• Home
  • »
  • News
  • »
  • jobs
  • »
  • Government Job: ಕರ್ನಾಟಕ ರಾಜ್ಯ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ 27 ಹುದ್ದೆಗಳಿಗೆ ಅರ್ಜಿ ಆಹ್ವಾನ

Government Job: ಕರ್ನಾಟಕ ರಾಜ್ಯ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ 27 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಫೆಬ್ರವರಿ 18ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್​ 10 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

  • Share this:

Karnataka State Forensic Science Laboratory Recruitment 2022: ಕರ್ನಾಟಕ ರಾಜ್ಯ ವಿಧಿವಿಜ್ಞಾನ ಪ್ರಯೋಗಾಲಯ(Karnataka State Forensic Science Laboratory) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 27 ಸೀನಿಯರ್ ಸೈಂಟಿಫಿಕ್ ಆಫೀಸರ್, ಅಸಿಸ್ಟೆಂಟ್ ಡೈರೆಕ್ಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 18ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್​ 10 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್​ಸೈಟ್​ fsl45p.ksp-online.in ಗೆ ಭೇಟಿ ನೀಡಬಹುದು.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಕರ್ನಾಟಕ ರಾಜ್ಯ ವಿಧಿವಿಜ್ಞಾನ ಪ್ರಯೋಗಾಲಯ
ಹುದ್ದೆಯ ಹೆಸರುಸೀನಿಯರ್ ಸೈಂಟಿಫಿಕ್ ಆಫೀಸರ್, ಅಸಿಸ್ಟೆಂಟ್ ಡೈರೆಕ್ಟರ್
ಒಟ್ಟು ಹುದ್ದೆಗಳು27
ವಿದ್ಯಾರ್ಹತೆಸ್ನಾತಕೋತ್ತರ ಪದವಿ, ಪಿಎಚ್​ಡಿ
ಉದ್ಯೋಗದ ಸ್ಥಳಬೆಂಗಳೂರು
ವೇತನನಿಯಮಾನುಸಾರ
ಅರ್ಜಿ ಸಲ್ಲಿಕೆ ಬಗೆ:ಆಫ್​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ18/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ10/03/2022


ಹುದ್ದೆಯ ಮಾಹಿತಿ:
ಡೆಪ್ಯುಟಿ ಡೈರೆಕ್ಟರ್-1
ಅಸಿಸ್ಟೆಂಟ್ ಡೈರೆಕ್ಟರ್-6
ಸೀನಿಯರ್ ಸೈಂಟಿಫಿಕ್ ಆಫೀಸರ್- 20


ಇದನ್ನೂ ಓದಿ: Anganwadi Jobs: ಮೈಸೂರಿನಲ್ಲಿ 151 ಅಂಗನವಾಡಿ ಕಾರ್ಯಕರ್ತೆ & ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ


ವಿದ್ಯಾರ್ಹತೆ:
ಡೆಪ್ಯುಟಿ ಡೈರೆಕ್ಟರ್-ಡಾಕ್ಟೋರೇಟ್
ಅಸಿಸ್ಟೆಂಟ್ ಡೈರೆಕ್ಟರ್-ಡಾಕ್ಟೋರೇಟ್
ಸೀನಿಯರ್ ಸೈಂಟಿಫಿಕ್ ಆಫೀಸರ್- ಸ್ನಾತಕೋತ್ತರ ಪದವಿ


ಅನುಭವ:


ಉಪ ನಿರ್ದೇಶಕರು: ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಉಪ ನಿರ್ದೇಶಕರಾಗಿ ಕನಿಷ್ಠ 05 ವರ್ಷಗಳ ಅನುಭವವನ್ನು ಹೊಂದಿರಬೇಕು.


ಸಹಾಯಕ ನಿರ್ದೇಶಕರು: ಅಭ್ಯರ್ಥಿಗಳು ಸರ್ಕಾರಿ ಮಾನ್ಯತೆ ಪಡೆದ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಸಹಾಯಕ ನಿರ್ದೇಶಕರಾಗಿ ಕನಿಷ್ಠ 05 ವರ್ಷಗಳ ಅನುಭವವನ್ನು ಹೊಂದಿರಬೇಕು.


ಹಿರಿಯ ವೈಜ್ಞಾನಿಕ ಅಧಿಕಾರಿ: ಅಭ್ಯರ್ಥಿಗಳು ಸರ್ಕಾರಿ ಮಾನ್ಯತೆ ಪಡೆದ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಹಿರಿಯ ವೈಜ್ಞಾನಿಕ ಅಧಿಕಾರಿಯಾಗಿ ಕನಿಷ್ಠ 05 ವರ್ಷಗಳ ಅನುಭವವನ್ನು ಹೊಂದಿರಬೇಕು.


ವಯೋಮಿತಿ:
ಕರ್ನಾಟಕ ರಾಜ್ಯ ವಿಧಿವಿಜ್ಞಾನ ಪ್ರಯೋಗಾಲಯದ ನೇಮಕಾತಿ ಅಧಿಸೂಚನೆ ಪ್ರಕಾರ, ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18-65 ವರ್ಷದೊಳಗಿರಬೇಕು.


ಇದನ್ನೂ ಓದಿ: KPSC ನೇಮಕಾತಿ: 188 ಅಸಿಸ್ಟೆಂಟ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ತಿಂಗಳಿಗೆ ₹ 84,000 ಸಂಬಳ


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 18/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10/03/2022


ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.


ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.


ಸದಸ್ಯ ಕಾರ್ಯದರ್ಶಿ & ನಿರ್ದೇಶಕರು
ಕರ್ನಾಟಕ ರಾಜ್ಯ ವಿಧಿವಿಜ್ಞಾನ ಪ್ರಯೋಗಾಲಯ, ಬೆಂಗಳೂರು
ಉಪ ನಿರ್ದೇಶಕರು, ಸಹಾಯಕ ನಿರ್ದೇಶಕರು, ಹಿರಿಯ ವೈಜ್ಞಾನಿಕ ಅಧಿಕಾರಿಗಳ ಗುತ್ತಿಗೆ ಹುದ್ದೆಗಳಿಗೆ ನೇಮಕಾತಿ ಸಮಿತಿ
ಮಡಿವಾಳ
ಬೆಂಗಳೂರು-560068

Published by:Latha CG
First published: