Job Alert: ಉತ್ತರ ಕನ್ನಡ ಗ್ರಾ. ಪಂಚಾಯಿತಿಯಲ್ಲಿ ಗ್ರಂಥಾಲಯ ಮೇಲ್ವಿಚಾರಕ ಹುದ್ದೆ; ಅರ್ಜಿ ಸಲ್ಲಿಕೆಗೆ ಆ.5 ಕಡೆಯ ದಿನ

ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳು ತಾತ್ಕಾಲಿಕವಾಗಿದ್ದು, ಇವುಗಳನ್ನು ಮಾಸಿಕ ಗೌರವ ಸಂಭಾವನೆ ಆಧಾರದ ಮೇಲೆ ಭರ್ತಿ ಮಾಡಲಾಗುವುದು.

 ಗ್ರಾಮ ಪಂಚಾಯತ್

ಗ್ರಾಮ ಪಂಚಾಯತ್

 • Share this:
  ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರ (Library Supervisor) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್​ನಲ್ಲಿ 5 ಹುದ್ದೆಗಳು ಖಾಲಿ ಇದ್ದು, ಅವುಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಗ್ರಾಮ ಪಂಚಾಯಿತಿಯ ಸ್ಥಳೀಯ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಸ್​ಎಸ್​ಎಲ್​ಸಿಯಲ್ಲಿ ಉತ್ತೀರ್ಣರಾಗಿರಬೇಕು. ಅರ್ಜಿಯನ್ನು ಆಫ್​​ಲೈನ್​ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​ 5 ಆಗಿದೆ.

  ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳು ತಾತ್ಕಾಲಿಕವಾಗಿದ್ದು, ಇವುಗಳನ್ನು ಮಾಸಿಕ ಗೌರವ ಸಂಭಾವನೆ ಆಧಾರದ ಮೇಲೆ ಭರ್ತಿ ಮಾಡಲಾಗುವುದು.

  ಗ್ರಾಮ ಪಂಚಾಯಿತಿಹುದ್ದೆ ಸಂಖ್ಯೆಮೀಸಲಾತಿ
  ಮುಂಡಗೋಡ ತಾಲೂಕಿನ ಗುಂಜಾವತಿ ಗ್ರಾ. ಪಂ1ಪ್ರವರ್ಗ 2ಬಿ ಅಭ್ಯರ್ಥಿ
  ಯಲ್ಲಾಪುರದ ಇಡಗುಂದಿ ಗ್ರಾ. ಪಂ1ಸಾಮಾನ್ಯ ಮಹಿಳಾ ಅಭ್ಯರ್ಥಿ
  ಕಾರವಾರ ತಾಲೂಕಿನ ಹೊಟೆಗಾಳಿ ಗ್ರಾ.ಪಂ1ಪರಿಶಿಷ್ಟ ಜಾತಿ ಅಂಗವಿಕಲ ಅಭ್ಯರ್ಥಿ
  ಹಳಿಯಾಳ ತಾಲೂಕಿನ ಸಾಂಬ್ರಾಣಿ1ಸಾಮಾನ್ಯ ಮಾಜಿ ಸೈನಿಕ
  ಅಂಕೋಲಾ ತಾಲೂಕಿನ ಬೆಳಂಬಾರ1ಸಾಮಾನ್ಯ ಅಭ್ಯರ್ಥಿ

  ಶೈಕ್ಷಣಿಕ ಅರ್ಹತೆ: ಅಧಿಸೂಚನೆ ಪ್ರಕಾರ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿ 10ನೇ ತರಗತಿ ಪಾಸ್​ ಆಗಿರಬೇಕು.

  ಇದನ್ನು ಓದಿ: 56 ನರ್ಸ್​ ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಿದ SAIL; ಇಲ್ಲಿದೆ ಸಂಪೂರ್ಣ ಮಾಹಿತಿ

  ವಯೋಮಿತಿ:  ಅಧಿಸೂಚನೆ ಪ್ರಕಾರ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿ ಮೀರಿರಬಾರದು.

  ವಯೋಮಿತಿ ಸಡಿಲಿಕೆ
  ಪ. ಜಾ, ಪ.ಪಂ: 5 ವರ್ಷ
  ಪ್ರವರ್ಗ 2ಎ, 2ಬಿ, 3ಎ ಮತ್ತು 3 ಬಿ: 3 ವರ್ಷ

  ಅರ್ಜಿ ಸಲ್ಲಿಕೆ ವಿಧಾನ : ಆಫ್​ಲೈನ್​

  ವಿಶೇಷ ಸೂಚನೆ
  ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿಯಾಗಿರಬೇಕು.
  ನಿಗದಿತ ಮೀಸಲಾತಿಯಲ್ಲಿ ಗ್ರಂಥಾಲಯ ವಿಜ್ಞಾನದ ತರಬೇತಿ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು
  ಕಲಿಕಾ ಕೇಂದ್ರದಲ್ಲಿ ಪ್ರೇರಕ ಅಥವಾ ಉಪ ಪ್ರೇರಕರಾಗಿ ಕೆಲಸ ನಿರ್ವಹಿಸಿದವರಿಗೆ ಆದ್ಯತೆ ನೀಡಲಾಗುವುದು.

  ಪ್ರಮುಖ ದಿನಾಂಕ

  ಆಫ್​​ಲೈನ್​ ಅರ್ಜಿ ಸಲ್ಲಿಕೆ ಪ್ರಾರಂಭ: 9 ಜುಲೈ 2022
  ಆಫ್​​ಲೈನ್​ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 5 ಆಗಸ್ಟ್​​ 2022

  ಇದನ್ನು ಓದಿ: ರೈಲ್​ ಇಂಡಿಯಾದಲ್ಲಿ ಡಿಪ್ಲೊಮಾ ಆದವರಿಗೆ ಉದ್ಯೋಗಾವಕಾಶ; ಬೆಂಗಳೂರಿನಲ್ಲಿ ಕೆಲಸ

  ಅರ್ಜಿ ಸಲ್ಲಿಕೆ ಪ್ರಕ್ರಿಯೆ
  - ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಅಧಿಸೂಚನೆಯನ್ನು ಸಂಪೂರ್ಣವಾಗಿ ಪರಿಶೀಲಿಸಿ.

  -ಈ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಆಯಾ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಅರ್ಜಿ ನಮೂನೆ ಪಡೆದುಕೊಂಡು ಅದನ್ನು ಭರ್ತಿ ಮಾಡಬೇಕು.
  ಈ ಭರ್ತಿಯಾದ ಅರ್ಜಿಗಳನ್ನು ಪಂಚಾಯತ್​ ಅಭಿವೃದ್ಧಿ ಅಧಿಕಾರಿಗಳ ಕಚೇರಿಗೆ ನಿಗದಿತ ದಿನಾಂಕದೊಳಗೆ ಸಲ್ಲಿಸಬೇಕು.

  -ಅರ್ಜಿಯಲ್ಲಿ ಅಭ್ಯರ್ಥಿ ವಿವರ, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆಯನ್ನು ನಮೂದಿಸಬೇಕು.

  -ಅರ್ಜಿಯಲ್ಲಿ ಸ್ಥಳೀಯ ನಿವಾಸಿ ಪ್ರಮಾಣ ಪತ್ರ, ಎಸ್​ಎಸ್​ಎಲ್​ಸಿ ಪ್ರಮಾಣ ಪತ್ರ ಮತ್ತು ಜಾತಿ ಮೀಸಲಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಲಗತ್ತಿಸಬೇಕು.

  -ಹೆಚ್ಚಿನ ವಿವರಗಳಿಗೆ ಜಿಲ್ಲಾ ಕೇಂದ್ರ ಗ್ರಂಥಾಲಯ ಕಚೇರಿ ದೂರವಾಣಿ ಸಂಖ್ಯೆ 08382-226564ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು. ಅಥವಾ cldclkwr@gmail.comಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ.
  Published by:Seema R
  First published: