ಕೊಡಗು ಜಿಲ್ಲೆಯ ಕಂದಾಯ ಘಟಕದಲ್ಲಿ (Kodagu Revenue Unit) ಖಾಲಿ ಇರುವ ಗ್ರಾಮ ಲೆಕ್ಕಿಗರ (Village Accountant) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 35 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಇದೇ ಮೇ 19 ಅರ್ಜಿ ಸಲ್ಲಿಕೆಗೆ ಕಡೆಯ ದಿನವಾಗಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆನ್‌ಲೈನ್ (Online) ಮೂಲಕ ಸಲ್ಲಿಕೆಗೆ ಮಾತ್ರ ಅವಕಾಶ ನೀಡಲಾಗಿದೆ.
ಒಟ್ಟು ಹುದ್ದೆಗಳ ಸಂಖ್ಯೆ: 35
ಉದ್ಯೋಗ ಸ್ಥಳ: ಕೊಡಗು -
ವೇತನ: ರೂ.21400-42000 ರೂ ಮಾಸಿಕ ವೇತನ
ಯಾವ ವರ್ಗಕ್ಕೆ ಎಷ್ಟು ಹುದ್ದೆ ಎಂಬ ವಿವರ ಇಲ್ಲಿದೆ
ವರ್ಗ | ಹುದ್ದೆ ಸಂಖ್ಯೆ |
ಪರಿಶಿಷ್ಟ ಜಾತಿ | 5 |
ಪರಿಶಿಷ್ಟ ಪಂಗಡ | 1 |
ವರ್ಗ-1 | 1 |
ಕ್ಯಾಟಗರಿ 2ಎ | 5 |
ಕ್ಯಾಟಗರಿ 2ಬಿ | 1 |
ಕ್ಯಾಟಗರಿ 3ಎ | 2 |
ಕ್ಯಾಟಗರಿ 3ಬಿ | 2 |
ಸಾಮಾನ್ಯ | 18 |
ಒಟ್ಟು | 35 |
ವಯೋಮಿತಿ: ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಮೀರಿರಬಾರದು
ವಯೋಮಿತಿ ಸಡಿಲಿಕೆ:
ಒಬಿಸಿ, 2ಎ, 2ಬಿ, 3ಎ ಮತ್ತು 3 ಬಿ ಅಭ್ಯರ್ಥಿಗಳು: 03 ವರ್ಷಗಳು
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಕ್ಯಾಟಗರಿ 1 ಅಭ್ಯರ್ಥಿಗಳು: 05 ವರ್ಷಗಳು
ಅರ್ಜಿ ಶುಲ್ಕ:
ಸಾಮಾನ್ಯ, 2ಎ, 2ಬಿ, 3ಎ ಮತ್ತು 3 ಬಿ ಅಭ್ಯರ್ಥಿಗಳಿಗೆ: 400 ರೂ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಕ್ಯಾಟಗರಿ 1 ಅಭ್ಯರ್ಥಿಗಳಿಗೆ: 200 ರೂ
ಇದನ್ನು ಓದಿ: ಎಂಜಿನಿಯರಿಂಗ್ ಪದವೀಧರರಿಗೆ ಉದ್ಯೋಗಾವಕಾಶ; ಯಾವುದೇ ಲಿಖಿತ ಪರೀಕ್ಷೆ ಇಲ್ಲ
ಶುಲ್ಕ ಪಾವತಿ ವಿಧಾನ:
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಇಲಾಖೆಯ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.
ಆಯ್ಕೆ ಪ್ರಕ್ರಿಯೆ:
ದ್ವಿತೀಯ ಪಿಯು ಅಥವಾ 12ನೇ ತರಗತಿ ಅಂಕಗಳು ಮೆರಿಟ್ ಆಧಾರದ ಮೇಲೆ
ಇದನ್ನು ಓದಿ: ದಾವಣಗೆರೆ ಡಿಸಿಸಿ ಬ್ಯಾಂಕ್ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ; ಇಂದೇ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19 ಮೇ 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ: 19 ಮೇ 2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: kodagu-va.kar.nic.in 2022
ಅರ್ಜಿ ಸಲ್ಲಿಕೆ ವಿಧಾನ
- ಕೊಡಗು ಗ್ರಾಮ ಲೆಕ್ಕಿಕ ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ. ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.
- ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಿ.
-ಕೊಡಗು ಗ್ರಾಮ ಲೆಕ್ಕಿಗ ಹುದ್ದೆ ಸಂಬಂಧ ಮೇಲೆ ನೀಡಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.
-ಕೊಡಗು ಗ್ರಾಮ ಲೆಕ್ಕಿಗರ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
-ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
ಕೊಡಗು ಗ್ರಾಮ ಲೆಕ್ಕಿಗರ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅಪ್ಲಿಕೇಶನ್ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಅತ್ಯಂತ ಮುಖ್ಯವಾಗಿ ಕ್ಯಾಪ್ಚರ್ ಮಾಡಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ