• Home
  • »
  • News
  • »
  • jobs
  • »
  • Karnataka Jobs: ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ 27 ಹುದ್ದೆಗಳಿಗೆ ಅರ್ಜಿ ಆಹ್ವಾನ- ಈಗಲೇ Apply ಮಾಡಿ

Karnataka Jobs: ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ 27 ಹುದ್ದೆಗಳಿಗೆ ಅರ್ಜಿ ಆಹ್ವಾನ- ಈಗಲೇ Apply ಮಾಡಿ

ವಿಧಿ ವಿಜ್ಞಾನ ಪ್ರಯೋಗಾಲಯ

ವಿಧಿ ವಿಜ್ಞಾನ ಪ್ರಯೋಗಾಲಯ

ಅರ್ಜಿ ಸಲ್ಲಿಸಲು ಡಿಸೆಂಬರ್ 7, 2022 ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಆಫ್​ಲೈನ್(Offline) ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಗುತ್ತಿಗೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.

  • News18 Kannada
  • Last Updated :
  • Bangalore [Bangalore], India
  • Share this:

    Karnataka State Forensic Science Laboratory Recruitment 2022: ಕರ್ನಾಟಕ ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯ(Karnataka State Forensic Science Laboratory) ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಒಟ್ಟು 27 ಹಿರಿಯ ವೈಜ್ಞಾನಿಕ ಅಧಿಕಾರಿ, ಸಹಾಯಕ ನಿರ್ದೇಶಕ, ಉಪ ನಿರ್ದೇಶಕ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಕರ್ನಾಟಕ ರಾಜ್ಯ ಸರ್ಕಾರದ ಹುದ್ದೆ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ(Bengaluru) ಉದ್ಯೋಗ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 7, 2022 ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಆಫ್​ಲೈನ್(Offline) ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಗುತ್ತಿಗೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.

    ಹುದ್ದೆಯ ಕುರಿತಾದ ಮಾಹಿತಿ ಇಲ್ಲಿದೆ:

    ಸಂಸ್ಥೆಕರ್ನಾಟಕ ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯ
    ಹುದ್ದೆಯ ಹೆಸರುಹಿರಿಯ ವೈಜ್ಞಾನಿಕ ಅಧಿಕಾರಿ, ಸಹಾಯಕ ನಿರ್ದೇಶಕ, ಉಪ ನಿರ್ದೇಶಕ
    ಒಟ್ಟು ಹುದ್ದೆ27
    ಉದ್ಯೋಗದ ಸ್ಥಳಬೆಂಗಳೂರು
    ವೇತನನಿಯಮಾನುಸಾರ


    ಪೋಸ್ಟ್​ ಆಧಾರಿತ ಎಷ್ಟೆಷ್ಟು ಹುದ್ದೆಗಳಿವೆ?


    ಉಪ ನಿರ್ದೇಶಕ- 1 ಹುದ್ದೆ
    ಸಹಾಯಕ ನಿರ್ದೇಶಕ- 6 ಹುದ್ದೆ
    ಹಿರಿಯ ವೈಜ್ಞಾನಿಕ ಅಧಿಕಾರಿ- 20 ಹುದ್ದೆ


    ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ ಏನಿರಬೇಕು?


    ಉಪ ನಿರ್ದೇಶಕ- ಡಾಕ್ಟೋರೇಟ್
    ಸಹಾಯಕ ನಿರ್ದೇಶಕ- ಡಾಕ್ಟೋರೇಟ್
    ಹಿರಿಯ ವೈಜ್ಞಾನಿಕ ಅಧಿಕಾರಿ- ಸ್ನಾತಕೋತ್ತರ ಪದವಿ


    ಇದನ್ನೂ ಓದಿ: Part Time ಟೀಚರ್ ಹುದ್ದೆಗಳಿಗೆ ಅರ್ಜಿ ಆಹ್ವಾನ- ತಿಂಗಳಿಗೆ 40,000 ಸಂಬಳ


    ಅನುಭವ ಎಷ್ಟು ವರ್ಷ ಇರಬೇಕು?


    ಉಪ ನಿರ್ದೇಶಕ- ಸರ್ಕಾರದ ಮಾನ್ಯತೆ ಪಡೆದ ಯಾವುದೇ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಕನಿಷ್ಠ 2 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು.


    ಸಹಾಯಕ ನಿರ್ದೇಶಕ- ಸರ್ಕಾರದ ಮಾನ್ಯತೆ ಪಡೆದ ಯಾವುದೇ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಕನಿಷ್ಠ 2 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು.


    ಹಿರಿಯ ವೈಜ್ಞಾನಿಕ ಅಧಿಕಾರಿ- ಸರ್ಕಾರದ ಮಾನ್ಯತೆ ಪಡೆದ ಯಾವುದೇ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಕನಿಷ್ಠ 2 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು.


    ಅಭ್ಯರ್ಥಿಗಳ ವಯಸ್ಸು ಎಷ್ಟಿರಬೇಕು?


    ಕರ್ನಾಟಕ ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯದ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 65 ವರ್ಷ ಮೀರಿರಬಾರದು.


    ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತೆ?


    ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆ ನೀಡಲಾಗುತ್ತದೆ. ಅದರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಲಾಗುತ್ತದೆ.


    ಪ್ರಮುಖ ದಿನಾಂಕಗಳು:


    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22/11/2022
    ಅರ್ಜಿ ಸಲ್ಲಿಸಲು ಕೊನೆ ದಿನ: 07/12/2022


    ಇದನ್ನೂ ಓದಿ: JOBS: ನೀವು M.Sc ಮಾಡಿದ್ದರೆ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿದೆ ಬಂಪರ್ ಉದ್ಯೋಗ-ಇಲ್ಲಿ Apply ಮಾಡಿ


    ಅರ್ಜಿ ಸಲ್ಲಿಸುವುದು ಹೇಗೆ?


    ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳಾದ ಐಡಿ ಪ್ರೂಫ್, ಶೈಕ್ಷಣಿಕ ದಾಖಲೆಗಳು, ಇತ್ತೀಚಿನ ಪಾಸ್​​ಪೋರ್ಟ್​ ಸೈಜ್ ಫೋಟೋ, ಅನುಭವ ಪ್ರತಿಯೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಡಿಸೆಂಬರ್ 7ರೊಳಗೆ ಪೋಸ್ಟ್ ಮುಖಾಂತರ ಕಳುಹಿಸಬೇಕು.


    ಸದಸ್ಯ ಕಾರ್ಯದರ್ಶಿ ಮತ್ತು ನಿರ್ದೇಶಕರು,
    ವಿಧಿ ವಿಜ್ಞಾನ ಪ್ರಯೋಗಾಲಯ, ಬೆಂಗಳೂರು,
    ಉಪ ನಿರ್ದೇಶಕರು, ಸಹಾಯಕ ನಿರ್ದೇಶಕರು ಮತ್ತು ಹಿರಿಯ ವೈಜ್ಞಾನಿಕ ಅಧಿಕಾರಿಗಳ ಗುತ್ತಿಗೆ ಹುದ್ದೆಗಳಿಗೆ ನೇಮಕಾತಿ ಸಮಿತಿ,
    ಮಡಿವಾಳ,
    ಬೆಂಗಳೂರು-560068

    Published by:Latha CG
    First published: