KRCL Recruitment 2021: ಎಂಜಿನಿಯರಿಂಗ್ ಅಭ್ಯರ್ಥಿಗಳಿಗೆ ರೈಲ್ವೆ ಇಲಾಖೆಯಲ್ಲಿ ಬಂಪರ್ ಉದ್ಯೋಗ

ಅಕ್ಟೋಬರ್ 22ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ನವೆಂಬರ್ 22 ಕೊನೆಯ ದಿನಾಂಕವಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
KRCL Recruitment 2021: ಕೊಂಕಣ ರೈಲ್ವೆ ಕಾರ್ಪೋರೇಷನ್ ಲಿಮಿಟೆಡ್(Konkan Railway Corporation Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 139 ಗ್ರಾಜುಯೇಟ್ ಅಪ್ರೆಂಟಿಸ್(Graduate Apprentice), ಟೆಕ್ನಿಕಲ್ ಅಪ್ರೆಂಟಿಸ್(Technical Apprentice) ಹುದ್ದೆಗಳು ಖಾಲಿ ಇವೆ. ಬಿಇ(BE), ಬಿ.ಟೆಕ್(B. Tech)​ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರು. ಅಕ್ಟೋಬರ್ 22ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ನವೆಂಬರ್ 22 ಕೊನೆಯ ದಿನಾಂಕವಾಗಿದೆ. ಕೆಆರ್​ಸಿಎಲ್​​ ನೇಮಕಾತಿ -2021(KRCL Recruitment-2021)ರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು www.konkanrailway.com ಗೆ ಭೇಟಿ ನೀಡಬಹುದು.ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್
ಹುದ್ದೆಯ ಹೆಸರುಗ್ರಾಜುಯೇಟ್ ಅಪ್ರೆಂಟಿಸ್, ಟೆಕ್ನಿಕಲ್ ಅಪ್ರೆಂಟಿಸ್
ಒಟ್ಟು ಹುದ್ದೆಗಳು139 ಹುದ್ದೆಗಳು
ಜಾಹೀರಾತು ಸಂಖ್ಯೆCO/APPR/2021/ 01
ವಿದ್ಯಾರ್ಹತೆಬಿ.ಇ, ಬಿ.ಟೆಕ್, ಡಿಪ್ಲೋಮಾ
ಕೆಲಸದ ಸ್ಥಳಪ್ಯಾನ್ ಇಂಡಿಯಾ
ಸಂಬಳಮಾಸಿಕ ₹3,542-4,987
ಅರ್ಜಿ ಸಲ್ಲಿಸುವ ಬಗೆಆನ್​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ22/10/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ22/11/2021ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22/10/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22/11/2021

ಇದನ್ನೂ ಓದಿ:NHB Recruitment 2021: ತಿಂಗಳಿಗೆ ₹ 70,000 ಸಂಬಳ, ನ್ಯಾಷನಲ್ ಹಾರ್ಟಿಕಲ್ಚರ್​ ಬೋರ್ಡ್​​ನಲ್ಲಿ ಪದವೀಧರರಿಗೆ ಉದ್ಯೋಗ

ಅರ್ಜಿ ಶುಲ್ಕ:

ಅಭ್ಯರ್ಥಿಗಳು 100 ರೂಪಾಯಿ ಅರ್ಜಿ ಶುಲ್ಕ ಪಾವತಿಸಬೇಕು.
ಎಸ್​ಸಿ/ಎಸ್​ಟಿ/ಮಹಿಳೆಯರು/ಅಲ್ಪಸಂಖ್ಯಾತರು/ಇಡಬ್ಲ್ಯೂಎಸ್​/ ವಿಶೇಷ ಚೇತನ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇಲ್ಲ.

ವಿದ್ಯಾರ್ಹತೆ:

ಗ್ರಾಜುಯೇಟ್​ ಅಪ್ರೆಂಟಿಸ್ ಮತ್ತು ಟೆಕ್ನಿಕಲ್​ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಡಿಪ್ಲೋಮಾ/ಎಂಜಿನಿಯರಿಂಗ್​ ಪದವಿ ಪಡೆದಿರಬೇಕು.

ವಯೋಮಿತಿ:

ಗ್ರಾಜುಯೇಟ್​ ಅಪ್ರೆಂಟಿಸ್ ಮತ್ತು ಟೆಕ್ನಿಕಲ್​ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18-25 ವರ್ಷದೊಳಗಿರಬೇಕು.

ಸಂಬಳ:

ಗ್ರಾಜುಯೇಟ್​ ಅಪ್ರೆಂಟಿಸ್ ಮತ್ತು ಟೆಕ್ನಿಕಲ್​ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 3,542-4,987 ವೇತನ ನೀಡಲಾಗುತ್ತದೆ.

ಇದನ್ನೂ ಓದಿ:RDPR Karnataka Jobs: ತಿಂಗಳಿಗೆ ₹ 35,000 ಸಂಬಳ, ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಲ್ಲಿ ಉದ್ಯೋಗ

ಆಯ್ಕೆ ಪ್ರಕ್ರಿಯೆ:

ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
Published by:Latha CG
First published: