KPSC Recruitment: ಕೆಪಿಎಸ್​ಸಿಯಿಂದ 229 ಅಸಿಸ್ಟಂಟ್​ ಇಂಜಿನಿಯರ್​ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ಲೋಕ ಸೇವಾ ಆಯೋಗ ಕಳೆದ ಮಾರ್ಚ್​ನಲ್ಲಿ ಅಸಿಸ್ಟಂಟ್​ ಇಂಜಿನಿಯರಿಂಗ್​ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿತ್ತು. ಈ ಹುದ್ದೆಗಳಿಗೆ ಉಳಿಕೆ ಮೂಲ ವೃಂದದಲ್ಲಿ ಮತ್ತೆ 100 ಹುದ್ದೆಗಳನ್ನು ಸೇರ್ಪಡನೆ ಮಾಡಿ ಅಧಿಸೂಚನೆ ಪ್ರಕಟಿಸಲಾಗಿದೆ

 ಹುದ್ದೆಗೆ ಅರ್ಜಿ ಹಾಕಿ

ಹುದ್ದೆಗೆ ಅರ್ಜಿ ಹಾಕಿ

  • Share this:
    ಕೆಪಿಎಸ್​ಸಿಯಿಂದ (Karnataka Public Service Commission) ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಗ್ರೂಪ್​ ಬಿ ವೃಂದದಲ್ಲಿನ ಸಹಾಯಕ ಅಭಿಯಂತರರ (ಗ್ರೇಡ್​-1) (Assistant Engineer) 129 ಹುದ್ದೆ ಮತ್ತು ಹೈದ್ರಾಬಾದ್​ ಕರ್ನಾಟಕದ 59 ಹುದ್ದೆಗಳಿಗೆ ಮಾರ್ಚ್​ನಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು. ಇದೀಗ ಅದಕ್ಕೆ ಮತ್ತೆ ಹೆಚ್ಚುವರಿಯಾಗಿ 100 ಹುದ್ದೆಗಳು ಸೇರಿದಂತೆ 229 ಹುದ್ದೆಗಳು ಭರ್ತಿಗೆ ಮುಂದಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 30 ಆಗಿದೆ.

    ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.



























    ಹುದ್ದೆ ಮಾಹಿತಿಹುದ್ದೆ ವಿವರ
    ಇಲಾಖೆಯ ಹೆಸರುಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ
    ಹುದ್ದೆಸಹಾಯಕ ಇಂಜಿನಿಯರ್ (ಗ್ರೇಡ್-1)
    ಹುದ್ದೆಗಳ ಸಂಖ್ಯೆ229
    ಕಾರ್ಯ ನಿರ್ವಹಣೆ ಸ್ಥಳಕರ್ನಾಟಕದಾದ್ಯಂತ
    ವೇತನ43100-83900 ರೂ. ಪ್ರತಿ ತಿಂಗಳು

    ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಸಿವಿಲ್​ ಅಥವಾ ಎನ್​ವರ್​ಮೆಂಟರ್​ನಲ್ಲಿ ಬಿಇ ಪದವಿ ಪೂರ್ಣಗೊಳಿಸಿರಬೇಕು.

    ಇದನ್ನು ಓದಿ: ಕೆಪಿಎಸ್​ಸಿ ಗ್ರೂಪ್​ ಸಿ ಹುದ್ದೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ; ಸೆಪ್ಟೆಂಬರ್​ 13ರವರೆಗಿದೆ ಅವಕಾಶ

    ವಯೋಮಿತಿ: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

    ವಯೋಮಿತಿ ಸಡಿಲಿಕೆ
    ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಎ ಅಭ್ಯರ್ಥಿಗಳು: 05 ವರ್ಷಗಳು
    ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: 03 ವರ್ಷಗಳು

    ಅರ್ಜಿ ಶುಲ್ಕ:
    ಪ.ಜಾ, ಪ.ಪಂ ಪ್ರವರ್ಗ 1  ಮತ್ತು ವಿಕಲಚೇತನ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ
    ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: 300 ರೂ.
    ಸಾಮಾನ್ಯ ಅಭ್ಯರ್ಥಿಗಳು: 600 ರೂ.
    ಎಲ್ಲಾ ಅಭ್ಯರ್ಥಿಗಳಿಗೆ ಸಂಸ್ಕರಣಾ ಶುಲ್ಕ: 35 ರೂ.

    ಪಾವತಿ ವಿಧಾನ: ಆನ್ಲೈನ್

    ಆಯ್ಕೆ ಪ್ರಕ್ರಿಯೆ:
    ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ, ದಾಖಲೆಗಳ ಪರಿಶೀಲನೆ ಮತ್ತು ಸಂದರ್ಶನ

    ಇದನ್ನು ಓದಿ: ನರೇಗಾ ಯೋಜನೆ ಅಡಿ ವಿವಿಧ ಜಿಲ್ಲಾ ಪಂಚಾಯತ್​ನಲ್ಲಿ ನೇಮಕಾತಿ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 2 ಸೆಪ್ಟೆಂಬರ್ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30ನೇ ಸೆಪ್ಟೆಂಬರ್ 2022
    ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 1 ಅಕ್ಟೋಬರ್ 2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅನುಬಂಧ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: kpsc.kar.nic.in

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    -ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ಇತ್ಯಾದಿ ದಾಖಲೆಗಳನ್ನು ಅರ್ಜಿಯಲ್ಲಿ ದಾಖಲಿಸಿ

    -ಅನ್ವಯಿಸಿದರೆ, ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.

    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ
    Published by:Seema R
    First published: