KMC Recruitment 2021: ತಿಂಗಳಿಗೆ ₹ 22,000 ಸಂಬಳ, PUC ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ

ನವೆಂಬರ್ 29ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಅಭ್ಯರ್ಥಿಗಳು ಆಫ್​ಲೈನ್(Offline) ಮೂಲಕ ಅರ್ಜಿ ಸಲ್ಲಿಸಬೇಕು. ಡಿಸೆಂಬರ್ 4 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

KMC

KMC

  • Share this:
KMC Recruitment 2021: ಕೊಲ್ಕತ್ತಾ ಮುನ್ಸಿಪಲ್ ಕಾರ್ಪೊರೇಷನ್(Kolkata Municipal Corporation) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 14 ಲ್ಯಾಬೋರೇಟರಿ ಟೆಕ್ನಿಷಿಯನ್(Laboratory Technician) ಹುದ್ದೆಗಳು ಖಾಲಿ ಇದ್ದು, 12ನೇ ತಗರತಿ, DMLT ಪಾಸಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ನವೆಂಬರ್ 29ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಅಭ್ಯರ್ಥಿಗಳು ಆಫ್​ಲೈನ್(Offline) ಮೂಲಕ ಅರ್ಜಿ ಸಲ್ಲಿಸಬೇಕು. ಡಿಸೆಂಬರ್ 4 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.









































ಸಂಸ್ಥೆಕೊಲ್ಕತ್ತಾ ಮುನ್ಸಿಪಲ್ ಕಾರ್ಪೊರೇಷನ್
ಹುದ್ದೆಯ ಹೆಸರುಲ್ಯಾಬೋರೇಟರಿ ಟೆಕ್ನಿಷಿಯನ್
ಒಟ್ಟು ಹುದ್ದೆಗಳು14
ವಿದ್ಯಾರ್ಹತೆ12ನೇ ತಗರತಿ, DMLT
ಉದ್ಯೋಗದ ಸ್ಥಳಕೊಲ್ಕತ್ತಾ
ವೇತನಮಾಸಿಕ ₹ 22,000
ಅರ್ಜಿ ಸಲ್ಲಿಸುವ ಬಗೆಆಫ್​ಲೈನ್
ಅರ್ಜಿ ಸಲ್ಲಿಕೆ ಆರಂಭ ದಿನಾಂಕ29/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ04/12/2021



ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 29/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04/12/2021

ಹುದ್ದೆಯ ಮಾಹಿತಿ:
ಲ್ಯಾಬೋರೇಟರಿ ಟೆಕ್ನಿಷಿಯನ್ - 14 ಹುದ್ದೆಗಳು
ಮಾಜಿ ಸೈನಿಕ-4
PWD-4
ಮೆರಿಟೋರಿಯಸ್ ಸ್ಪೋರ್ಟ್ಸ್​ ಪರ್ಸನ್-2
SC- 2
ST-2

ಇದನ್ನೂ ಓದಿ: Karnataka High Court Jobs: ಕರ್ನಾಟಕ ಹೈಕೋರ್ಟ್​ನಲ್ಲಿ ಖಾಲಿ ಇರುವ ಟೈಪಿಸ್ಟ್​ ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ

ವಿದ್ಯಾರ್ಹತೆ:
ಲ್ಯಾಬೋರೇಟರಿ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ 12ನೇ ತರಗತಿ ಪಾಸಾಗಿರಬೇಕು.
ಜೊತೆಗೆ ಬೇಸಿಕ್ ಕಂಪ್ಯೂಟರ್ ಜ್ಞಾನವಿರಬೇಕು. ಪಶ್ಚಿಮ ಬಂಗಾಳದ ನಿವಾಸಿಯಾಗಿರಬೇಕು.

ವಯೋಮಿತಿ:
ಲ್ಯಾಬೋರೇಟರಿ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು.

ಉದ್ಯೋಗದ ಸ್ಥಳ:
ಲ್ಯಾಬೋರೇಟರಿ ಟೆಕ್ನಿಷಿಯನ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ಉದ್ಯೋಗ ನೀಡಲಾಗುತ್ತದೆ.

ವೇತನ:
ಲ್ಯಾಬೋರೇಟರಿ ಟೆಕ್ನಿಷಿಯನ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹22,000 ವೇತನ ನೀಡಲಾಗುತ್ತದೆ.

ಇದನ್ನೂ ಓದಿ: KMC Recruitment 2021: ತಿಂಗಳಿಗೆ ₹ 60,000 ಸಂಬಳ, MBBS ಪದವೀಧರರು ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಆಯ್ಕೆ ಪ್ರಕ್ರಿಯೆ
ಶಾರ್ಟ್​ಲಿಸ್ಟಿಂಗ್
ಪ್ರಾಯೋಗಿಕ ಪರೀಕ್ಷೆ
ವೈಯಕ್ತಿಕ ಸಂದರ್ಶನ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.


ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಚೀಫ್​ ಮುನ್ಸಿಪಲ್ ಹೆಲ್ತ್​ ಆಫೀಸರ್/ ಸೆಕ್ರೆಟರಿ
ಕೊಲ್ಕತ್ತಾ ಸಿಟಿ NUHM ಸೊಸೈಟಿ
CMO ಬಿಲ್ಡಿಂಗ್
5 SN, ಬ್ಯಾನರ್ಜಿ ರಸ್ತೆ
ಕೊಲ್ಕತ್ತಾ- 700013
Published by:Latha CG
First published: