WCD Koppal Anganwadi Recruitment 2021: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ-ಕೊಪ್ಪಳ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 161 ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇವೆ. 10ನೇ ತರಗತಿ, 4ನೇ ತರಗತಿ, 9ನೇ ತರಗತಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಡಿಸೆಂಬರ್ 13 ರವರೆಗೆ ಅರ್ಜಿ ಹಾಕಬಹುದು. ನವೆಂಬರ್ 12ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್ anganwadirecruit.kar.nic.in ಗೆ ಭೇಟಿ ನೀಡಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ |
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ-ಕೊಪ್ಪಳ |
ಹುದ್ದೆಯ ಹೆಸರು |
ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕಿ |
ಒಟ್ಟು ಹುದ್ದೆಗಳು |
161 |
ವಿದ್ಯಾರ್ಹತೆ |
10ನೇ ತರಗತಿ, 4ನೇ ತರಗತಿ, 9ನೇ ತರಗತಿ ಉತ್ತೀರ್ಣ |
ಕೆಲಸದ ಸ್ಥಳ |
ಕೊಪ್ಪಳ |
ವೇತನ |
ನಿಯಮಾನುಸಾರ |
ವಯೋಮಿತಿ |
18-35 ವರ್ಷ |
ಅರ್ಜಿ ಸಲ್ಲಿಸುವ ವಿಧಾನ |
ಆನ್ಲೈನ್ |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ |
12/11/2021 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
13/12/2021 |
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 12/11/2021
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13/12/2021
ಇದನ್ನೂ ಓದಿ:DRDO Recruitment 2021: ಸ್ನಾತಕೋತ್ತರ ಪದವೀಧರರಿಗೆ DRDOದಲ್ಲಿ ಉದ್ಯೋಗ, ಮಾಸಿಕ ವೇತನ ₹ 54,000
ಹುದ್ದೆಯ ಮಾಹಿತಿ:
- ಅಂಗನವಾಡಿ ಕಾರ್ಯಕರ್ತೆ: 28 ಹುದ್ದೆಗಳು
- ಅಂಗನವಾಡಿ ಸಹಾಯಕಿ: 133 ಹುದ್ದೆಗಳು
- ಒಟ್ಟು-161 ಹುದ್ದೆಗಳು
ವಿದ್ಯಾರ್ಹತೆ:
ಅಂಗನವಾಡಿ ಕಾರ್ಯಕರ್ತೆ- 10ನೇ ತರಗತಿ ಉತ್ತೀರ್ಣ
ಅಂಗನವಾಡಿ ಸಹಾಯಕಿ- 4ನೇ ತರಗತಿ, 9ನೇ ತರಗತಿ ಉತ್ತೀರ್ಣ
ವಯೋಮಿತಿ:
ಅಭ್ಯರ್ಥಿಗಳು ಕನಿಷ್ಠ 18 ರಿಂದ ಗರಿಷ್ಠ 35 ವರ್ಷದೊಳಗಿನವರಾಗಿರಬೇಕು.
ವಿಕಲಚೇತನ ಅಭ್ಯರ್ಥಿಗಳಿಗೆ ಮಾತ್ರ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ:
- ಲಿಖಿತ ಪರೀಕ್ಷೆ
- ದಾಖಲಾತಿ ಪರಿಶೀಲನೆ
- ವೈಯಕ್ತಿಕ ಸಂದರ್ಶನ
ಇದನ್ನೂ ಓದಿ: Central Silk Board Recruitment 2021: ಬೆಂಗಳೂರು ಸೆಂಟ್ರಲ್ ಸಿಲ್ಕ್ ಬೋರ್ಡ್ನಲ್ಲಿ ವಿವಿಧ ಹುದ್ದೆಗಳು ಖಾಲಿ
ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ. ಹಾಗೇನಾದರೂ ಸಲ್ಲಿಸಿದ್ದಲ್ಲಿ ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ. ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ