KHPT Recruitment: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್​ನಲ್ಲಿದೆ ಸಮುದಾಯ ಸಂಯೋಜಕ ಹುದ್ದೆ; ಬೇಗ ಅರ್ಜಿ ಸಲ್ಲಿಸಿ​

ವಿಶ್ವವಿದ್ಯಾಲಯಗಳಿಂದ ಸಮಾಜ ಕಾರ್ಯ, ಸಮಾಜಶಾಸ್ತ್ರ, ಸಾರ್ವಜನಿಕ ಆರೋಗ್ಯದಲ್ಲಿ ಪದವಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್

  • Share this:
    ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್​ನಲ್ಲಿ (Karnataka Health Promotion Trust) ಕಮ್ಯೂನಿಟಿ ಕೋ ಆರ್ಡಿನೇಟರ್​ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರಿನಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈಗಾಗಲೇ ಎನ್​ಜಿಒ, ಆರೋಗ್ಯ ವಲಯದಲ್ಲಿ ಕೆಲಸ ಮಾಡಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಿ. ಈ ಹುದ್ದೆಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 10 ಆಗಿದೆ.

    ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.



























    ಹುದ್ದೆ ಮಾಹಿತಿಹುದ್ದೆ ವಿವರ
    ಸಂಸ್ಥೆಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT)
    ಹುದ್ದೆಕಮ್ಯುನಿಟಿ ಕೋ- ಆರ್ಡಿನೇಟರ್​​
    ಹುದ್ದೆಗಳ ಸಂಖ್ಯೆ17
    ಉದ್ಯೋಗ ಸ್ಥಳಬೆಂಗಳೂರು
    ವೇತನಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ಮಾನದಂಡಗಳ ಪ್ರಕಾರ

    ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸಮಾಜ ಕಾರ್ಯ, ಸಮಾಜಶಾಸ್ತ್ರ, ಸಾರ್ವಜನಿಕ ಆರೋಗ್ಯದಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.

    ವಯಸ್ಸಿನ ಮಿತಿ: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು

    ಆಯ್ಕೆ ಪ್ರಕ್ರಿಯೆ
    ಅನುಭವ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನ

    ಹುದ್ದೆ ಜವಾಬ್ದಾರಿ
    ಔಪಚಾರಿಕ, ಅನೌಪಚಾರಿಕ ಮತ್ತು ಸಾಂಪ್ರದಾಯಿಕ ಸಮುದಾಯ ನೆಟ್‌ವರ್ಕ್‌ಗಳನ್ನು ಗುರುತಿಸುವುದು ಮತ್ತು ಶಾರ್ಟ್‌ಲಿಸ್ಟ್ ಮಾಡುವುದು
    ಸಮಾಲೋಚನೆ, ತರಬೇತಿ ಮತ್ತು ಮಾರ್ಗದರ್ಶನವನ್ನು ನಡೆಸುವುದು
    ಆರೋಗ್ಯ ಮತ್ತು ಟಿಬಿ, ಸಮುದಾಯದ ಪಾತ್ರ, ರೋಗಿಗಳ ಅಗತ್ಯತೆಗಳು ಅರಿತು ಅವರ ಸಂಪರ್ಕ ಮಾಡುವುದು.
    ಕ್ಷಯ ರೋಗದ ವಿರುದ್ಧ ಹೋರಾಟ ನಡೆಸಲು ನಾತ್ಮಕ ಸಂದೇಶವನ್ನು ಉತ್ತೇಜಿಸಲು ಪ್ರಚಾರಗಳು. ಈವೆಂಟ್‌ ನಡೆಸುವುದು.

    ಇದನ್ನು ಓದಿ: ಎಸ್​ಬಿಐನಲ್ಲಿ 665 ಹುದ್ದೆಗೆ ಅರ್ಜಿ ಆಹ್ವಾನ: ಬ್ಯಾಂಕಿಂಗ್​ ಕ್ಷೇತ್ರದಲ್ಲಿ ಭರ್ಜರಿ ಅವಕಾಶ

    ಅರ್ಜಿ ಸಲ್ಲಿಕೆ : ಇಮೇಲ್​ ಮೂಲಕ

    ಇಮೇಲ್​ ವಿಳಾಸ:  jobs@khpt.org

    ಪ್ರಮುಖ ದಿನಾಂಕ

    ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 30 ಆಗಸ್ಟ್​​ 2022
    ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 10 ಸೆಪ್ಟೆಂಬರ್​​ 2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: khpt.org

    ಇದನ್ನು ಓದಿ: ಭಾರತೀಯ ಆಹಾರ ನಿಗಮದಲ್ಲಿ ಭರ್ಜರಿ ನೇಮಕಾತಿ; 5043 ಹುದ್ದೆಗೆ ಅರ್ಜಿ ಆಹ್ವಾನ

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    -ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ಇತ್ಯಾದಿ ದಾಖಲೆಗಳನ್ನು ಅರ್ಜಿಯಲ್ಲಿ ದಾಖಲಿಸಿ

    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಮೇಲಿನ ಇಮೇಲ್​ ವಿಳಾಸಕ್ಕೆ ನಿಗದಿತ ದಿನಾಂಕಕ್ಕೆ ಮುನ್ನ ಕಳುಹಿಸಿ
    Published by:Seema R
    First published: