ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ (Karnataka Urban Infrastructure Development and Finance Corporation) ನಿಯಮಿತದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ನಿಯಮಿತದಿಂದ ಕರ್ನಾಟಕ ನಗರ ನೀರು ಸರಬರಾಜು ಆಧುನೀಕರಣ ಯೋಜನೆ ಅವಶ್ಯಕವಿರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಹುಬ್ಬಳ್ಳಿ ಧಾರವಾಡ, ಬೆಳಗಾವಿ ಮತ್ತು ಕಲಬುರ್ಗಿ ನಗರಗಳಲ್ಲಿ ತಾಂತ್ರಿಕ ಮತ್ತು ತಾಂತ್ರಿಕೇತರ ಹುದ್ದೆಗಳ ನೇಮಕಾತಿಗೆ ಮುಂದಾಗಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್ 18 ಆಗಿದೆ.
ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗುತ್ತಿದೆ. ಒಂದು ವರ್ಷದ ಅವಧಿಯ ಹುದ್ದೆಗಳು ಇವಾಗಿದ್ದು, ವರ್ಷದ ಬಳಿಕ ಉದ್ಯೋಗು ಕಾರ್ಯಕ್ಷಮತೆಯನ್ನಾಧರಿಸಿ ಗುತ್ತಿಗೆ ಅವಧಿ ಮುಂದುವರೆಸಲಾಗುವುದು. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.
ಸಂಸ್ಥೆಯ ಹೆಸರು: ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ
ಹುದ್ದೆಯ ಹೆಸರು: ಎಕ್ಸಿಕ್ಯೂಟಿವ್ ಇಂಜಿನಿಯರ್, ಎಂಐಎಸ್ ಎಕ್ಸ್ ಪರ್ಟ್
ಹುದ್ದೆಗಳ ಸಂಖ್ಯೆ: 11
ಉದ್ಯೋಗ ಸ್ಥಳ: ಹುಬ್ಬಳ್ಳಿ - ಬೆಳಗಾವಿ - ಕಲಬುರಗಿ - ಬೆಂಗಳೂರು
ವೇತನ: 65789-86510 ರೂ ಪ್ರತಿ ತಿಂಗಳು
ಹುದ್ದೆ |
ಹುದ್ದೆ ಸಂಖ್ಯೆ |
ವಿದ್ಯಾರ್ಹತೆ |
ವಯೋಮಿತಿ |
ವೇತನ |
ಕಾರ್ಯನಿರ್ವಾಹಕ ಇಂಜಿನಿಯರ್ |
5 |
ಸಿವಿಲ್ ಇಂಜಿನಿಯರಿಂಗ್ನಲ್ಲಿ ಬಿಇ |
ಗರಿಷ್ಠ 65 ವರ್ಷ |
86,510 ರೂ ಮಾಸಿಕ |
ಸಹಾಯಕ ಇಂಜಿನಿಯರ್ 2 |
2 |
ಸಿವಿಲ್ ಇಂಜಿನಿಯರಿಂಗ್ನಲ್ಲಿ ಬಿಇ |
ಗರಿಷ್ಠ 45 ವರ್ಷ |
65,789 ರೂ ಮಾಸಿಕ |
MIS ತಜ್ಞ |
1 |
ಎಲೆಕ್ಟ್ರಾನಿಕ್ಸ್, ಕಮ್ಯೂನಿಕೇಷನ್, ಸಿಎಸ್, ಐಟಿಯಲ್ಲಿ ಬಿಇ ಪದವಿ |
ಗರಿಷ್ಠ 45 ವರ್ಷ |
69116 ರೂ ಮಾಸಿಕ |
ಮ್ಯಾನೇಜರ್ (ಹಣಕಾಸು) 1 |
1 |
ಸಿಎ, ಫೈನಾನ್ಸ್ನಲ್ಲಿ ಎಂಬಿಎ |
ಗರಿಷ್ಠ 45 ವರ್ಷ |
69116 ರೂ ಮಾಸಿಕ |
ಸಾರ್ವಜನಿಕ ಸಂಪರ್ಕ ಅಧಿಕಾರಿ |
2 |
ಸಮಾಜವಿಜ್ಞಾನ, ಸಮಾಜ ಕಾರ್ಯ, ಸಂವಹನದಲ್ಲಿ ಸ್ನಾತಕೋತ್ತರ ಪದವಿ |
ಗರಿಷ್ಠ 45 ವರ್ಷ |
69116 ರೂ ಮಾಸಿಕ |
ಅರ್ಜಿ ಸಲ್ಲಿಕೆ: ಆನ್ಲೈನ್
ಅರ್ಜಿ ಶುಲ್ಕ: ವಿನಾಯಿತಿ ನೀಡಲಾಗಿದೆ
ಆಯ್ಕೆ ಪ್ರಕ್ರಿಯೆ:
ಅರ್ಹತೆ, ಅನುಭವ ಮತ್ತು ಸಂದರ್ಶನ
ಪ್ರಮುಖ ದಿನಾಂಕಗಳು:
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 25 ಜುಲೈ 2022
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18 ಆಗಸ್ಟ್ 2022
ಅಧಿಸೂಚನೆ ಪ್ರಮುಖ ಲಿಂಕ್ಗಳು
ಅಧಿಕೃತ ಅಧಿಸೂಚನೆ ಪಿಡಿಎಫ್:
ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್:
kuidfc.com
ಅರ್ಜಿ ಸಲ್ಲಿಕೆ ಪ್ರಕ್ರಿಯೆ:
-ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.
-ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
- ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ಇತ್ಯಾದಿ ದಾಖಲೆಗಳನ್ನು ಅರ್ಜಿಯಲ್ಲಿ ದಾಖಲಿಸಿ
-ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ