KSLU Recruitment 2021: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ(Karnataka State Law University) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 18 ಅತಿಥಿ ಉಪನ್ಯಾಸಕರ ಹುದ್ದೆಗಳು ಖಾಲಿ ಇದ್ದು, ಎಲ್ಎಲ್ಬಿ(LLB), ಎಂಎಸ್ಸಿ(M. Sc), ಎಂಎ(MA), ಪಿಎಚ್.ಡಿ(Ph. D), ಎನ್ಇಟಿ(NET), ಎಸ್ಎಲ್ಇಟಿ(SLET) ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ನವೆಂಬರ್ 12ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ನವೆಂಬರ್ 26 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು kslu.karnataka.gov.in ಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ |
ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ |
ಹುದ್ದೆಯ ಹೆಸರು |
ಅತಿಥಿ ಉಪನ್ಯಾಸಕ |
ಒಟ್ಟು ಹುದ್ದೆಗಳು |
18 |
ವಿದ್ಯಾರ್ಹತೆ |
ಎಲ್ಎಲ್ಬಿ, ಎಂಎಸ್ಸಿ, ಎಂಎ, ಪಿಎಚ್.ಡಿ, ಎನ್ಇಟಿ, ಎಸ್ಎಲ್ಇಟಿ |
ಉದ್ಯೋಗದ ಸ್ಥಳ |
ಹುಬ್ಬಳ್ಳಿ- ಕರ್ನಾಟಕ |
ವೇತನ |
ನಿಯಮಾನುಸಾರ |
ಅರ್ಜಿ ಸಲ್ಲಿಕೆ ವಿಧಾನ |
ಆನ್ಲೈನ್ |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ |
12/11/2021 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
26/11/2021 |
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 12/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26/11/2021
ಇದನ್ನೂ ಓದಿ: Khadi Karnataka Recruitment 2021: ಕರ್ನಾಟಕ ಖಾದಿ ಮಂಡಳಿ ನೇಮಕಾತಿ; ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎರಡೇ ದಿನ ಬಾಕಿ
ಹುದ್ದೆಯ ಮಾಹಿತಿ:
ಅತಿಥಿ ಉಪನ್ಯಾಸಕರನ್ನು ಈ ಕೆಳಕಂಡ ವಿಷಯಗಳಿಗೆ ನೇಮಿಸಿಕೊಳ್ಳಲಾಗುತ್ತದೆ.
ಕಾನೂನು- 12 ಹುದ್ದೆಗಳು
ಕನ್ನಡ-02 ಹುದ್ದೆಗಳು
ರಾಜ್ಯಶಾಸ್ತ್ರ-01 ಹುದ್ದೆ
ಸಮಾಜಶಾಸ್ತ್ರ- 01 ಹುದ್ದೆ
ಅರ್ಥಶಾಸ್ತ್ರ- 01 ಹುದ್ದೆ
ವಾಣಿಜ್ಯಶಾಸ್ತ್ರ- 01 ಹುದ್ದೆ
ಉದ್ಯೋಗದ ಸ್ಥಳ:
ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಹುಬ್ಬಳ್ಳಿಯ ಕಾನೂನು ವಿಶ್ವವಿದ್ಯಾಲಯದಲ್ಲಿ ಉದ್ಯೋಗ ನೀಡಲಾಗುತ್ತದೆ.
ವಿದ್ಯಾರ್ಹತೆ:
ಅಭ್ಯರ್ಥಿಗಳು ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ಜೊತೆಗೆ NET/SLET/Ph. D ಮಾಡಿರಬೇಕು.
ವೇತನ:
ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ಮಾಸಿಕ ವೇತನ ನೀಡಲಾಗುತ್ತದೆ.
ಇದನ್ನೂ ಓದಿ: MGNREGA Recruitment 2021: ನರೇಗಾ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಅವಕಾಶ
ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ. ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ