದು, ಅದಕ್ಕೆ ಕ್ಲಿಕ್ ಮಾಡಬಹುದಾಗಿದೆ.
- ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ನೀಡಬೇಕು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಜೋಡಿಸಿಕೊಳ್ಳಿ.
- ಮೇಲಿನ ಲಿಂಕ್ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ).
ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ