BBMP Recruitment 2022: ಬಿಬಿಎಂಪಿಯಲ್ಲಿ ನೇಮಕಾತಿ; ಗ್ರೂಪ್​ ಎ ಮತ್ತು ಬಿ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

BBMP Recruitment 2022: ಬಿಬಿಎಂಪಿಯಲ್ಲಿ ಖಾಲಿ ಇರುವ ಗ್ರೂಪ್​​ ಎ ಮತ್ತು ಗ್ರೂಪ್​ ಬಿ ವೃಂದದಲ್ಲಿನ ಬ್ಯಾಕ್​ ಲಾಗ್​​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಬಿಬಿಎಂಪಿ

ಬಿಬಿಎಂಪಿ

  • Share this:
    ಕರ್ನಾಟಕ ಲೋಕ ಸೇವಾ ಆಯೋಗದಿಂದ (Karnataka Public Service Commission) ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ (BBMP) ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಬಿಬಿಎಂಪಿಯಲ್ಲಿ ಖಾಲಿ ಇರುವ ಗ್ರೂಪ್​​ ಎ ಮತ್ತು ಗ್ರೂಪ್​ ಬಿ ವೃಂದದಲ್ಲಿನ ಬ್ಯಾಕ್​ ಲಾಗ್​​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 14 ಆಗಿದೆ.

    ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ಸಂಸ್ಥೆ: ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ
    ಹುದ್ದೆಯ ಹೆಸರು: ಗ್ರೂಪ್​ ಎ ಮತ್ತು ಗ್ರೂಪ್​ ಬಿ
    ಒಟ್ಟು ಹುದ್ದೆಗಳು: 4
    ಕಾರ್ಯ ನಿರ್ವಹಣೆ ಸ್ಥಳ: ಬೆಂಗಳೂರು
    ವೇತನ: 43,100- 97100 ರೂ ಮಾಸಿಕ
























    ವರ್ಗಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆವೇತನ
    ಗ್ರೂಪ್​ ಎ ಹುದ್ದೆಗಳುಸಹಾಯಕ ಶಸ್ತ್ರ ಚಿಕಿತ್ಸಕರು (ಲೇಡಿ ಮೆಡಿಕಲ್​ ಆಫೀಸರ್​1 (ಬ್ಯಾಲಾ)ಎಂಬಿಬಿಎಸ್​​52,650- 97,100 ರೂ ಮಾಸಿಕ
    ಗ್ರೂಪ್​ ಬಿ ಹುದ್ದೆಗಳುತಮಿಳು ಉಪನ್ಯಾಸಕರು3 (ಬ್ಯಾಲಾ)ತಮಿಳು ಭಾಷೆಯಲ್ಲಿ ಸ್ನಾತಕೋತ್ತರ ಪದವಿ43,100-83900 ರೂ ಮಾಸಿಕ

    ವಯೋಮಿತಿ: ಅದಿಕೃತ ನೇಮಕಾತಿ ಅಧಿಸೂಚನೆ ಅನುಸಾರ ಅಭ್ಯರ್ಥಿಯು ಕನಿಷ್ಟ 18 ವರ್ಷ ಆಗಿದ್ದು, ಗರಿಷ್ಟ 40 ವರ್ಷ ಮೀರಿರಬಾರದು.

    ಇದನ್ನು ಓದಿ: ಬಿಎಚ್​ಇಎಲ್​ನಲ್ಲಿ 150 ಟ್ರೈನಿ ಹುದ್ದೆಗೆ ಅರ್ಜಿ ಆಹ್ವಾನ

    ಅರ್ಜಿ ಸಲ್ಲಿಕೆ: ಆನ್​ಲೈನ್​

    ಆಯ್ಕೆ ವಿಧಾನ: ಮೆರಿಟ್​ ಮತ್ತು ಸಂದರ್ಶನ

    ಅರ್ಜಿ ಶುಲ್ಕ:
    ಪ.ಜಾ, ಪ.ಪಂ ಅಭ್ಯರ್ತಿಗಳು ಶುಲ್ಕ ವಿನಾಯಿತಿ ಇದೆ. ಆದರೆ 35 ರೂ ಪ್ರಕ್ರಿಯೆ ಶುಲ್ಕವನ್ನು ಕಡ್ಡಾಯವಾಗಿ ಪಾವತಿಸಬೇಕಿದೆ.

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 15 ಸೆಪ್ಟೆಂಬರ್​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14 ಅಕ್ಟೋಬರ್ 2022
    ಅರ್ಜಿ ಶುಲ್ಕ ಪಾವತಿಸಲು ಕಡೆಯ ದಿನಾಂಕ: 15 ಅಕ್ಟೋಬರ್​ 2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: kpsc.com

    ಇದನ್ನು ಓದಿ: ಕೇಂದ್ರ ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಅವಕಾಶ; ಎಸ್​ಎಸ್​ಸಿ ಸಿಜಿಲ್​ ಅಧಿಸೂಚನೆ ಬಿಡುಗಡೆ

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ

    - ಅರ್ಜಿಯಲ್ಲಿ ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ಸೇರಿದಂತೆ ಇನ್ನಿತರ ಅಗತ್ಯ ದಾಖಲೆಗಳ ಮಾಹಿತಿ ಭರ್ತಿ ಮಾಡಿ.

    -ನಿಮ್ಮ ವರ್ಗಕ್ಕೆ ಅನುಸಾರವಾಗಿ ಅರ್ಜಿ ಶುಲ್ಕ ಪಾವತಿಸಿ, ಅದರ ಮಾಹಿತಿ ಅಪ್​ಡೇಟ್​ ಮಾಡಿ

    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಸಲ್ಲಿಸು ಬಟನ್​ ಕ್ಲಿಕ್​ ಮಾಡಿ
    Published by:Seema R
    First published: