• Home
  • »
  • News
  • »
  • jobs
  • »
  • Jobs in chitradurga: ಚಿತ್ರದುರ್ಗ ಗ್ರಾ. ಪಂಯಲ್ಲಿದೆ ಗ್ರಂಥಾಲಯ ಸಹಾಯಕರ ಹುದ್ದೆ; ಬೇಗ ಅರ್ಜಿ ಸಲ್ಲಿಸಿ

Jobs in chitradurga: ಚಿತ್ರದುರ್ಗ ಗ್ರಾ. ಪಂಯಲ್ಲಿದೆ ಗ್ರಂಥಾಲಯ ಸಹಾಯಕರ ಹುದ್ದೆ; ಬೇಗ ಅರ್ಜಿ ಸಲ್ಲಿಸಿ

 ಗ್ರಾಮ ಪಂಚಾಯತ್

ಗ್ರಾಮ ಪಂಚಾಯತ್

ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಬಿ ದುರ್ಗ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ತಣಿಗೆಹಳ್ಳಿ ಈ ಹುದ್ದೆಗಳು ಖಾಲಿ ಇದ್ದು, ಸ್ಥಳೀಯ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ

  • Share this:

    ಚಿತ್ರದುರ್ಗ ಗ್ರಾಮ ಪಂಚಾಯಿತಿಯಲ್ಲಿ (Chitradurga Grama panchayat) ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಂಥಾಲಯದಲ್ಲಿ ಕಾರ್ಯ ನಿರ್ವಹಣೆಗೆ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​​ 31 ಆಗಿದೆ.


    ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಬಿ ದುರ್ಗ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ತಣಿಗೆಹಳ್ಳಿ ಈ ಹುದ್ದೆಗಳು ಖಾಲಿ ಇದ್ದು, ಸ್ಥಳೀಯ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ಹುದ್ದೆ ಮಾಹಿತಿಹುದ್ದೆ ವಿವರ
    ಸಂಸ್ಥೆಯ ಹೆಸರುಚಿತ್ರದುರ್ಗ ಗ್ರಾಮ ಪಂಚಾಯತ್
    ಹುದ್ದೆಯ ಹೆಸರುಗ್ರಂಥಾಲಯ ಮೇಲ್ವಿಚಾರಕರು
    ಹುದ್ದೆ ಸಂಖ್ಯೆನಿರ್ದಿಷ್ಟಪಡಿಸಲಾಗಿಲ್ಲ
    ಉದ್ಯೋಗ ಸ್ಥಳಚಿತ್ರದುರ್ಗ
    ವೇತನ12000 ರೂ ಮಾಸಿಕ

    ಶೈಕ್ಷಣಿಕ ಅರ್ಹತೆ: ಚಿತ್ರದುರ್ಗ ಗ್ರಾಮ ಪಂಚಾಯತ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಎಸ್​ಎಸ್​ಎಲ್​ಸಿ ಪೂರ್ಣಗೊಳಿಸಿರಬೇಕು.


    ಇದನ್ನೂ ಓದಿ; 10ನೆ ಕ್ಲಾಸ್ ಆಗಿದ್ರೆ ಸಾಕು, ಆಫೀಸ್ ಅಟೆಂಡೆಂಟ್ ಹುದ್ದೆಗಳಿಗೆ ಅರ್ಜಿಹಾಕ್ಬೋದು


    ವಯೋಮಿತಿ: ಚಿತ್ರದುರ್ಗ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.


    ಅರ್ಜಿ ಸಲ್ಲಿಕೆ
    ಅಫ್​ಲೈನ್


    ಅರ್ಜಿ ಶುಲ್ಕ
    ವಿನಾಯಿತಿ ನೀಡಲಾಗಿದೆ


    ಆಯ್ಕೆ ಪ್ರಕ್ರಿಯೆ
    ಲಿಖಿತ ಪರೀಕ್ಷೆ ಮತ್ತು ಸಂದರ್ಶನ


    ಅರ್ಜಿ ಸಲ್ಲಿಕೆ ವಿಳಾಸ
    ಪಿಡಿಒ/ಪಂಚಾಯತ್ ಕಾರ್ಯದರ್ಶಿ, ಮುಖ್ಯ ಗ್ರಂಥಾಲಯ ಅಧಿಕಾರಿ, ಜಿಲ್ಲಾ ಕೇಂದ್ರ ಗ್ರಂಥಾಲಯ, ಚಿತ್ರದುರ್ಗ


    ಪ್ರಮುಖ ದಿನಾಂಕಗಳು:
    ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 3 ಅಕ್ಟೋಬರ್​ 2022
    ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಅಕ್ಟೋಬರ್ 2022


     ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: chitradurga.nic.in


    ಇದನ್ನೂ ಓದಿ: ಪದವಿ ಪೂರ್ಣಗೊಳಿಸಿದವರಿಗೆ LICಯಲ್ಲಿ ಸಾವಿರಕ್ಕೂ ಅಧಿಕ ಉದ್ಯೋಗಾವಕಾಶ


    ಅರ್ಜಿ ಸಲ್ಲಿಕೆ ಪ್ರಕ್ರಿಯೆ


    -ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.


    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.


    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.


    -ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ. ಅದರ ಮಾಹಿತಿ ಅಪ್​ಲೋಡ್​ ಮಾಡಿ


    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ

    Published by:Seema R
    First published: