Job in LIC HFL: ಎಲ್​ಐಸಿ ಹೌಸಿಂಗ್​ ಫೈನಾನ್ಸ್​ನಲ್ಲಿ 80 ಸಹಾಯಕರ​ ಹುದ್ದೆ; ಯಾವುದೇ ಡಿಗ್ರಿ ಆಗಿದ್ರೂ ಅರ್ಜಿ ಸಲ್ಲಿಸಿ

ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಯಾವುದೇ ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸಿ

 • Share this:
  ಭಾರತೀಯ ಜೀವ ವಿಮಾ ನಿಗಮದ ಹೌಸಿಂಗ್​ ಫೈನಾನ್ಸ್​ ಲಿಮಿಟೆಡ್​ನಲ್ಲಿ ( LIC Housing Finance Limited) ವಿವಿಧ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಸಹಾಯಕರು ಮತ್ತು ಸಹಾಯಕ ವ್ಯವಸ್ಥಾಪಕರ (Assistant, Assistant Manager) ಹುದ್ದೆಗೆ ಅಧಿಸೂಚನೆ ಹೊರಡಿಸಲಾಗಿದೆ. 80 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​ 25 ಆಗಿದೆ. ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಯಾವುದೇ ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

  ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

  ಬ್ಯಾಂಕ್ ಹೆಸರು: ಎಲ್​ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ (LIC HFL)
  ಹುದ್ದೆಯ ಹೆಸರು: ಸಹಾಯಕ, ಸಹಾಯಕ ವ್ಯವಸ್ಥಾಪಕ
  ಹುದ್ದೆಗಳ ಸಂಖ್ಯೆ: 80
  ಉದ್ಯೋಗ ಸ್ಥಳ: ಅಖಿಲ ಭಾರತ
  ವೇತನ: 22730-101040 ರೂ ಪ್ರತಿ ತಿಂಗಳು
  ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆವಯೋಮಿತಿವೇತನ
  ಸಹಾಯಕ50ಪದವಿ, ಸ್ನಾತಕೋತ್ತರ ಪದವಿಕನಿಷ್ಟ21 ಗರಿಷ್ಟ 28 ವರ್ಷ22730-52475 ರೂ ಮಾಸಿಕ
  ಸಹಾಯಕ ವ್ಯವಸ್ಥಾಪಕ30ಪದವಿ, ಸ್ನಾತಕೋತ್ತರ ಪದವಿ, ಮಾರ್ಕೆಟಿಂಗ್​ ಅಥವಾ ಫೈನಾನ್ಸ್​ನಲ್ಲಿ ಎಂಬಿಎಕನಿಷ್ಟ21 ಗರಿಷ್ಟ 40 ವರ್ಷ53620-101040 ರೂ ಮಾಸಿಕ

  ಅರ್ಜಿ ಶುಲ್ಕ:
  ಎಲ್ಲಾ ಅಭ್ಯರ್ಥಿಗಳು: 800 ರೂ

  ಇದನ್ನು ಓದಿ: ರಾಮನಗರ ಜಿಲ್ಲಾ ನ್ಯಾಯಾಲಯದಲ್ಲಿ ಜವಾನ ಹುದ್ದೆಗೆ ಅರ್ಜಿ ಆಹ್ವಾನ

  ಪಾವತಿ ವಿಧಾನ: ಆನ್‌ಲೈನ್

  ಆಯ್ಕೆ ಪ್ರಕ್ರಿಯೆ:
  ಕೆಲಸದ ಅನುಭವ, ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನ

  ಪ್ರಮುಖ ದಿನಾಂಕಗಳು:
  ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 04 ಆಗಸ್ಟ್​ 2022
  ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕ ಪಾವತಿಗೆ ಕೊನೆಯ ದಿನಾಂಕ: 25 ಆಗಸ್ಟ್ 2022

  ಅಧಿಸೂಚನೆ ಪ್ರಮುಖ ಲಿಂಕ್‌ಗಳು
  ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
  ಅಧಿಕೃತ ವೆಬ್‌ಸೈಟ್: lichousing.com

  ಇದನ್ನು ಓದಿ: ಸ್ಟೆನೋಗ್ರಾಫರ್​ ಹುದ್ದೆಗೆ ಅರ್ಜಿ ಆಹ್ವಾನಿಸಿದ ಎಸ್​ಎಸ್​ಸಿ; ಪಿಯುಸಿ ಆಗಿದ್ರೆ ಸಾಕು

  ಅರ್ಜಿ ಸಲ್ಲಿಕೆ ಪ್ರಕ್ರಿಯೆ:

  ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

  -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

  - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ನೀಡಿ.

  - ನಿಮ್ಮ ವರ್ಗಕ್ಕೆ ಅನುಗುಣವಾಗಿ ಶುಲ್ಕ ಪಾವತಿಸಿ, ಅದರ ಮಾಹಿತಿ ಅಪ್​ಲೋಡ್​ ಮಾಡಿ

  -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಸಲ್ಲಿಸು ಬಟನ್​ ಕ್ಲಿಕ್​ ಮಾಡಿ
  Published by:Seema R
  First published: