Co-op Society Recruitment: ವಿಜಯಪುರ, ಧಾರವಾಡ, ಬಾಗಲಕೋಟೆ ಪದವೀಧರರಿಗೆ ಉತ್ತಮ ಅವಕಾಶ

ವಿಜಯಪುರ, ಧಾರವಾಡ, ಬೆಳಗಾವಿ, ಸೇರಿದಂತೆ ಉತ್ತರ ಕರ್ನಾಟಕದ ಹಲವು ಪ್ರಮುಖ ನಗರದಲ್ಲಿ ಕಾರ್ಯ ನಿರ್ವಹಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಕಿತ್ತೂರು ರಾಣಿ ಚನ್ನಮ್ಮ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಲಿಮಿಟೆಡ್

ಕಿತ್ತೂರು ರಾಣಿ ಚನ್ನಮ್ಮ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಲಿಮಿಟೆಡ್

  • Share this:
    ವಿಜಯಪುರದ ಪ್ರಖ್ಯಾತ ಕಿತ್ತೂರು ರಾಣಿ ಚನ್ನಮ್ಮ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಲಿಮಿಟೆಡ್​​ನಲ್ಲಿ (Kittur Rani Channamma Urban Credit Souharda Sahakari Limited) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 200ಕ್ಕೂ ಹುದ್ದೆಗಳ ನೇಮಕಾತಿಗೆ ಮುಂದಾಗಲಾಗಿದ್ದು, ಪ್ರೊಕ್ಯೂರ್‌ಮೆಂಟ್ ಅಸಿಸ್ಟೆಂಟ್, ಅಸಿಸ್ಟೆಂಟ್, ಮ್ಯಾನೇಜರ್ (Procurement Assistant, Assistant, Manager Posts) ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಪದವಿ, ಎಸ್​ಎಸ್​ಎಲ್​ಸಿ, ಪಿಯುಸಿ ಆದ ಆಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್​ 15 ಆಗಿದೆ.

    ವಿಜಯಪುರ, ಧಾರವಾಡ, ಬೆಳಗಾವಿ, ಸೇರಿದಂತೆ ಉತ್ತರ ಕರ್ನಾಟಕದ ಹಲವು ಪ್ರಮುಖ ನಗರದಲ್ಲಿ ಕಾರ್ಯ ನಿರ್ವಹಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆನ್​ಲೈನ್ (Online)​ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಭರ್ತಿ ಪ್ರಕ್ರಿಯೆ, ನೇಮಕಾತಿ, ವೇತನ ಮತ್ತು ಶಿಕ್ಷಣ ಸೇರಿದಂತೆ ಇನ್ನಿತರ ಮಾಹಿತಿಗಳು ಕೆಳಕಂಡಂತೆ ಇದೆ.

    ಸಂಸ್ಥೆಯ ಹೆಸರು: ಕಿತ್ತೂರು ರಾಣಿ ಚನ್ನಮ್ಮ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಲಿಮಿಟೆಡ್ ಹುದ್ದೆಗಳ ಸಂಖ್ಯೆ: 200
    ಉದ್ಯೋಗ ಸ್ಥಳ: ಧಾರವಾಡ - ವಿಜಯಪುರ - ಬಾಗಲಕೋಟೆ - ಬೆಳಗಾವಿ
    ಹುದ್ದೆಗಳು: ಸಂಗ್ರಹಣೆ ಸಹಾಯಕ, ಸಹಾಯಕ, ವ್ಯವಸ್ಥಾಪಕ
    ವೇತನ: ರಾಣಿ ಚನ್ನಮ್ಮ ಅರ್ಬನ್ ಕ್ರೆಡಿಟ್ ಕೋ-ಆಪ್ ಸೊಸೈಟಿ ನಿಯಮಗಳ ಪ್ರಕಾರ

























    ಹುದ್ದೆಗಳುಹುದ್ದೆ ಸಂಖ್ಯೆವಿದ್ಯಾರ್ಹತೆ
    ಮ್ಯಾನೇಜರ್50ಬಿಕಾಂ, ಬಿಬಿಎ
    ಸಹಾಯಕ50ಪದವಿ
    ಸಂಗ್ರಹಣೆ ಸಹಾಯಕ100ಎಸ್​​ಎಸ್​ಎಲ್​ಸಿ, ಪಿಯುಸಿ

    ಅನುಭವ: ಈಗಾಗಲೇ ಸಹಕಾರಿ ಕೆಲಸದ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

    ವಯೋಮಿತಿ: ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 38 ವರ್ಷಗಳು ಮೀರಿರಬಾರದು.

    ವಯೋಮಿತಿ ಸಡಿಲಿಕೆ:
    ಕಿತ್ತೂರು ರಾಣಿ ಚನ್ನಮ್ಮ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಲಿಮಿಟೆಡ್ ನಿಯಮಾವಳಿಗಳ ಪ್ರಕಾರ

    ಇದನ್ನು ಓದಿ: ಎನ್​ಟಿಪಿಸಿಯಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ; ಬೇಗ ಅರ್ಜಿ ಸಲ್ಲಿಸಿ

    ಆಯ್ಕೆ ಪ್ರಕ್ರಿಯೆ
    ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ಪ್ರಮುಖ ದಿನಾಂಕಗಳು:
    ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: ಜೂನ್​ 2, 2022
    ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: ಜೂನ್ 15, 2022

    ಅಧಿಕೃತ ವೆಬ್‌ಸೈಟ್: sahakara.kar.gov.in

    ಇದನ್ನು ಓದಿ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ; ಬಿಇ ಪದವೀಧರರಿಗೆ ಅವಕಾಶ

    ಅರ್ಜಿ ಸಲ್ಲಿಕೆ ಪ್ರಕ್ರಿಯೆ
    -ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ
    -ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.
    ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ಈ ಇಮೇಲ್ ವಿಳಾಸಕ್ಕೆ hrdeptranichannamma@gmail.com ಅಭ್ಯರ್ಥಿಗಳು ಮೇಲ್​ ಮಾಡಬೇಕಿದೆ.
    ಹೆಚ್ಚಿನ ಮಾಹಿತಿಗೆ ಈ ದೂರವಾಣಿಗೆ ಕರೆ ಮಾಡಬಹುದಾಗಿದೆ. 7022260202, 08288-234219
    Published by:Seema R
    First published: