Kodagu Zilla Panchayat Recruitment 2023: ಕೊಡಗು ಜಿಲ್ಲಾ ಪಂಚಾಯತ್ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನವಾಗಿದೆ. ಕೊಡಗಿನಲ್ಲಿ(Kodagu) ಸರ್ಕಾರಿ ಕೆಲಸ ಹುಡುಕುತ್ತಿದ್ದರೆ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಕೊಡಗು ಜಿಲ್ಲಾ ಪಂಚಾಯತ್(Kodagu Zilla Panchayat) ಅನೇಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 5 ಟೆಕ್ನಿಕಲ್ ಅಸಿಸ್ಟೆಂಟ್(Technical Assistant), ತಾಲೂಕು IEC ಕೋ-ಆರ್ಡಿನೇಟರ್ ಹುದ್ದೆಗಳು ಖಾಲಿ ಇವೆ. ಆಸಕ್ತ ಅಭ್ಯರ್ಥಿಗಳು ನಾಳೆಯೊಳಗೆ ಅಂದರೆ ಜನವರಿ 23, 2023ರೊಳಗೆ ಅರ್ಜಿ ಸಲ್ಲಿಸಿ. ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಹಾಕಬೇಕು.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಈ ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ. ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಕೊಡಗು ಜಿಲ್ಲಾ ಪಂಚಾಯತ್ |
ಹುದ್ದೆ | ಟೆಕ್ನಿಕಲ್ ಅಸಿಸ್ಟೆಂಟ್, ತಾಲೂಕ್ IEC ಕೋ-ಆರ್ಡಿನೇಟರ್ |
ಒಟ್ಟು ಹುದ್ದೆ | 5 |
ವಿದ್ಯಾರ್ಹತೆ | ಪದವಿ, ಸ್ನಾತಕೋತ್ತರ ಪದವಿ |
ವೇತನ | ಮಾಸಕ ₹ 24,000 |
ಅರ್ಜಿ ಸಲ್ಲಿಸಲು ಕೊನೆಯ ದಿನ |
ವಿದ್ಯಾರ್ಹತೆ:
ತಾಲೂಕ್ IEC ಕೋ-ಆರ್ಡಿನೇಟರ್- ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ
ಟೆಕ್ನಿಕಲ್ ಅಸಿಸ್ಟೆಂಟ್ (ಅಗ್ರಿಕಲ್ಚರ್)- ಬಿಎಸ್ಸಿ, ಎಂಎಸ್ಸಿ (ಅಗ್ರಿಕಲ್ಚರ್)
ಟೆಕ್ನಿಕಲ್ ಅಸಿಸ್ಟೆಂಟ್ (ಹಾರ್ಟಿಕಲ್ಚರ್)- ಬಿಎಸ್ಸಿ, ಎಂಎಸ್ಸಿ (ಹಾರ್ಟಿಕಲ್ಚರ್)
ಇದನ್ನೂ ಓದಿ: Government Job: ಜಲ ವಿದ್ಯುತ್ ನಿಗಮದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ- ಮಾಸಿಕ ವೇತನ ₹ 45,000
ವಯೋಮಿತಿ:
ಕೊಡಗು ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 21 ವರ್ಷ ಮತ್ತು ಗರಿಷ್ಠ 40 ವರ್ಷ ಮೀರಿರಬಾರದು. ಅಭ್ಯರ್ಥಿಗಳಿಗೆ ಮೀಸಲಾತಿ ಅನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಕೊಡಗು ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 24,000 ರೂ. ವೇತನ ಕೊಡಲಾಗುತ್ತದೆ.
ಅರ್ಜಿ ಶುಲ್ಕ:
ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಹಾಕುವುದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 07/01/2023
ಅರ್ಜಿ ಸಲ್ಲಿಸಲು ಕೊನೆ ದಿನ: ಜನವರಿ 23, 2023 (ನಾಳೆ)
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ