ಮಡಿಕೇರಿಯಲ್ಲಿನ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (Kodagu Institute of Medical Sciences) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. 35 ನರ್ಸಿಂಗ್ ಅಧಿಕಾರಿ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆನ್ಲೈನ್ ಮತ್ತು ಆಫ್ಲೈನ್ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 2 ಆಗಿದೆ.
ಈ ಹುದ್ದೆಯನ್ನು 11 ತಿಂಗಳ ಅವಧಿಗೆ ಅಥವಾ ಮುಂದಿನ ಸರ್ಕಾರದ ಆದೇಶದವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು. ಈ ಹುದ್ದೆ ಆಯ್ಕೆ, ಅರ್ಜಿ ಸಲ್ಲಿಕೆ ಮತ್ತು ನೇಮಕಾತಿ ಪ್ರಕ್ರಿಯೆ ಕುರಿತ ವಿವರ ಕೆಳಗಿನಂತಿದೆ.
ಸಂಸ್ಥೆಯ ಹೆಸರು: ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ
ಹುದ್ದೆಗಳ ಸಂಖ್ಯೆ: 35
ಉದ್ಯೋಗ ಸ್ಥಳ: ಕೊಡಗು
ಹುದ್ದೆಯ ಹೆಸರು: ನರ್ಸಿಂಗ್ ಅಧಿಕಾರಿ
ಸಂಬಳ: ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿಯಮಗಳ ಪ್ರಕಾರ
ಹುದ್ದೆ | ಹುದ್ದೆ ಸಂಖ್ಯೆ | ವಿದ್ಯಾರ್ಹತೆ | ವಯೋಮಿತಿ |
ಶುಶ್ರೂಷಕಾಧಿಕಾರಿಗಳು | 35 | ಬಿಎಸ್ಸಿ ನರ್ಸಿಂಗ್ ಅಥವಾ ಮಿಡ್‌ವೈಫರಿ ತರಬೇತಿಯಲ್ಲಿ ಡಿಪ್ಲೊಮಾ | 18-35 ವರ್ಷ |
ವಯೋಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
ಇದನ್ನು ಓದಿ: ವಿಜಯಪುರ ಜಿಲ್ಲಾ ನ್ಯಾಯಾಲಯದಲ್ಲಿ ಟೈಪಿಸ್ಟ್, ಜವಾನ ಹುದ್ದೆಗೆ ಅರ್ಜಿ ಆಹ್ವಾನ
ವಯೋಮಿತಿ ಸಡಿಲಿಕೆ:
ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಪ್ರವರ್ಗ 1 ಅಭ್ಯರ್ಥಿಗಳು: 05 ವರ್ಷಗಳು
ಪ್ರವರ್ಗ 2ಎ, 2ಬಿ, 3 ಎ ಮತ್ತು 3ಬಿ ಅಭ್ಯರ್ಥಿಗಳು:03 ವರ್ಷಗಳು
ಅರ್ಜಿ ಶುಲ್ಕ
ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಪ್ರವರ್ಗ 1 ಮತ್ತು ವಿಕಲಚೇತನ ಅಭ್ಯರ್ಥಿಗಳು: 100 ರೂ
ಸಾಮಾನ್ಯ/ಕ್ಯಾಟ್-2A/2B/3A & 3B ಅಭ್ಯರ್ಥಿಗಳು: 300 ರೂ.
ಪಾವತಿ ವಿಧಾನ: ಡಿಮ್ಯಾಂಡ್ ಡ್ರಾಫ್ಟ್
ಆಯ್ಕೆ ಪ್ರಕ್ರಿಯೆ
ಮೆರಿಟ್ ಪಟ್ಟಿ, ಅನುಭವ
ಇದನ್ನು ಓದಿ: ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಡೇಟಾ ಎಂಟ್ರಿ ಆಪರೇಟರ್ ಸೇರಿದಂತೆ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಜೂನ್ 21
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02 ಜುಲೈ 2022
ಅಧಿಸೂಚನೆ ಪ್ರಮುಖ ಲಿಂಕ್‌ಗಳು
ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ನಮೂನೆ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: kimskodagu.kar.nic.in
ಅರ್ಜಿ ಸಲ್ಲಿಕೆ ವಿಧಾನ:
-ನೇಮಕಾತಿ ಅಧಿಸೂಚನೆ ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.
-ನಿಗದಿತ ಅರ್ಜಿ ನಮೂನೆಯಲ್ಲಿ ಸ್ವಯಂ ದೃಢೀಕರಿಸಿದ ಅರ್ಜಿಗಳನ್ನು ಮೇಲ್ಕಂಡ ಇಮೇಲ್ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ಕಳುಹಿಸಬೇಕು.
-ಅರ್ಜಿಜೊತೆಗೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ ಈ ವಿಳಾಸಕ್ಕೆ ಕಳುಹಿಸಬೇಕು.
ನಿರ್ದೇಶಕರು ಮತ್ತು ಡೀನ್, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿ, ಕೊಡಗು ಜಿಲ್ಲೆ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ