• ಹೋಂ
  • »
  • ನ್ಯೂಸ್
  • »
  • Jobs
  • »
  • KEA Recruitment: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ 32 ಹುದ್ದೆಗಳಿಗೆ ನೇಮಕಾತಿ; ಪದವಿ ಆಗಿದ್ರೆ ಅರ್ಜಿ ಸಲ್ಲಿಸಿ

KEA Recruitment: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ 32 ಹುದ್ದೆಗಳಿಗೆ ನೇಮಕಾತಿ; ಪದವಿ ಆಗಿದ್ರೆ ಅರ್ಜಿ ಸಲ್ಲಿಸಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ರಾಜ್ಯ ಸರ್ಕಾರದ ಈ ಹುದ್ದೆಯ ನೇಮಕಾತಿ, ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಕೆ ಸೇರಿದಂತೆ ಇನ್ನಿತರ ವಿವರಗಳು ಈ ಕೆಳಗಿನಂತಿದೆ. 

  • Share this:

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ( Karnataka Examinations Authority) ಮೂಲಕ ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತದಲ್ಲಿರುವ ಖಾಲಿ ಇರುವ 32 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅಸಿಸ್ಟೆಂಟ್ ಮ್ಯಾನೇಜರ್, ಜೂನಿಯರ್ ಅಸಿಸ್ಟೆಂಟ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆನ್​ಲೈನ್​ ಮೂಲಕ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 20 ಆಗಿದೆ.


ರಾಜ್ಯ ಸರ್ಕಾರದ ಈ ಹುದ್ದೆಯ ನೇಮಕಾತಿ, ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಕೆ ಸೇರಿದಂತೆ ಇನ್ನಿತರ ವಿವರಗಳು ಈ ಕೆಳಗಿನಂತಿದೆ.


ಸಂಸ್ಥೆಯ ಹೆಸರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)
ಹುದ್ದೆಯ ಹೆಸರು: ಅಸಿಸ್ಟೆಂಟ್ ಮ್ಯಾನೇಜರ್, ಜೂನಿಯರ್ ಅಸಿಸ್ಟೆಂಟ್
ಹುದ್ದೆಗಳ ಸಂಖ್ಯೆ: 32
ಉದ್ಯೋಗ ಸ್ಥಳ: ಬೆಂಗಳೂರು
ವೇತನ: 21400-78200 ರೂ  ಪ್ರತಿ ತಿಂಗಳು

ಹುದ್ದೆಹುದ್ದೆಗಳ ಸಂಖ್ಯೆವಿದ್ಯಾರ್ಹತೆವೇತನ
ಸಹಾಯಕ ವ್ಯವಸ್ಥಾಪಕರು (ಕಾರ್ಯಾಚರಣೆ)19ಬಿಎಸ್ಸಿ(ಅಗ್ರಿಕಲ್ಕರ್)40900-78200 ರೂ ಮಾಸಿಕ
ಹಿರಿಯ ಸಹಾಯಕರು1ಬಿಕಾಂ, ಬಿಬಿಎಂ, ಟ್ಯಾಲಿ ಸರ್ಟಿಫಿಕೇಟ್​​27650-52650 ರೂ ಮಾಸಿಕ
ಕಿರಿಯ ಸಹಾಯಕರು9ಬಿಕಾಂ, ಬಿಬಿಎಂ, ಟ್ಯಾಲಿ ಸರ್ಟಿಫಿಕೇಟ್​​21400-42000 ರೂ ಮಾಸಿಕ
ಬೀಜ ಸಹಾಯಕರು6ಡಿಪ್ಲೊಮಾ(ಅಗ್ರಿಕಲ್ಕರ್​​)21400-42000 ರೂ ಮಾಸಿಕ

ವಯೋಮಿತಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 20-ಜುಲೈ-2022 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.


ವಯಸ್ಸಿನ ಸಡಿಲಿಕೆ:
ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಪ್ರವರ್ಗ 1  ಅಭ್ಯರ್ಥಿಗಳು: 05 ವರ್ಷಗಳು
ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: 03 ವರ್ಷಗಳು


ಇದನ್ನು ಓದಿ: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ 57 ಹುದ್ದೆಗಳಿಗೆ ಅರ್ಜಿ ಆಹ್ವಾನ; ಬಿಇ, ಡಿಪ್ಲೊಮಾ ಆದವರಿಗೆ ಅವಕಾಶ


ಅರ್ಜಿ ಶುಲ್ಕ:
ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಪ್ರವರ್ಗ 1, ವಿಕಲಚೇತನ, ನಿವೃತ್ತ ಸೇನಾಧಿಕಾರಿ ಅಭ್ಯರ್ಥಿಗಳು: 250 ರೂ
ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: 500 ರೂ
ಸಾಮಾನ್ಯ ಅಭ್ಯರ್ಥಿಗಳು: 750ರೂ


ಪಾವತಿ ವಿಧಾನ: ಆನ್‌ಲೈನ್


ಆಯ್ಕೆ ಪ್ರಕ್ರಿಯೆ:
ಮೆರಿಟ್ ಪಟ್ಟಿ, ಲಿಖಿತ ಪರೀಕ್ಷೆ ಮತ್ತು ಸಂದರ್ಶನ


ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 22 ಜೂನ್​ 2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20 ಜುಲೈ 2022
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 25 ಜುಲೈ 2022


ಇದನ್ನು ಓದಿ: ಬೆಳಗಾವಿಯ ಎಚ್​ಎಲ್​ಎಲ್​​ ಲೈಫ್​ಕೇರ್​​ನಲ್ಲಿ ಟ್ರೈನಿಗಳ ನೇಮಕಾತಿ; SSLC, ITI ಆಗಿದ್ರೆ ನೋಡಿ


ಪ್ರಮುಖ ಲಿಂಕ್‌ಗಳು
ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆಯೂ ಜೂನ್​ 22ರ ನಂತರ ಮಾತ್ರ ಸಾಧ್ಯ
ಅಧಿಕೃತ ವೆಬ್‌ಸೈಟ್: kea.kar.nic.in


ಅರ್ಜಿ ಸಲ್ಲಿಕೆ ವಿಧಾನ


-ಕೆಇಎ ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.
-ಅರ್ಜಿ ಸಲ್ಲಿಕೆಗೆ ನಾಲ್ಕು ಹಂತಗಳಿವೆ ಮೊದಲನೆ ಹಂತದಲ್ಲಿ ನಿಮ್ಮ ಹೆಸರು ವಿಳಾಸ, ಮೊಬೈಲ್​ಸಂಖ್ಯೆ, ಇಮೇಲ್​ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ ಸೇರಿದ ವಿವರ ಭರ್ತಿ ಮಾಡಬೇಕು.
-ಎರಡನೇ ಹಂತದಲ್ಲಿ ಅಭ್ಯರ್ಥಿಯ ಭಾವಚಿತ್ರ, ಸಹಿ ಸೇರಿದಂತೆ ಇನ್ನಿತರ ಅಗತ್ಯ ಅಂಶಗಳ ವಿವರವನ್ನು ನೀಡಬೇಕು.
-ಮೂರನೇ ಹಂತದಲ್ಲಿ ಅರ್ಜಿ ಶುಲ್ಕ ವಿವರಗಳನ್ನು ಭರ್ತಿ ಮಾಡಬೇಕು.
ಕಡೆಯದಾಗಿ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅಪ್ಲಿಕೇಶನ್ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಪ್ರಿಂಟ್ ಅನ್ನು ತೆಗೆದುಕೊಳ್ಳಬೇಕು.

First published: