KSP Recruitment 2021: 84 ವೈಜ್ಞಾನಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ; ಪದವಿ ವಿದ್ಯಾರ್ಹತೆ ಪಡೆದವರಿಗೆ ಅವಕಾಶ!

karnataka state police Recruitment 2021: ಪೋಸ್ಟ್ ಗ್ರಾಜುಯೇಟ್, ಎಂ.ಎಸ್ಸಿ ಎಂ.ಟೆಕ್, ಡಿಪ್ಲೋಮಾ ಮತ್ತು ಪದವಿ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ

JOB

JOB

  • Share this:
    ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 84 ವೈಜ್ಞಾನಿಕ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 7,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

    ವೈಜ್ಞಾನಿಕ ಅಧಿಕಾರಿಗಳ ಆಯ್ಕೆ ಸಮಿತಿಯ ಅಧ್ಯಕ್ಷರು ಮತ್ತು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು ಕರ್ನಾಟಕ ರಾಜ್ಯ ನ್ಯಾಯ ವಿಜ್ಞಾನ ಪ್ರಯೋಗಾಲಯ, ಮಡಿವಾಳ, ಬೆಂಗಳೂರು ಮತ್ತು ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯಗಳಲ್ಲಿ ಖಾಲಿ ಇರುವ ಮಿಕ್ಕುಳಿದ ವೃಂದದ 84 ವೈಜ್ಞಾನಿಕ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

    ವಿದ್ಯಾರ್ಹತೆ: ಪೋಸ್ಟ್ ಗ್ರಾಜುಯೇಟ್, ಎಂ.ಎಸ್ಸಿ ಎಂ.ಟೆಕ್, ಡಿಪ್ಲೋಮಾ ಮತ್ತು ಪದವಿ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ

    ವಯೋಮಿತಿ: ಹುದ್ದೆಗಳ  ಅನ್ವಯ ಕನಿಷ್ಟ 21 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    -ಪ.ಜಾ/ಪ.ಪಂ/ಪ್ರ-1ರ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರ-2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

    ವೇತನ: ವೈಜ್ಞಾನಿಕ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,900 ರಿಂದ 78,200ರೂ.ಗಳ ವರೆಗೆ ವೇತನವನ್ನು ನೀಡಲಾಗುವುದು.

    ಆಯ್ಕೆ ಪ್ರಕ್ರಿಯೆ:  ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಅರ್ಜಿ ಶುಲ್ಕ ಪಾವತಿಸುವುದು ಹೇಗೆ?:

    ಅರ್ಜಿದಾರರು 250 ರೂ ಮತ್ತು ಪ.ಜಾ/ಪ.ಪಂ/ಪ್ರ ಅಭ್ಯರ್ಥಿಗಳು 100ರೂ ಅರ್ಜಿ ಶುಲ್ಕವನ್ನು ಸ್ಥಳೀಯ ಅಂಚೆ ಕಚೇರಿಗಳಲ್ಲಿ ಅಥವಾ ಹೆಚ್‌.ಡಿ.ಎಫ್‌.ಸಿ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ಆನ್‌ಲೈನ್/ನಗದು ರೂಪದಲ್ಲಿ ಪಾವತಿಸಬೇಕು. ಜುಲೈ 9,2021ರೊಳಗೆ ಪಾವತಿಸಬೇಕಿರುತ್ತದೆ. ಅಭ್ಯರ್ಥಿಗಳು ಚಲನ್ ನ 'ಅಭ್ಯರ್ಥಿ ಪ್ರತಿ" ಯನ್ನು ಇಟ್ಟುಕೊಲ್ಲಬೇಕು.

    ಅರ್ಜಿ ಸಲ್ಲಿಸಉವುದು ಹೇಗೆ?:

    ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://recruitment.ksp.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ಮಾಹಿತಿಯನ್ನು ಓದಿ ನಂತರ ಭರ್ತಿ ಮಾಡಬೇಕು.  ಜುಲೈ 7,2021ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
    First published: