Jobs in KLE Society: ಕರ್ನಾಟಕ ಲಿಂಗಾಯತ ಶಿಕ್ಷಣ ಸೊಸೈಟಿಯಲ್ಲಿ ಫ್ರೌಢ ಶಾಲಾ ಶಿಕ್ಷಕರ ನೇಮಕಾತಿ

ಸಂಸ್ಥೆಯ ಅನುದಾನಿತ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ  ಸಹ ಶಿಕ್ಷಕರು ಹಾಗೂ ದೈಹಿಕ ಶಿಕ್ಷಕರ ಹುದ್ದೆ ಸೇರಿ ಒಟ್ಟು 23 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಲಿಂಗಾಯತ ಶಿಕ್ಷಣ ಸೊಸೈಟಿ

ಕರ್ನಾಟಕ ಲಿಂಗಾಯತ ಶಿಕ್ಷಣ ಸೊಸೈಟಿ

  • Share this:
    ಬೆಳಗಾವಿಯ ಪ್ರತಿಷ್ಠಿತ ಕರ್ನಾಟಕ ಲಿಂಗಾಯತ ಶಿಕ್ಷಣ ಸೊಸೈಟಿಯಲ್ಲಿ (Karnataka Lingayat Education Society) ವಿವಿಧ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಂಸ್ಥೆಯ ಅನುದಾನಿತ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ  ಸಹ ಶಿಕ್ಷಕರು ಹಾಗೂ ದೈಹಿಕ ಶಿಕ್ಷಕರ ಹುದ್ದೆ ಸೇರಿ ಒಟ್ಟು 23 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ವಿಷಯಗಳಲ್ಲಿ ಪದವಿ ಪಡೆದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆಫ್​ಲೈನ್​ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 27 ಆಗಿದೆ.

    ಸಂಸ್ಥೆಯ ಹೆಸರು: ಕರ್ನಾಟಕ ಲಿಂಗಾಯತ ಶಿಕ್ಷಣ ಸೊಸೈಟಿ (ಕೆಎಲ್‌ಇ ಸೊಸೈಟಿ)
    ಹುದ್ದೆಯ ಹೆಸರು: ಸಹಶಿಕ್ಷಕರು, ದೈಹಿಕ ಶಿಕ್ಷಕರು
    ಹುದ್ದೆಗಳ ಸಂಖ್ಯೆ: 23
    ಉದ್ಯೋಗ ಸ್ಥಳ: ಬೆಳಗಾವಿ
    ವೇತನ: 33450-62600 ರೂ ಪ್ರತಿ ತಿಂಗಳು






































    ಹುದ್ದೆಹುದ್ದೆ ಸಂಖ್ಯೆಬೋಧನ ವಿಷಯ
    ಸಹಶಿಕ್ಷಕರು8ವಿಜ್ಞಾನ ಪದವಿ (ಪಿಸಿಎಂ)
    ಸಹಶಿಕ್ಷಕರು2ಸಮಾಜ ವಿಜ್ಞಾನ
    ಸಹಶಿಕ್ಷಕರು1ಹಿಂದಿ ಭಾಷೆ
    ಸಹಶಿಕ್ಷಕರು4ಇಂಗ್ಲಿಷ್ ಭಾಷೆ
    ಸಹಶಿಕ್ಷಕರು7ಕನ್ನಡ ಭಾಷೆ
    ದೈಹಿಕ ಶಿಕ್ಷಕರು1

    ಶೈಕ್ಷಣಿಕ ಅರ್ಹತೆ: ಸೊಸೈಟಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಬಿಎ, ಬಿಎಸ್ಸಿ, ಬಿಎಡ್​  ಪದವಿ, ಬಿಪಿಎಡ್​​ ಅನ್ನು  ಪೂರ್ಣಗೊಳಿಸಿರಬೇಕು.



    ವಯೋಮಿತಿ: ಕರ್ನಾಟಕ ಲಿಂಗಾಯತ ಶಿಕ್ಷಣ ಸೊಸೈಟಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 40 ವರ್ಷಗಳು

    ವಯೋಮಿತಿ ಸಡಿಲಿಕೆ:
    ಪ. ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳು: 5 ವರ್ಷಗಳು
    ಒಬಿಸಿ ಅಭ್ಯರ್ಥಿಗಳು: 3 ವರ್ಷಗಳು

    ಅರ್ಜಿ ಸಲ್ಲಿಕೆ: ಆಫ್​ಲೈನ್​

    ಆಯ್ಕೆ ಪ್ರಕ್ರಿಯೆ
    ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ಇದನ್ನು ಓದಿ: ಚಿಕ್ಕಮಗಳೂರಿನಲ್ಲಿ74 ಅಂಗನವಾಡಿ ಹುದ್ದೆ ನೇಮಕಾತಿ; ಇಲ್ಲಿದೆ ಸಂಪೂರ್ಣ ಮಾಹಿತಿ

    ಅರ್ಜಿ ಸಲ್ಲಿಕೆ ವಿಳಾಸ

    ಕಾರ್ಯದರ್ಶಿ, ಆಡಳಿತ ಸಮಿತಿ, ಕೆಎಲ್​ಇ  ಇನ್ಸ್ಟಿಟ್ಯೂಟ್ ಮುಖ್ಯ ಕಛೇರಿ, ತ್ಯಾಗವೀರ್ ಸಿರಸಂಗಿ ಲಿಂಗರಾಜ್ ಕಾಲೇಜು ರಸ್ತೆ, ಬೆಳಗಾವಿ - 590001.

    ಪ್ರಮುಖ ದಿನಾಂಕಗಳು:
    ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 6 ಸೆಪ್ಟೆಂಬರ್​ 2022
    ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27 ಸೆಪ್ಟೆಂಬರ್​ 2022

     ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ವೆಬ್‌ಸೈಟ್: klesociety.org

    ಅರ್ಜಿ ಸಲ್ಲಿಕೆ ವಿಧಾನ

    -ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    - ಅಧಿಕೃತ ಅರ್ಜಿ ನಮೂನೆಯ ಮೂಲಕ ಯಾವ ಹುದ್ದೆಗೆ ಅರ್ಜಿ ಸಲ್ಲಿಕೆ ಎಂಬುದನ್ನು ತಿಳಿಸಿ

    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಮೇಲಿನ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ತಲುಪುವಂತೆ ಸ್ಪೀಡ್​ ಪೋಸ್ಟ್​ ಅಥವಾ ರಿಜಿಸ್ಟರ್​ ಪೋಸ್ಟ್​ ಮಾಡಿ.
    Published by:Seema R
    First published: