KSSIDC Recruitment: ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದಲ್ಲಿ ನೇಮಕಾತಿ: ಬಿಇ ಆದವರಿಗೆ ಅವಕಾಶ

ಈ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗುತ್ತಿದ್ದು, ಒಟ್ಟು 7 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ

ಬೇಗ ಅರ್ಜಿ ಸಲ್ಲಿಸಿ

ಬೇಗ ಅರ್ಜಿ ಸಲ್ಲಿಸಿ

  • Share this:
    ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದಲ್ಲಿ ಸಹಾಯಕ ಇಂಜಿನಿಯರ್​ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಈಗಾಗಲೇ ಸರ್ಕಾರದಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ಸರ್ಕಾರಿ ಇಂಜಿನಿಯರ್​ಗಳು ಮಾತ್ರ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗುತ್ತಿದ್ದು, ಒಟ್ಟು 7 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. 65 ವರ್ಷದೊಳಗಿನ ಆಸಕ್ತಿಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 16 ಆಗಿದೆ. ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಬಹುದಾಗಿದೆ.

    ಸಂಸ್ಥೆಯ ಹೆಸರು: ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಲಿಮಿಟೆಡ್ (KSSIDC)
    ಹುದ್ದೆಯ ಹೆಸರು: ಸಹಾಯಕ ಇಂಜಿನಿಯರ್, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್​

    ಹುದ್ದೆಗಳ ಸಂಖ್ಯೆ: 07
    ಉದ್ಯೋಗ ಸ್ಥಳ: ಬೆಂಗಳೂರು
    ಸಂಬಳ: ಕೆಎಸ್​ಎಸ್​ಐಡಿಸಿ ನಿಯಮಗಳ ಪ್ರಕಾರ























    ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆ
    ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ಸಿವಿಲ್)2ಬಿಇ (ಸಿವಿಲ್)
    ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ಎಲೆಕ್ಟ್ರಿಕಲ್)1ಬಿಇ (ಎಲೆಕ್ಟ್ರಿಕಲ್​)
    ಸಹಾಯಕ ಇಂಜಿನಿಯರ್4 ಬಿ ಇ (ಸಿವಿಲ್​)

    ವಯೋಮಿತಿ: ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 65 ವರ್ಷಗಳು ಮೀರಿರಬಾರದು.

    ಇದನ್ನು ಓದಿ: ಬೆಳಗಾವಿಯಲ್ಲಿದೆ ಡಾಟಾ ಎಂಟ್ರಿ ಆಪರೇಟರ್​ ಹುದ್ದೆ; ಪಿಯುಸಿ ಆದವರಿಗೆ ಅವಕಾಶ

    ವಯೋಮಿತಿ ಸಡಿಲಿಕೆ:
    ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಾವಳಿಗಳ ಪ್ರಕಾರ

    ಅರ್ಜಿ ಸಲ್ಲಿಕೆ
    ಇಮೇಲ್​ ಮುಖಾಂತರ

    ಇಮೇಲ್​ ವಿಳಾಸ:  md.kssidc@karnataka.gov.in

    ವಿಶೇಷ ಸೂಚನೆ
    ಮೇಲ್ಕಂಡ ಹುದ್ದೆಗೆ ಆಯ್ಕೆ ಆಗುವ ಅಭ್ಯುರ್ಥಿಗಳು ರಾಜ್ಯ ವ್ಯಾಪ್ತಿಯ ನಿಗಮನದ ಎಲ್ಲಾ ಕೈಗಾರಿಕಾ ವಸಾಹತುಗಳಲ್ಲಿ ಕಾರ್ಯ ನಿರ್ವಹಿಸಲು ಸಿದ್ಧರಿರಬೇಕು
    ಈ ಹುದ್ದೆಯ ಅವಧಿ ಆರು ತಿಂಗಳು ಅಥವಾ ವ್ಯವಸ್ಥಾಪಕ ನಿರ್ದೇಶಕರು ತೆಗೆದುಕೊಳ್ಳುವ ನಿರ್ಧಾರದ ಅನುಸಾರವಾಗಿರಲಿದೆ.

    ಆಯ್ಕೆ ಪ್ರಕ್ರಿಯೆ
    ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ಪ್ರಮುಖ ದಿನಾಂಕಗಳು
    ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 06 ಜುಲೈ 2022
    ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 16 ಜುಲೈ 2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: kssidc.co.in

    ಇದನ್ನು ಓದಿ: ಲೈಬ್ರರಿ ಸೈನ್ಸ್​ ಪದವೀಧರರಿಗೆ ಬಿಇಎಲ್​ನಲ್ಲಿದೆ ಉದ್ಯೋಗಾವಕಾಶ

    ಅರ್ಜಿ ಸಲ್ಲಿಕೆ ವಿಧಾನ

    ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

    ಅಧಿಕೃತ ವೆಬ್​ಸೈಟ್​ ಮೂಲಕ ನಿಗದಿತ ಅರ್ಜಿ ನಮೂನೆಯನ್ನು ಡೌನ್​ಲೋಡ್​ ಮಾಡಿ ಸ್ವಯಂ ದೃಢೀಕರಿಸಿದ ಅರ್ಜಿಗಳನ್ನು ಮೇಲ್ಕಂಡ ಇಮೇಲ್​ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ಕಳುಹಿಸಬೇಕು.

    ಅರ್ಜಿಜೊತೆಗೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ ಮೇಲ್ಕಂಡ ಇಮೇಲ್​ ​ ವಿಳಾಸಕ್ಕೆ ಕಳುಹಿಸಬೇಕು.
    Published by:Seema R
    First published: