KSHMA Recruitment 2021: ಕಾನೂನು ಸಲಹೆಗಾರರ ಹುದ್ದೆಗೆ ಅರ್ಜಿ ಆಹ್ವಾನ - ತಿಂಗಳಿಗೆ 50,00 ಸಂಬಳ

Job News: ಅಭ್ಯರ್ಥಿಗಳು ಕಾನೂನು ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರಬೇಕು. ಜೊತೆಗೆ ಅಭ್ಯರ್ಥಿಗಳು 5 ವರ್ಷಗಳ ಅನುಭವವನ್ನು ಹೊಂದಿರಬೇಕು.  

ಕಾನೂನು ಸಲಹೆಗಾರ ಹುದ್ದೆಗೆ ಅರ್ಜಿ ಸಲ್ಲಿಸಿ

ಕಾನೂನು ಸಲಹೆಗಾರ ಹುದ್ದೆಗೆ ಅರ್ಜಿ ಸಲ್ಲಿಸಿ

  • Share this:
ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರ (KSHMA), ಬೆಂಗಳೂರಿನಲ್ಲಿ(Bengaluru) ಕಾನೂನು ಸಲಹೆಗಾರ ಹುದ್ದೆಯನ್ನು( legal consultant) ಭರ್ತಿ ಮಾಡಲು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಡಿಸೆಂಬರ್ 14,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಇಲ್ಲಿದೆ































ಇಲಾಖೆಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರ
ಹುದ್ದೆಕಾನೂನು ಸಲಹೆಗಾರ
ಅರ್ಜಿ ಸಲ್ಲಿಸಲು ಕೊನೆ ದಿನಾಂಕಡಿಸೆಂಬರ್ 14,2021ರ ಸಂಜೆ 5 ಗಂಟೆಯೊಳಗೆ
ವಯೋಮಿತಿ45 ವರ್ಷದೊಳಗಿನವರು ಅರ್ಜಿ ಸಲ್ಲಿಸಬೇಕು
ವಿದ್ಯಾರ್ಹತೆಕಾನೂನು ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರಬೇಕು.
ವೇತನ50,000/-ರೂ
ಅರ್ಜಿ ಡೌನ್​ಲೋಡ್​ ಮಾಡುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

ವಿದ್ಯಾರ್ಹತೆ:

ಅಭ್ಯರ್ಥಿಗಳು ಕಾನೂನು ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರಬೇಕು. ಜೊತೆಗೆ ಅಭ್ಯರ್ಥಿಗಳು 5 ವರ್ಷಗಳ ಅನುಭವವನ್ನು ಹೊಂದಿರಬೇಕು.

ವಯೋಮಿತಿ :

ಕಾನೂನು ಸಲಹೆಗಾರ ಹುದ್ದೆಗೆ ಗರಿಷ್ಟ 45 ವರ್ಷದೊಳಗಿನವರು ಅರ್ಜಿ ಸಲ್ಲಿಸಬೇಕು

ಆಯ್ಕೆ ಪ್ರಕ್ರಿಯೆ:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಪಟ್ಟಿ ಮಾಡಲಾಗುವುದು. ತದನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ :

ಅಭ್ಯರ್ಥಿಗೆ ತಿಂಗಳಿಗೆ 50,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರ ನೇಮಕಾತಿಯ ಕಾನೂನು ಸಲಹೆಗಾರ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ www.karhfw.gov.in ಅಥವಾ www.kshma.in ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಡಿಸೆಂಬರ್ 14,2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ತಲುಪಿಸಬಹುದು.

ಕಚೇರಿ ವಿಳಾಸ:

ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರ, ಮತ್ತು ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, ಆರೋಗ್ಯ ಸೌಧ, ಮಾಗಡಿ ರಸ್ತೆ, ಬೆಂಗಳೂರು.

ಕೆಲಸ ಹುಡುಕುತ್ತಿದ್ದೀರಾ? ಎಲ್ಲಾ ಬಗೆಯ ಕೆಲಸದ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ
Published by:Sandhya M
First published: