KRCL Recruitment 2021: ಕೊಂಕಣ ರೈಲ್ವೆ ಕಾರ್ಪೋರೇಷನ್ ಲಿಮಿಟೆಡ್(Konkan Railway Corporation Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 139 ಗ್ರಾಜುಯೇಟ್ ಅಪ್ರೆಂಟಿಸ್(Graduate Apprentice), ಟೆಕ್ನಿಕಲ್ ಅಪ್ರೆಂಟಿಸ್(Technical Apprentice) ಹುದ್ದೆಗಳು ಖಾಲಿ ಇವೆ. ಬಿಇ(BE), ಬಿ.ಟೆಕ್(B. Tech) ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರು. ಅಕ್ಟೋಬರ್ 22ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ನವೆಂಬರ್ 22 ಕೊನೆಯ ದಿನಾಂಕವಾಗಿದೆ. ಕೆಆರ್ಸಿಎಲ್ ನೇಮಕಾತಿ -2021(KRCL Recruitment-2021)ರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು www.konkanrailway.com ಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ |
ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ |
ಹುದ್ದೆಯ ಹೆಸರು |
ಗ್ರಾಜುಯೇಟ್ ಅಪ್ರೆಂಟಿಸ್, ಟೆಕ್ನಿಕಲ್ ಅಪ್ರೆಂಟಿಸ್ |
ಒಟ್ಟು ಹುದ್ದೆಗಳು |
139 ಹುದ್ದೆಗಳು |
ಜಾಹೀರಾತು ಸಂಖ್ಯೆ |
CO/APPR/2021/ 01 |
ವಿದ್ಯಾರ್ಹತೆ |
ಬಿ.ಇ, ಬಿ.ಟೆಕ್, ಡಿಪ್ಲೋಮಾ |
ಕೆಲಸದ ಸ್ಥಳ |
ಪ್ಯಾನ್ ಇಂಡಿಯಾ |
ಸಂಬಳ |
ಮಾಸಿಕ ₹3,542-4,987 |
ಅರ್ಜಿ ಸಲ್ಲಿಸುವ ಬಗೆ |
ಆನ್ಲೈನ್ |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ |
22/10/2021 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
22/11/2021 |
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22/10/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22/11/2021
ಅರ್ಜಿ ಶುಲ್ಕ:
ಅಭ್ಯರ್ಥಿಗಳು 100 ರೂಪಾಯಿ ಅರ್ಜಿ ಶುಲ್ಕ ಪಾವತಿಸಬೇಕು.
ಎಸ್ಸಿ/ಎಸ್ಟಿ/ಮಹಿಳೆಯರು/ಅಲ್ಪಸಂಖ್ಯಾತರು/ಇಡಬ್ಲ್ಯೂಎಸ್/ ವಿಶೇಷ ಚೇತನ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇಲ್ಲ.
ಇದನ್ನೂ ಓದಿ:DRDO Recruitment 2021: ಡಿಆರ್ಡಿಒದಲ್ಲಿ 21 ಹುದ್ದೆಗಳು ಖಾಲಿ; BE, B. Tech ಪದವೀಧರರಿಗೆ ಅವಕಾಶ
ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಡಿಪ್ಲೋಮಾ/ಎಂಜಿನಿಯರಿಂಗ್ ಪದವಿ ಪಡೆದಿರಬೇಕು.
ವಯೋಮಿತಿ:
18-25 ವರ್ಷ
ಸಂಬಳ:
ಗ್ರಾಜುಯೇಟ್ ಅಪ್ರೆಂಟಿಸ್ ಮತ್ತು ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 3,542-4,987 ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ
ಇದನ್ನೂ ಓದಿ:CRPF Recruitment 2021: ತಿಂಗಳಿಗೆ ₹85,000 ಸಂಬಳ, ಸಿಆರ್ಪಿಎಫ್ನಲ್ಲಿ 60 ಮೆಡಿಕಲ್ ಆಫೀಸರ್ ಹುದ್ದೆಗಳು ಖಾಲಿ
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲಿಗೆ ಕೆಆರ್ಸಿಎಲ್ನ ಅಧಿಕೃತ ವೆಬ್ಸೈಟ್ www.konkanrailway.comಗೆ ಭೇಟಿ ನೀಡಬೇಕು.
- ಅಲ್ಲಿ ಕಾಣಸಿಗುವ “Recruitment/ Career/ Advertisement menu” ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಖಾಲಿ ಇರುವ ಹುದ್ದೆಗಳ ನೋಟಿಫಿಕೇಶನ್ಗಾಗಿ ಸರ್ಚ್ ಮಾಡಿ, ಅದರ ಮೇಲೆ ಕ್ಲಿಕ್ ಮಾಡಿ.
- ಅಧಿಕೃತ ನೋಟಿಫಿಕೇಶನ್ನ ಲಿಂಕ್ನ್ನು ಡೌನ್ಲೋಡ್ ಮಾಡಿಕೊಳ್ಳಿ.
- ನೋಟಿಫಿಕೇಶನ್ನಲ್ಲಿ ನೀಡಲಾಗಿರುವ ಎಲ್ಲಾ ಸೂಚನೆಗಳನ್ನು ಸರಿಯಾಗಿ ಓದಿ.
- ಕೆಳಗೆ ನೀಡಲಾಗಿರುವ Official Online Apply/ Registration ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಅಗತ್ಯ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ
- ಕೇಳಿರುವ ಎಲ್ಲಾ ಅಗತ್ಯ ದಾಖಲೆಗಳನ್ನು ಸರಿಯಾದ ಫಾರ್ಮ್ಯಾಟ್ ಹಾಗೂ ಸೈಜಿನಲ್ಲಿ ಅಪ್ಲೋಡ್ ಮಾಡಿ.
- ಕೊನೆಯಲ್ಲಿ ಎಲ್ಲಾ ಮಾಹಿತಿ ಸರಿಯಾಗಿದೆಯೇ ಎಂದು ಪರಿಶೀಲಿಸಿ, ಸಬ್ಮಿಟ್ ಕೊಡಿ.
- ಬಳಿಕ ಸಂಸ್ಥೆ ಅರ್ಜಿ ಶುಲ್ಕ ಕೇಳಿದ್ದರೆ, ಪಾವತಿಸಿ.
- ಕೊನೆಯಲ್ಲಿ ಅರ್ಜಿಯನ್ನು ಸಬ್ಮಿಟ್ ಮಾಡಿ, ಒಂದು ಪ್ರತಿಯನ್ನು ಪ್ರಿಂಟ್ ಔಟ್ ತೆಗೆದುಕೊಳ್ಳಿ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ. ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ