KPCL Recruitment 2022: ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್(Karnataka Power Corporation Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಮುಖ್ಯಸ್ಥ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 5ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆಫ್ಲೈನ್(Offline) ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್ 5 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ karnatakapower.com ಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ |
ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ |
ಹುದ್ದೆಯ ಹೆಸರು |
ಮುಖ್ಯಸ್ಥ |
ಒಟ್ಟು ಹುದ್ದೆ |
1 |
ವೇತನ |
ಮಾಸಿಕ ₹ 75,000 |
ಉದ್ಯೋಗದ ಸ್ಥಳ |
ಬೆಂಗಳೂರು |
ಅರ್ಜಿ ಸಲ್ಲಿಕೆ ಬಗೆ |
ಆಫ್ಲೈನ್ |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ |
05/02/2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
05/03/2022 |
ವಿದ್ಯಾರ್ಹತೆ:
ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ ಇರಬೇಕು.
ಇದನ್ನೂ ಓದಿ:IIIT Bangalore: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ವಾರ್ಷಿಕ ಪ್ಯಾಕೇಜ್ ₹ 9.60 ಲಕ್ಷ
ಅನುಭವ:
ಅಭ್ಯರ್ಥಿಯು ನಿವೃತ್ತ ಕೆಎಎಸ್ ಅಧಿಕಾರಿಯಾಗಿರಬೇಕು.
ಅಭ್ಯರ್ಥಿಗಳು ಭೂ ಸ್ವಾಧೀನ, ಪುನರ್ವಸತಿ ಮತ್ತು ಪರಿಹಾರ ಕ್ಷೇತ್ರಗಳಲ್ಲಿ ಕೆಲಸ ಮಾಡಿದ ಅನುಭವವನ್ನು ಹೊಂದಿರಬೇಕು
ವಯೋಮಿತಿ:
ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ವಯಸ್ಸು ಕನಿಷ್ಠ 60 ವರ್ಷಗಳು ಮತ್ತು ಗರಿಷ್ಠ 70 ವರ್ಷಗಳನ್ನು ಮೀರಿರಬಾರದು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 05/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05/03/2022
ಇದನ್ನೂ ಓದಿ:HAL Recruitment 2022: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ನಲ್ಲಿ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
ನಿರ್ದೇಶಕರು
ನಂ. 82, ಶಕ್ತಿ ಭವನ
ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್
ರೇಸ್ ಕೋರ್ಸ್ ರಸ್ತೆ
ಬೆಂಗಳೂರು - 560001
ಕರ್ನಾಟಕ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ