KSP Recruitment 2021: 3533 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ

ಪೊಲೀಸ್ ಕಾನ್ಸ್‌ಟೇಬಲ್  ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪಿಯುಸಿ, ಇಂಟರ್‌ಮೀಡಿಯೇಟ್ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

KSP

KSP

  • Share this:
    ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3533 ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಜುಲೈ 12,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿ ತಿಳಿಸಿದೆ.

    ವಿದ್ಯಾರ್ಹತೆ: ಪೊಲೀಸ್ ಕಾನ್ಸ್‌ಟೇಬಲ್  ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪಿಯುಸಿ, ಇಂಟರ್‌ಮೀಡಿಯೇಟ್ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ವಯೋಮಿತಿ: ಈ ಹುದ್ದೆಗಳಿಗೆ ಕನಿಷ್ಟ 19 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಲ್ಲಿಸಬಹುದು.

    ಪ.ಜಾ, ಪ.ಪಂ, ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಲ್ಲಿಸಬಹುದು.

    ಬುಡಕಟ್ಟು ಜನಾಂಗ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ವೇತನ:

    ನೇಮಕಾತಿಯ ಅನುಸಾರ ಪೊಲೀಸ್ ಕಾನ್ಸ್‌ಟೇಬಲ್  ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,500 ರಿಂದ 47,650ರೂಗಳ ವರೆಗೆ ವೇತನವನ್ನು ನೀಡಲಾಗುವುದು.

    ಆಯ್ಕೆ ಪ್ರಕ್ರಿಯೆ ಹೇಗೆ?:

    ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾರ್ಢ್ಯತೆ ಪರೀಕ್ಷೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

    ಅರ್ಜಿ ಶುಲ್ಕ:

    -ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು 400ರೂ

    -ಪ.ಜಾ, ಪ.ಪಂ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳು 200ರೂ ಪಾವತಿಸಬೇಕು

    ಅರ್ಜಿ ಶುಲ್ಕವನ್ನು ನಗದು/ಆನ್‌ಲೈನ್ ರೂಪದಲ್ಲಿ ಸ್ಥಳೀಯ ಅಂಚೆ ಕಚೇರಿಗಳಲ್ಲಿ ಅಥವಾ ಹೆಚ್.ಡಿ.ಎಫ್.ಸಿ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ಪಾವತಿಸಿ ನಂತರ  ಅಭ್ಯರ್ಥಿ ಪ್ರತಿಯನ್ನು ಇಟ್ಟುಕೊಂಡಿರತಕ್ಕದ್ದು. ಅರ್ಜಿ ಶುಲ್ಕವನ್ನು ಪಾವತಿಸಲು ಜುಲೈ 14,2021 ಕೊನೆಯ ದಿನವಾಗಿರುತ್ತದೆ.

    ಅರ್ಜಿ ಸಲ್ಲಿಸುವುದು ಹೇಗೆ?:  ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್ https://recruitment.ksp.gov.in/index ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅರ್ಜಿ ಶುಲ್ಕವನ್ನು ಪಾವತಿಸಬೇಕು.
    Published by:Harshith AS
    First published: