• Home
  • »
  • News
  • »
  • jobs
  • »
  • KPSC Recruitment: ಲೇಬರ್​ ಇನ್ಸ್​ಪೆಕ್ಟರ್​ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

KPSC Recruitment: ಲೇಬರ್​ ಇನ್ಸ್​ಪೆಕ್ಟರ್​ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

ಕೆಪಿಎಸ್​ಸಿ

ಕೆಪಿಎಸ್​ಸಿ

ಅರ್ಜಿ ಸಲ್ಲಿಕೆಯನ್ನು ಅನ್​ಲೈನ್​ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 30 ಆಗಿದೆ.

  • Share this:

    ಕರ್ನಾಟಕ ಲೋಕ ಸೇವಾ ಆಯೋಗದಿಂದ (Karnataka Public Service Commission) ಲೇಬರ್​ ಇನ್ಸ್​ಪೆಕ್ಟರ್ (Labor Inspector)​ ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಹೈದ್ರಬಾದ್​ ಕರ್ನಾಟಕ ವೃಂದದ ಒಟ್ಟು ಆರು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಯನ್ನು ಅನ್​ಲೈನ್​ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 30 ಆಗಿದೆ.


    ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ಹುದ್ದೆ ಮಾಹಿತಿಹುದ್ದೆ ವಿವರ
    ಸಂಸ್ಥೆಯ ಹೆಸರುಕರ್ನಾಟಕ ಲೋಕಸೇವಾ ಆಯೋಗ (KPSC)
    ಹುದ್ದೆಯ ಹೆಸರುಲೇಬರ್ ಇನ್ಸ್‌ಪೆಕ್ಟರ್
    ಹುದ್ದೆಗಳ ಸಂಖ್ಯೆ6
    ಉದ್ಯೋಗ ಸ್ಥಳಕರ್ನಾಟಕ
    ವೇತನ33450-62600 ರೂ ಮಾಸಿಕ

    ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.


    ಇದನ್ನು ಓದಿ: ಡ್ರಗ್​ ಇನ್ಸ್​ಪೆಕ್ಟರ್​ ಹುದ್ದೆ ನೇಮಕಾತಿ; ಇಲ್ಲಿದೆ ವಿವರ


    ವಯೋಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.


    ವಯೋಮಿತಿ ಸಡಿಲಿಕೆ:
    ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳು: 5 ವರ್ಷಗಳು
    ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: 3 ವರ್ಷಗಳು
    ವಿಕಲಚೇತನ /ವಿಧವೆ ಅಭ್ಯರ್ಥಿಗಳು: 10 ವರ್ಷಗಳು


    ಅರ್ಜಿ ಶುಲ್ಕ:
    ಪ.ಜಾ, ಪ.ಪಂ ಮತ್ತು ಪ್ರವರ್ಗ 1, ವಿಕಲ ಚೇತನ ಅಭ್ಯರ್ಥಿಗಳು: 35 ರೂ.
    ಮಾಜಿ ಸೈನಿಕ ಅಭ್ಯರ್ಥಿಗಳು: 85 ರೂ.
    ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: 335 ರೂ.
    ಸಾಮಾನ್ಯ ಅಭ್ಯರ್ಥಿಗಳು: 635 ರೂ.


    ಪಾವತಿ ವಿಧಾನ: ಆನ್‌ಲೈನ್


    ಆಯ್ಕೆ ಪ್ರಕ್ರಿಯೆ:
    ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ


    ಇದನ್ನು ಓದಿ:  ಡಾಟಾ ಎಂಟ್ರಿ ಆಪರೇಟರ್​ ಹುದ್ದೆಗೆ ಅರ್ಜಿ ಆಹ್ವಾನ; ಪಿಯುಸಿ ಆಗಿದ್ರೆ ಸಾಕು


    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01 ಅಕ್ಟೋಬರ್​​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಅಕ್ಟೋಬರ್ 2022
    ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 31 ಅಕ್ಟೋಬರ್ 2022


    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: kpsc.kar.nic.in


    ಅರ್ಜಿ ಸಲ್ಲಿಕೆ ವಿಧಾನ


    -ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.


    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.


    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.


    -ಅನ್ವಯಿಸಿದರೆ, ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.
    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್​ ಕ್ಲಿಕ್​ ಮಾಡಿ

    Published by:Seema R
    First published: