KVAFSU Recruitment 2022: ಪಶು ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಬೃಹತ್​ ನೇಮಕಾತಿ; 437 ಹುದ್ದೆ ಭರ್ತಿಗೆ ಶೀಘ್ರದಲ್ಲೇ ಅಧಿಸೂಚನೆ

ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ 104 ಬೋಧಕ ಮತ್ತು 122 ಬೋಧಕೇತರ ಹುದ್ದೆಗಳನ್ನು ಮೀಸರಿಸಲಾಗಿದೆ.

ಬೇಗ ಅರ್ಜಿ ಸಲ್ಲಿಸಿ

ಬೇಗ ಅರ್ಜಿ ಸಲ್ಲಿಸಿ

  • Share this:
    ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ (Karnataka Veterinary Animal and Fisheries Sciences University) 437 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ. ಶೀಘ್ರದಲ್ಲೇ ಈ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರ ಬೀಳಲಿದೆ. ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ 104 ಬೋಧಕ ಮತ್ತು 122 ಬೋಧಕೇತರ ಹುದ್ದೆಗಳನ್ನು ಮೀಸರಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

    ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ವಿಶ್ವವಿದ್ಯಾಲಯದ ಹೆಸರು: ಕರ್ನಾಟಕ ಪಶುವೈದ್ಯಕೀಯ ಪಶು ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ (KVAFSU)
    ಹುದ್ದೆಯ ಹೆಸರು: ಬೋಧನೆ ಮತ್ತು ಬೋಧಕೇತರ
    ಹುದ್ದೆಗಳ ಸಂಖ್ಯೆ: 437
    ಉದ್ಯೋಗ ಸ್ಥಳ: ಕರ್ನಾಟಕ
    ಸಂಬಳ: ವಿಶ್ವವಿದ್ಯಾಲಯದ ನಿಯಮಗಳ ಪ್ರಕಾರ















    ಹುದ್ದೆಹುದ್ದೆ ಸಂಖ್ಯೆ
    ಬೋಧನೆ217
    ಬೋಧಕೇತರ220

    ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ  ಪದವಿ, ಸ್ನಾತಕೋತ್ತರ ಪದವಿ, ಸ್ನಾತಕೋತ್ತರ ಪದವಿ, ಬಿಎಡ್​, ಎಂಫಿಲ್​, ಪಿಎಚ್​ಡಿ  ಪೂರ್ಣಗೊಳಿಸಿರಬೇಕು.

    ಇದನ್ನು ಓದಿ: ಕೆಎಸ್​ಎಪಿಎಸ್​ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಡಿಗ್ರಿ ಆಗಿದ್ರೆ ಅರ್ಜಿ ಸಲ್ಲಿಸಿ

    ವಯೋಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

    ಅರ್ಜಿ ಸಲ್ಲಿಕೆ ವಿಧಾನ: ಆನ್​ಲೈನ್​

    ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ಅರ್ಜಿ ಶುಲ್ಕ: ಕರ್ನಾಟಕ ಪಶುವೈದ್ಯಕೀಯ ಪಶು ಮತ್ತು ಮೀನುಗಾರಿಕೆ ನಿಯಮ ಅನುಸಾರ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಶೀಘ್ರದಲ್ಲೇ ಅಧಿಸೂಚನೆ ಹೊರಬೀಳಲಿದೆ
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಶೀಘ್ರದಲ್ಲೇ ಅಧಿಸೂಚನೆ ಹೊರಬೀಳಲಿದೆ

    ಪ್ರಮುಖ ಲಿಂಕ್​ಗಳು

    ಅಧಿಕೃತ ವೆಬ್‌ಸೈಟ್: kvafsu.edu.in  

    ಇದನ್ನು ಓದಿ: ಬಿಇಎಲ್​ನಲ್ಲಿ 24 ಡೆಪ್ಯುಟಿ ಇಂಜಿನಿಯರ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

    ಅರ್ಜಿ ಸಲ್ಲಿಕೆ ವಿಧಾನ

    ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

    ಅಧಿಕೃತ ವೆಬ್​ಸೈಟ್​ ಮೂಲಕ ಅರ್ಜಿ ನಮೂನೆಯನ್ನು ಡೌನ್​ಲೋಡ್​ ಮಾಡಿ ಸ್ವಯಂ ದೃಢೀಕರಿಸಿದ ಅರ್ಜಿಗಳನ್ನು ಲಗತ್ತಿಸಿ

    ಅರ್ಜಿಜೊತೆಗೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.

    ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.

    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ
    Published by:Seema R
    First published: