• Home
  • »
  • News
  • »
  • jobs
  • »
  • KPSC Recruitment 2022: ಜಲ ಸಂಪನ್ಮೂಲ ಇಲಾಖೆಯಲ್ಲಿ 169 ಜೆಇ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

KPSC Recruitment 2022: ಜಲ ಸಂಪನ್ಮೂಲ ಇಲಾಖೆಯಲ್ಲಿ 169 ಜೆಇ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಬೇಗ ಅರ್ಜಿ ಸಲ್ಲಿಸಿ

ಬೇಗ ಅರ್ಜಿ ಸಲ್ಲಿಸಿ

ಇಲಾಖೆಯಲ್ಲಿ 169 ಜ್ಯೂನಿಯರ್​ ಇಂಜಿನಿಯರ್​ ಹುದ್ದೆ ಭರ್ತಿಗೆ ಕೆಪಿಎಸ್​ಸಿಯಿಂದ ಅಧಿಸೂಚನೆ ಹೊರಡಿಸಲಾಗಿದೆ.

  • Share this:

    ಜಲ ಸಂಪನ್ಮೂಲ ಇಲಾಖೆಯಲ್ಲಿ(Water Resource Department) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕ ಸೇವಾ ಆಯೋಗ (Karnataka Public Service Commission) ಅಧಿಸೂಚನೆ ಹೊರಡಿಸಿದೆ. ಇಲಾಖೆಯಲ್ಲಿ 169 ಜ್ಯೂನಿಯರ್​ ಇಂಜಿನಿಯರ್ (Junior Engineer -JE)​ ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಹೈದ್ರಾಬಾದ್​- ಕರ್ನಾಟಕ ವೃಂದದಲ್ಲಿನ ಗ್ರೂಪ್​ ಸಿ ಹುದ್ದೆ ಭರ್ತಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್​ 17 ಆಗಿದೆ.


    ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.


    ಸಂಸ್ಥೆಯ ಹೆಸರು: ಕರ್ನಾಟಕ ಲೋಕಸೇವಾ ಆಯೋಗ (KPSC)
    ಹುದ್ದೆಯ ಹೆಸರು: ಜೂನಿಯರ್ ಇಂಜಿನಿಯರ್ (ಜೆಇ)
    ಹುದ್ದೆಗಳ ಸಂಖ್ಯೆ: 169
    ಉದ್ಯೋಗ ಸ್ಥಳ: ಕರ್ನಾಟಕ
    ವೇತನ: 33450-62600 ರೂ. ಪ್ರತಿ ತಿಂಗಳು

    ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆ
    ಜೂನಿಯರ್ ಇಂಜಿನಿಯರ್ (ಸಿವಿಲ್)166ನೀಡಲಾದ ಸಿವಿಲ್ ಇಂಜಿನಿಯರಿಂಗ್ ಡಿಪ್ಲೊಮಾ
    ಜೂನಿಯರ್ ಇಂಜಿನಿಯರ್ (ಮೆಕ್ಯಾನಿಕಲ್)3ಮೆಕ್ಯಾನಿಕಲ್ ಇಂಜಿನಿಯರಿಂಗ್ ಡಿಪ್ಲೊಮಾ

    ವಯೋಮಿತಿ: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.


    ಇದನ್ನು ಓದಿ: ಬೆಸ್ಕಾಂನಲ್ಲಿ 400 ಅಪ್ರೆಂಟಿಸ್​ ಹುದ್ದೆಗೆ ಅರ್ಜಿ ಆಹ್ವಾನ


    ವಯೋಮಿತಿ ಸಡಿಲಿಕೆ:
    ಒಬಿಸಿ, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: 3 ವರ್ಷಗಳು
    ಪ.ಜಾ, ಪ.ಪಂ ಅಭ್ಯರ್ಥಿಗಳು: 5 ವರ್ಷಗಳು
    ವಿಕಲಚೇತನ ಅಭ್ಯರ್ಥಿಗಳು: 10 ವರ್ಷಗಳು


    ಅರ್ಜಿ ಶುಲ್ಕ:
    ಪ.ಜಾ, ಪ.ಪಂ, ಪ್ರವರ್ಗ 1 ಮತ್ತು ವಿಕಲಚೇತನ ಅಭ್ಯರ್ಥಿಗಳು: 35 ರೂ.
    ಮಾಜಿ ಸೈನಿಕ ಅಭ್ಯರ್ಥಿಗಳು: 85 ರೂ.
    ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ  ಅಭ್ಯರ್ಥಿಗಳು: 335 ರೂ.
    ಸಾಮಾನ್ಯ ಅಭ್ಯರ್ಥಿಗಳು: 635 ರೂ


    ಪಾವತಿ ವಿಧಾನ: ಆನ್‌ಲೈನ್


    ಆಯ್ಕೆ ಪ್ರಕ್ರಿಯೆ:
    ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನ


    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 19 ಅಕ್ಟೋಬರ್​​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17 ನವೆಂಬರ್ 2022
    ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 18 ನವೆಂಬರ್ 2022


    ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: kpsc.kar.nic.in


    ಇದನ್ನು ಓದಿ: 105 ಸಾಂಖ್ಯಿಕ ನೀರಿಕ್ಷಕರ ಹುದ್ದೆ ನೇಮಕಾತಿ; ಯಾವುದೇ ಡಿಗ್ರಿ ಆಗಿದ್ರೂ ಅರ್ಜಿ ಸಲ್ಲಿಸಿ


    ಅರ್ಜಿ ಸಲ್ಲಿಕೆ ಪ್ರಕ್ರಿಯೆ


    ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.


    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.


    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್ ನೀಡಿ. ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ನೀಡಿ.


    -ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕ ಪಾವತಿಸಿ, ಅದರ ಮಾಹಿತಿ ಅಪ್​ಲೋಡ್​ ಮಾಡಿ.


    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿದ ಬಳಿಕ ಸಲ್ಲಿಸು ಬಟನ್​ ಕ್ಲಿಕ್​ ಮಾಡಿ

    Published by:Seema R
    First published: