KPSC Recruitment: ಸಹಾಯಕ ವಿದ್ಯುತ್​ ಪರಿವೀಕ್ಷಕರ ನೇಮಕಾತಿ; ಆಗಸ್ಟ್​ 23 ಅರ್ಜಿ ಸಲ್ಲಿಕೆಗೆ ಕಡೆಯ ದಿನ

ಕರ್ನಾಟಕ ನಾಗರೀಕ ಸೇನಾ ನಿಯಮಗಳ ಅನುಸಾರ ಉಳಿಕೆ ಮೂಲ ವೃಂದದಲ್ಲಿ ಈ ಗ್ರೂಪ್​ ಬಿ ಹುದ್ದೆಗಳ ಭರ್ತಿಗೆ ಕೆಪಿಎಸ್​ಸಿ ಮುಂದಾಗಿದೆ.

 ಹುದ್ದೆಗೆ ಅರ್ಜಿ ಹಾಕಿ

ಹುದ್ದೆಗೆ ಅರ್ಜಿ ಹಾಕಿ

  • Share this:
    ಕರ್ನಾಟಕ ಲೋಕಸೇವಾ ಆಯೋಗ (Karnataka Public Service Commission) 30 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಮುಖ್ಯ ವಿದ್ಯುತ್​ ಪರಿವೀಕ್ಷಣಾಲಯದಲ್ಲಿ ಕಾರ್ಯ ನಿರ್ವಹಿಸಲು ಸಹಾಯಕ ವಿದ್ಯುತ್​ ಪರಿವೀಕ್ಷಕರ (Assistant Electrical Inspector) ನೇಮಕಾತಿಗೆ ಮುಂದಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​ 23 ಆಗಿದೆ.

    ಕರ್ನಾಟಕ ನಾಗರೀಕ ಸೇನಾ ನಿಯಮಗಳ ಅನುಸಾರ ಉಳಿಕೆ ಮೂಲ ವೃಂದದಲ್ಲಿ ಈ ಗ್ರೂಪ್​ ಬಿ ಹುದ್ದೆಗಳ ಭರ್ತಿಗೆ ಕೆಪಿಎಸ್​ಸಿ ಮುಂದಾಗಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.




























    ಹುದ್ದೆ ಮಾಹಿತಿಹುದ್ದೆ ವಿವರ
    ಸಂಸ್ಥೆಕರ್ನಾಟಕ ಲೋಕಸೇವಾ ಆಯೋಗ (KPSC)
    ಹುದ್ದೆಸಹಾಯಕ ಎಲೆಕ್ಟ್ರಿಕಲ್ ಇನ್ಸ್‌ಪೆಕ್ಟರ್
    ಹುದ್ದೆಗಳ ಸಂಖ್ಯೆ30
    ಕಾರ್ಯ ನಿರ್ವಹಣೆ ಸ್ಥಳಕರ್ನಾಟಕದಾದ್ಯಂತ
    ವೇತನ43100-83900 ರೂ ಪ್ರತಿ ತಿಂಗಳು


    ಶೈಕ್ಷಣಿಕ ಅರ್ಹತೆ:  ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ / ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ ಪದವಿ ಪೂರ್ಣಗೊಳಿಸಿರಬೇಕು.

    ಇದನ್ನು ಓದಿ: ಎಸ್​ಎಸ್​ಎಲ್​ಸಿ ಪಾಸ್​ ಆಗಿದ್ರೆ ಹೈಕೋರ್ಟ್​ನಲ್ಲಿದೆ ಉದ್ಯೋಗಾವಕಾಶ; 150 ಹುದ್ದೆಗೆ ಅರ್ಜಿ ಆಹ್ವಾನ

    ವಯೋಮಿತಿ: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯುಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

    ವಯೋಮಿತಿ ಸಡಿಲಿಕೆ:
    ಪ.ಜಾ, ಪ.ಪಂ ಮತ್ತು ಪ್ರವರ್ಗ-1 ಅಭ್ಯರ್ಥಿಗಳು: 05 ವರ್ಷಗಳು
    ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: 03 ವರ್ಷಗಳು
    ವಿಕಲಚೇತನ, ವಿಧವೆ ಅಭ್ಯರ್ಥಿಗಳು: 10 ವರ್ಷಗಳು

    ಅರ್ಜಿ ಶುಲ್ಕ:
    ಪ.ಜಾ, ಪ.ಪಂ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ: 35 ರೂ
    ಮಾಜಿ ಸೈನಿಕ ಅಭ್ಯರ್ಥಿಗಳು: 85 ರೂ
    ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ: 335 ರೂ
    ಸಾಮಾನ್ಯ ಅಭ್ಯರ್ಥಿಗಳು: 635 ರೂ

    ಆಯ್ಕೆ ಪ್ರಕ್ರಿಯೆ:
    ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 25 ಜುಲೈ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23 ಆಗಸ್ಟ್ 2022
    ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 24 ಆಗಸ್ಟ್ 2022

    ಇದನ್ನು ಓದಿ: ರಾಜೀವ್​ ಗಾಂಧಿ ಆರೋಗ್ಯ ವಿವಿಯಲ್ಲಿದೆ ಎಂಸಿಎ ಆದವರಿಗೆ ಉದ್ಯೋಗಾವಕಾಶ

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: kpsc.kar.nic.in'

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    -ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್,  ಇತ್ಯಾದಿ ದಾಖಲೆಗಳನ್ನು ಅರ್ಜಿಯಲ್ಲಿ ದಾಖಲಿಸಿ

    -ಅನ್ವಯಿಸಿದರೆ, ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.

    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ
    Published by:Seema R
    First published: