• Home
  • »
  • News
  • »
  • jobs
  • »
  • KPSC Recruitment 2022: ಸಹಾಯಕ ಸಾಂಖ್ಯಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಹಾಕಲು ಇವತ್ತೇ ಕೊನೆ ದಿನ, ಇಲ್ಲಿ Apply ಮಾಡಿ

KPSC Recruitment 2022: ಸಹಾಯಕ ಸಾಂಖ್ಯಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಹಾಕಲು ಇವತ್ತೇ ಕೊನೆ ದಿನ, ಇಲ್ಲಿ Apply ಮಾಡಿ

KPSC

KPSC

KPSC Recruitment 2022: ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಸಹಾಯಕ ಸಾಂಖ್ಯಿಕ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 37,900-70,850 ವೇತನ ನೀಡಲಾಗತ್ತದೆ.

  • News18 Kannada
  • Last Updated :
  • Karnataka, India
  • Share this:

    KPSC Recruitment 2022: ಕರ್ನಾಟಕ ಲೋಕಸೇವಾ ಆಯೋಗ(Karnataka Public Service Commission)ದಲ್ಲಿ ಖಾಲಿ ಇರುವ 58 ಸಹಾಯಕ ಸಾಂಖ್ಯಿಕ ಅಧಿಕಾರಿ(Assistant Statistical Officer) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇವತ್ತೇ ಕೊನೆಯ ದಿನ(Last Date)ವಾಗಿದೆ. ರಾಜ್ಯ ಸರ್ಕಾರದ ನೌಕರಿ(State Government Job) ಹುಡುಕುತ್ತಿರುವ ಉದ್ಯೋಗಾಂಕ್ಷಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಅಭ್ಯರ್ಥಿಗಳು ತಡಮಾಡದೇ ಈಗಲೇ ಅರ್ಜಿ ಹಾಕಿ. ಸರ್ಕಾರಿ ಉದ್ಯೋಗ ಗಿಟ್ಟಿಸಿಕೊಳ್ಳಿ.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಕರ್ನಾಟಕ ಲೋಕಸೇವಾ ಆಯೋಗ
    ಹುದ್ದೆಯ ಹೆಸರುಸಹಾಯಕ ಸಾಂಖ್ಯಿಕ ಅಧಿಕಾರಿ
    ಒಟ್ಟು ಹುದ್ದೆ58
    ವಿದ್ಯಾರ್ಹತೆಸ್ನಾತಕೋತ್ತರ ಪದವಿ
    ವೇತನಮಾಸಿಕ ₹ 37,900-70,850
    ಸ್ಥಳಕರ್ನಾಟಕ
    ಅರ್ಜಿ ಸಲ್ಲಿಕೆ ಬಗೆಆನ್​ಲೈನ್​
    ಅರ್ಜಿ ಸಲ್ಲಿಸಲು ಕೊನೆ ದಿನ18/11/2022


    ಅರ್ಹತಾ ಮಾನದಂಡಗಳೇನು?


    ಶೈಕ್ಷಣಿಕ ಅರ್ಹತೆ:
    ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಗಣಿತಶಾಸ್ತ್ರ, ಶುದ್ಧ ಗಣಿತಶಾಸ್ತ್ರ, ಅಂಕಿಅಂಶಗಳು, ಅನ್ವಯಿಕ ಅಂಕಿಅಂಶಗಳು, ಅಂಕಿಅಂಶಗಳು/ಕ್ವಾಂಟಿಟೇಟಿವ್ ತಂತ್ರಗಳೊಂದಿಗೆ ಅರ್ಥಶಾಸ್ತ್ರ, ಶುದ್ಧ ಅರ್ಥಶಾಸ್ತ್ರ, ಅನ್ವಯಿಕ ಅರ್ಥಶಾಸ್ತ್ರ, ಅನ್ವಯಿಕ ಗಣಿತಶಾಸ್ತ್ರ, ಅರ್ಥಶಾಸ್ತ್ರ ಅಥವಾ ಕಂಪ್ಯೂಟರ್ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.


    ವಯೋಮಿತಿ:
    ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನವೆಂಬರ್ 18, 2022ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.


    ಇದನ್ನೂ ಓದಿ: JOB ALERT: ಚಿಕ್ಕಬಳ್ಳಾಪುರ ಜಿಲ್ಲಾ ನಿರ್ಮಿತಿ ಕೇಂದ್ರದಲ್ಲಿ ಡಿಗ್ರಿ ಆದವರಿಗೆ ಉದ್ಯೋಗ- ಇವತ್ತೇ ಇ-ಮೇಲ್ ಮಾಡಿ


    ವಯೋಮಿತಿ ಸಡಿಲಿಕೆ:
    ಎಸ್​ಸಿ/ಎಸ್​ಟಿ/ ಪ್ರವರ್ಗ-1 ಅಭ್ಯರ್ಥಿಗಳು-5 ವರ್ಷ
    ಪ್ರವರ್ಗ-2ಎ/2ಬಿ/3ಎ & 3ಬಿ ಅಭ್ಯರ್ಥಿಗಳು-3 ವರ್ಷ
    PH/ವಿಧವಾ ಅಭ್ಯರ್ಥಿಗಳು-10 ವರ್ಷ


    ವೇತನ:
    ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಸಹಾಯಕ ಸಾಂಖ್ಯಿಕ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 37,900-70,850 ವೇತನ ನೀಡಲಾಗತ್ತದೆ.


    ಅರ್ಜಿ ಶುಲ್ಕ:
    ಎಸ್​ಸಿ/ಎಸ್​ಟಿ/ ಪ್ರವರ್ಗ-1 & PH ಅಭ್ಯರ್ಥಿಗಳು- 35 ರೂ.
    ಮಾಜಿ ಸೈನಿಕ ಅಭ್ಯರ್ಥಿಗಳು-85 ರೂ.
    ಪ್ರವರ್ಗ-2ಎ/2ಬಿ/3ಎ & 3ಬಿ ಅಭ್ಯರ್ಥಿಗಳು- 335 ರೂ.
    ಸಾಮಾನ್ಯ ಅಭ್ಯರ್ಥಿಗಳು-635 ರೂ.
    ಶುಲ್ಕ ಪಾವತಿಸುವ ಬಗೆ- ಆನ್​ಲೈನ್​


    ಹುದ್ದೆಯ ಕುರಿತಾದ ಅಧಿಕೃತ ನೋಟಿಫಿಕೇಶನ್ ಇಲ್ಲಿದೆ.


    KPSC Notification


    ಆಯ್ಕೆ ಪ್ರಕ್ರಿಯೆ:
    ಕನ್ನಡ ಭಾಷಾ ಪರೀಕ್ಷೆ
    ಸ್ಪರ್ಧಾತ್ಮಕ ಪರೀಕ್ಷೆ


    ಅರ್ಜಿ ಸಲ್ಲಿಸುವುದು ಹೇಗೆ?


    ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 20/10/2022
    ಅರ್ಜಿ ಸಲ್ಲಿಸಲು ಕೊನೆ ದಿನ: 18/11/2022
    ಅರ್ಜಿ ಶುಲ್ಕ ಕಟ್ಟಲು ಕೊನೆ ದಿನ-19/11/2022


    ಇದನ್ನೂ ಓದಿ: Government Job: ಶಿರಸಿಯಲ್ಲಿ 5 ಹುದ್ದೆಗಳು ಖಾಲಿ ಇವೆ, ತಿಂಗಳಿಗೆ ₹40,000 ಸಂಬಳ- ನ.30ಕ್ಕೆ ಸಂದರ್ಶನ


    ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಬಹುದು.


    ಕೇಂದ್ರ ಕಚೇರಿ ಮಾಹಿತಿ ಕೇಂದ್ರ: 080-30574957/30574901


    ಪ್ರಾಂತೀಯ ಕಛೇರಿ ಮೈಸೂರು: 0821-2545956


    ಪ್ರಾಂತೀಯ ಕಛೇರಿ ಬೆಳಗಾವಿ: 0831-2475345


    ಪ್ರಾಂತೀಯ ಕಛೇರಿ ಕಲಬುರಗಿ: 08472-227944


    ಪ್ರಾಂತೀಯ ಕಛೇರಿ ಶಿವಮೊಗ್ಗ: 08182-228099


    ಸಹಾಯವಾಣಿ ಸಂಖ್ಯೆ: 18005728707

    Published by:Latha CG
    First published: