Jobs in KHPT: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್​ನಲ್ಲಿದೆ ಉದ್ಯೋಗ; ಇಲ್ಲಿದೆ ಹುದ್ದೆ ವಿವರ

ಆರೋಗ್ಯ ವಿಚಾರ ಸಂಬಂಧ ಕುಟುಂಬ ಮತ್ತು ರೋಗಿಗಳ ಸಮಾಲೋಚಕರಾಗಿ ಕಾರ್ಯ ನಿರ್ವಹಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್

  • Share this:
    ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್​ನಲ್ಲಿ (Karnataka Health Promotion Trust) ಟೆಲಿ ಕೌನ್ಸಿಲರ್ (Tele Counsellors)​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಧಾರವಾಡ ಮತ್ತು ಕಲಬುರಗಿಯಲ್ಲಿ ಕಾರ್ಯ ನಿರ್ವಹಿಸಲು ಆಸಕ್ತಿ ಹೊಂದಿರುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಆರೋಗ್ಯ ವಿಚಾರ ಸಂಬಂಧ ಕುಟುಂಬ ಮತ್ತು ರೋಗಿಗಳ ಸಮಾಲೋಚಕರಾಗಿ ಕಾರ್ಯ ನಿರ್ವಹಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 27 ಆಗಿದೆ.

    ಧಾರವಾಡದಲ್ಲಿ 7 ಮತ್ತು ಕಲಬುರ್ಗಿಯಲ್ಲಿ ಒಟ್ಟು 10 ಹುದ್ದೆಗಳು ಖಾಲಿ ಇವೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.



























    ಹುದ್ದೆ ಮಾಹಿತಿಹುದ್ದೆ ವಿವರ
    ಸಂಸ್ಥೆಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT)
    ಹುದ್ದೆಟೆಲಿ ಕೌನ್ಸಿಲರ್ಸ್
    ಹುದ್ದೆಗಳ ಸಂಖ್ಯೆ17
    ಉದ್ಯೋಗ ಸ್ಥಳಧಾರವಾಡ-ಕಲಬುರಗಿ
    ವೇತನಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ಮಾನದಂಡಗಳ ಪ್ರಕಾರ

    ಶೈಕ್ಷಣಿಕ ಅರ್ಹತೆ: ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಮನೋವಿಜ್ಞಾನ/ಸಮಾಜ ಕೆಲಸದಲ್ಲಿ ಪದವಿ, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

    ಇದನ್ನು ಓದಿ: ಗ್ರೂಪ್​ 'ಸಿ' ಸಿವಿಲಿಯನ್ ಹುದ್ದೆ ಭರ್ತಿಗೆ ಅಧಿಸೂಚನೆ ಪ್ರಕಟಣೆ; 10ನೇ ತರಗತಿ ಆಗಿದ್ರೆ ಅರ್ಜಿ ಸಲ್ಲಿಸಿ

    ವಿಶೇಷ ಸೂಚನೆ:
    ಕಾಲ್ ಸೆಂಟರ್‌ಗಳು/ಕೌನ್ಸೆಲಿಂಗ್ ಸೆಂಟರ್‌ಗಳು/ಟೆಲಿ ಕೌನ್ಸೆಲಿಂಗ್ ನೆಟ್‌ವರ್ಕ್‌ಗಳೊಂದಿಗೆ ಕೆಲಸ ಮಾಡಿದ ಅನುಭವ ಹೊಂದಿರುವವರಿಗೆ ಆದ್ಯತೆ
    ದಿನಕ್ಕೆ 7 - 8 ಗಂಟೆಗಳ ಕಾಲ ಕರೆ ಮಾಡುವ ಸಾಮರ್ಥ್ಯ ಹೊಂದಿದ್ದು, ಪರಸ್ಪರ ಮತ್ತು ಸಂವಹನ ಕೌಶಲ್ಯಗಳು ಇರಬೇಕು. ಜೊತೆಗೆ ಸ್ಥಳೀಯ ಭಾಷೆಯಲ್ಲಿ ಪ್ರಾವೀಣ್ಯತೆ ಇರಬೇಕು.

    ವಯಸ್ಸಿನ ಮಿತಿ: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.

    ಆಯ್ಕೆ ವಿಧಾನ
    ಶಾರ್ಟ್​ಲಿಸ್ಟ್​ ಮತ್ತು ಸಂದರ್ಶನ

    ಪ್ರಮುಖ ದಿನಾಂಕಗಳು
    ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 13 ಜುಲೈ 2022
    ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 27 ಜುಲೈ 2022

    ಇದನ್ನು ಓದಿ: ತುಮಕೂರು, ಕೋಲಾರ, ಚಿತ್ರದುರ್ಗದಲ್ಲಿ ಪ್ರಾಂಶುಪಾಲರ ಹುದ್ದೆಗೆ ಅರ್ಜಿ ಆಹ್ವಾನ

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: khpt.org

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    -ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

    -ಅಧಿಕೃತ ಅಧಿಸೂಚನೆಯಿಂದ- ಲಭ್ಯವಿರುವ ನಿಗದಿತ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ. ಇಲ್ಲ ಮೇಲ್ಕಂಡ ವಿಳಾಸಕ್ಕೆ ಸ್ಪೀಡ್​ ಅಥವಾ ರಿಜಿಸ್ಟರ್​ ಪೋಸ್ಟ್​ ಮಾಡಬಹುದಾಗಿದೆ.
    Published by:Seema R
    First published: