District Court Recruitment: ಕೋಲಾರ ಜಿಲ್ಲಾ ಕೋರ್ಟ್​ನಲ್ಲಿದೆ ಕೆಲಸ ಖಾಲಿ; ಎಸ್​​ಎಸ್​ಎಲ್ಸಿ, ಪಿಯುಸಿ ಆಗಿದ್ರೆ ಅರ್ಜಿ ಸಲ್ಲಿಸಿ

ಪ್ಯೂನ್ (Peon) , ಸ್ಟೆನೋಗ್ರಾಫರ್ (Stenographer) ಸೇರಿದಂತೆ ಒಟ್ಟು 32 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
    ಕೋಲಾರ ಜಿಲ್ಲಾ ನ್ಯಾಯಾಲಯದಲ್ಲಿ (Kolar District Court) ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಪ್ಯೂನ್ (Peon) , ಸ್ಟೆನೋಗ್ರಾಫರ್ (Stenographer) ಸೇರಿದಂತೆ ಒಟ್ಟು 32 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಎಸ್​ಎಸ್​ಎಲ್​ಸಿ, ಪಿಯುಸಿ ಪಾಸ್ ಆಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 26 ಆಗಿದೆ.

    ಈ ಹುದ್ದೆ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ಸಂಸ್ಥೆಯ ಹೆಸರು: ಕೋಲಾರ ಇಕೋರ್ಟ್ (ಕೋಲಾರ ಜಿಲ್ಲಾ ನ್ಯಾಯಾಲಯ)
    ಹುದ್ದೆಯ ಹೆಸರು: ಪ್ಯೂನ್, ಸ್ಟೆನೋಗ್ರಾಫರ್
    ಹುದ್ದೆಗಳ ಸಂಖ್ಯೆ: 32
    ಉದ್ಯೋಗ ಸ್ಥಳ: ಕೋಲಾರ
    ವೇತನ: 17000-52650 ರೂ ಪ್ರತಿ ತಿಂಗಳು





















    ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆವೇತನ
    ಪ್ಯೂನ್22ಎಸ್​ಎಸ್​ಎಲ್​ಸಿ17000-28950 ರೂ
    ಸ್ಟೆನೋಗ್ರಾಫರ್10ಪಿಯುಸಿ, ಡಿಪ್ಲೊಮಾ27650-52650 ರೂ

    ವಯಸ್ಸಿನ ಮಿತಿ: ಕೋಲಾರ ಇಕೋರ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯುಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

    ವಯಸ್ಸಿನ ಸಡಿಲಿಕೆ:
    ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಪ್ರವರ್ಗ 1 ಅಭ್ಯರ್ಥಿಗಳು: 05 ವರ್ಷಗಳು
    ಪ್ರವರ್ಗ 2ಎ, 2ಬಿ, 3ಎ ಮತ್ತು 3 ಬಿ ಅಭ್ಯರ್ಥಿಗಳು: 03 ವರ್ಷಗಳು

    ಇದನ್ನು ಓದಿ: ರಾಯಚೂರು ಕೃಷಿ ವಿವಿಯಲ್ಲಿ ಸಹಾಯಕ ಪ್ರಾಧ್ಯಾಪಕರು ನೇಮಕಾತಿ

    ಅರ್ಜಿ ಶುಲ್ಕ:
    ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಹಾಗೂ ಪ್ರವರ್ಗ 1 ಅಭ್ಯರ್ಥಿಗಳು: 100 ರೂ
    ಸಾಮಾನ್ಯ, ಪ್ರವರ್ಗ 2ಎ, 2ಬಿ, 3ಎ ಮತ್ತು 3 ಬಿ ಅಭ್ಯರ್ಥಿಗಳು: 200 ರೂ

    ಪಾವತಿ ವಿಧಾನ: ಆನ್‌ಲೈನ್ ಅಥವಾ ಚಲನ್

    ಆಯ್ಕೆ ಪ್ರಕ್ರಿಯೆ:
    ಮೆರಿಟ್ ಪಟ್ಟಿ, ಟೈಪಿಂಗ್ ಪರೀಕ್ಷೆ ಮತ್ತು ಸಂದರ್ಶನ

    ಪ್ರಮುಖ ದಿನಾಂಕ

    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 27 ಜೂನ್​​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26 ಜುಲೈ 2022
    ಬ್ಯಾಂಕ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 28 ಜುಲೈ 2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ - ಪ್ಯೂನ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ಅಧಿಸೂಚನೆ - ಸ್ಟೆನೋಗ್ರಾಫರ್: ಇಲ್ಲಿ ಕ್ಲಿಕ್ ಮಾಡಿ
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: districts.ecourts.gov.in

    ಇದನ್ನು ಓದಿ: ರೈಲ್ವೆ ಇಂಟಿಗ್ರಲ್ ಕೋಚ್ ಫ್ಯಾಕ್ಟರಿಯಲ್ಲಿ ಭರ್ಜರಿ ನೇಮಕಾತಿ; 876 ಅಪ್ರೆಂಟಿಸ್​ ಹುದ್ದೆಗೆ ಅರ್ಜಿ ಆಹ್ವಾನ

    ಅರ್ಜಿ ಸಲ್ಲಿಕೆ ವಿಧಾನ

    ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

    -ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ.

    -ಮೇಲಿನ ಲಿಂಕ್‌ನಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ. ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

    -ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.

    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ
    Published by:Seema R
    First published: