KIOCL Recruitment: ಕುದುರೆಮುಖ ಕಬ್ಬಿಣದ ಅದಿರು ಕಂಪನಿಯಲ್ಲಿ ನೇಮಕಾತಿ; ಪದವಿ ಆಗಿದ್ರೆ ಸಾಕು

ಅರ್ಜಿಯನ್ನು ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್​ 30 ಆಗಿದೆ.

ವಿವಿಧ ಹುದ್ದೆಗೆ ಅರ್ಜಿ ಹಾಕಿ

ವಿವಿಧ ಹುದ್ದೆಗೆ ಅರ್ಜಿ ಹಾಕಿ

  • Share this:
    ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್​ನಲ್ಲಿ ( Kudremukh Iron Ore Company Limited) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಫೀಸರ್ ಟ್ರೈನಿ, ಹಿಂದಿ ಭಾಷಾಂತರಕಾರ ಹುದ್ದೆಗೆ ನೇಮಕಾತಿ ನಡೆಯಲಿದ್ದು, ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್​ 30 ಆಗಿದೆ.

    ಸಂಸ್ಥೆಯ ಹೆಸರು: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ (KIOCL)
    ಹುದ್ದೆಯ ಹೆಸರು: ಆಫೀಸರ್ ಟ್ರೈನಿ,
    ಹುದ್ದೆಗಳ ಸಂಖ್ಯೆ: 7
    ಉದ್ಯೋಗ ಸ್ಥಳ: ಬೆಂಗಳೂರು
    ಸಂಬಳ: 20000-25000 ರೂ ಪ್ರತಿ ತಿಂಗಳು

































    ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆವೇತನ
    ಅಧಿಕಾರಿ ಟ್ರೈನಿ (ಮೆಟಿರಿಯಲ್)3ಎಂಬಿಎ20000-25000 ರೂ ಪ್ರತಿ ತಿಂಗಳು


    ಅಧಿಕಾರಿ ತರಬೇತಿ (ಮಾನವ ಸಂಪನ್ಮೂಲ ಇಲಾಖೆ)

    2ಎಂಬಿಎ, ಎಂಎಸ್​​ಡಬ್ಲ್ಯೂ20000-25000 ರೂ ಪ್ರತಿ ತಿಂಗಳು
    ಅಧಿಕಾರಿ ಟ್ರೈನಿ (ಖನಿಜ ಪರಿಶೋಧನೆ ಇಲಾಖೆ)1ಎಂಬಿಎ20000-25000 ರೂ ಪ್ರತಿ ತಿಂಗಳು
    ಹಿಂದಿ ಅನುವಾದಕ11ಡಿಪ್ಲೊಮೋ, ಸ್ನಾತಕೋತ್ತರ ಪದವಿ20000-25000 ರೂ ಪ್ರತಿ ತಿಂಗಳು

    ವಯಸ್ಸಿನ ಮಿತಿ: ಕುದುರೆಮುಖ ಐರನ್ ಓರ್ ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 30 ವರ್ಷಗಳನ್ನು ಮೀರಬಾರದು.

    ಅನುಭವ: ಅಭ್ಯರ್ಥಿಗಳು ಸಂಬಂಧಪಟ್ಟ ಕ್ಷೇತ್ರದಲ್ಲಿ ಕನಿಷ್ಠ ಒಂದು ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು.

    ವಯೋಮಿತಿ ಸಡಿಲಿಕೆ:
    ಹಿಂದುಳಿದ ವರ್ಗದ ಅಭ್ಯರ್ಥಿಗಳು: 03 ವರ್ಷಗಳು
    ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳು: 05 ವರ್ಷಗಳು
    ವಿಕಲಚೇತನ (ಸಾಮಾನ್ಯ) ಅಭ್ಯರ್ಥಿಗಳು: 05 ವರ್ಷಗಳು
    ವಿಕಲಚೇತನ (ಹಿಂದುಳಿದ ವರ್ಗ) ಅಭ್ಯರ್ಥಿಗಳು: 08 ವರ್ಷಗಳು
    ವಿಕಲಚೇತನ (ಪ.ಜಾ, ಪ.ಪಂ)) ಅಭ್ಯರ್ಥಿಗಳು: 10 ವರ್ಷಗಳು

    ಇದನ್ನು ಓದಿ: ವಿಜಯಪುರ ಜಿಲ್ಲಾ ನ್ಯಾಯಾಲಯದಲ್ಲಿ ಟೈಪಿಸ್ಟ್​, ಜವಾನ ಹುದ್ದೆಗೆ ಅರ್ಜಿ ಆಹ್ವಾನ

    ಆಯ್ಕೆ ಪ್ರಕ್ರಿಯೆ
    ಕಂಪ್ಯೂಟರ್ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನ

    ಅರ್ಜಿ ಸಲ್ಲಿಕೆ: ಆನ್​ಲೈನ್​ ಮತ್ತು ಆಫ್ಲೈನ್​

    ಪ್ರಮುಖ ಲಿಂಕ್​ಗಳು
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಜೂನ್​ 7, 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್​ 27, 2022
    ಅರ್ಜಿಗಳ ಹಾರ್ಡ್ ಪ್ರತಿಯನ್ನು ಸಲ್ಲಿಸಲು ಕೊನೆಯ ದಿನಾಂಕ: ಜುಲೈ 2, 2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: kioclltd.in

    ಇದನ್ನು ಓದಿ: ಜಲಸಂಪನ್ಮೂಲ ಇಲಾಖೆಯಿಂದ 155 ಬ್ಯಾಕ್​ಲಾಗ್​​ ಎಸ್​ಡಿಎ ಹುದ್ದೆಗೆ ಅರ್ಜಿ ಆಹ್ವಾನ

    ಅರ್ಜಿ ಸಲ್ಲಿಕೆ ವಿಧಾನ

    -ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

    ಜನರಲ್ ಮ್ಯಾನೇಜರ್ (HR&A), HR ಇಲಾಖೆ, KIOCL 6 ಲಿಮಿಟೆಡ್, ಕೋರಮಂಗಲ 2ನೇ ಬ್ಲಾಕ್, ಸರ್ಜಾಪುರ ರಸ್ತೆ, ಬೆಂಗಳೂರು-560034
    Published by:Seema R
    First published: