KSP Recruitment 2021: 4000 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಪಿಯುಸಿ ಆದರಿಗೆ ಅವಕಾಶ!

Karnataka State Police recruitment 2021: ಪೊಲೀಸ್ ಕಾನ್ಸ್‌ಟೇಬಲ್ (Civil) ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಪಿಯುಸಿ ಇಂಟರ್‌ಮೀಡಿಯೇಟ್ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಕರ್ನಾಟಕ ರಾಜ್ಯ ಪೊಲೀಸ್

ಕರ್ನಾಟಕ ರಾಜ್ಯ ಪೊಲೀಸ್

  • Share this:
    ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 4000 ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೇರ ನೇಮಕಾತಿ ಮೂಲಕ ಆಸಕ್ತ ಅಭ್ಯರ್ಥಿಗಳು ಅರ್ಜಿಸಲ್ಲಿಸಬಹುದಾಗಿದ್ದು, ಮೇ 25, 2021 ರಿಂದ ಜೂನ್ 25, 2021ರೊಳಗೆ ಅರ್ಜಿಯನ್ನು ಸಲ್ಲಿಸಲು ದಿನಾಂಕ ನಿಗದಿಪಡಿಸಿದೆ.

    ವಿದ್ಯಾರ್ಹತೆ: ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಪಿಯುಸಿ ಇಂಟರ್‌ಮೀಡಿಯೇಟ್ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ವಯೋಮಿತಿ: ಕನಿಷ್ಟ 19 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು, ಪ.ಜಾ, ಪ.ಪಂ, ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಸಲ್ಲಿಸಬಹುದಾಗಿದೆ.

    ವೇತನ: ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ಅನುಸಾರವಾಗಿ ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,500 ರಿಂದ 47,650 ರೂಗಳ ವರೆಗೆ ವೇತನವನ್ನು ನೀಡಲಾಗುವುದು.

    ಆಯ್ಕೆ ಪ್ರಕ್ರಿಯೆ ಹೇಗೆ?:  ಲಿಖಿತ ಪರೀಕ್ಷೆ, ದೇಹದಾರ್ಢ್ಯತೆ, ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

    ಅರ್ಜಿ ಶುಲ್ಕ:

    -ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು 400ರೂ ನೀಡಬೇಕು.

    -ಪ.ಜಾ, ಪ.ಪಂ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳು 200ರೂ ನೀಡಬೇಕು.

    -ಅರ್ಜಿ ಶುಲ್ಕವನ್ನು ನಗದು/ಆನ್‌ಲೈನ್ ರೂಪದಲ್ಲಿ ಸ್ಥಳೀಯ ಅಂಚೆ ಕಚೇರಿಗಳಲ್ಲಿ ಅಥವಾ ಹೆಚ್.ಡಿ.ಎಫ್.ಸಿ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ಪಾವತಿಸಿ ನಂತರ ಚಲನ್ ನ ಪ್ರತಿಯನ್ನು ಇಟ್ಟುಕೊಂಡಿರತಕ್ಕದ್ದು. ಜೂನ್ 28, ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನವಾಗಿರುತ್ತದೆ.

    ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್ https://recruitment.ksp.gov.in/index ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಬೇಕು. ನಂತರ  ಅರ್ಜಿ ಶುಲ್ಕವನ್ನು ಆನ್​ಲೈನ್​ ಅಥವಾ ನಗದು ರೂಪದಲ್ಲಿ ಪಾವತಿಸಬೇಕು. ಜೂನ್ 25,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.
    First published: