LIC Recruitment 2023: ಭಾರತೀಯ ಜೀವ ವಿಮಾ ನಿಗಮ(Life Insurance Corporation of India -LIC) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1049 ಅಪ್ರೆಂಟಿಸ್ ಡೆವಲಪ್ಮೆಂಟ್ ಆಫೀಸರ್(Apprentice Development Officer) ಹುದ್ದೆಗಳು ಖಾಲಿ ಇವೆ. ಆಸಕ್ತರು ಎಲ್ಐಸಿಯ ಅಧಿಕೃತ ವೆಬ್ಸೈಟ್ಗೆ(Official Website) ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಫೆಬ್ರವರಿ 10, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ತಡಮಾಡದೇ ಈಗಲೇ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಭಾರತೀಯ ಜೀವ ವಿಮಾ ನಿಗಮ |
ಹುದ್ದೆ | ಅಪ್ರೆಂಟಿಸ್ ಡೆವಲಪ್ಮೆಂಟ್ ಆಫೀಸರ್ |
ಒಟ್ಟು ಹುದ್ದೆ | 1049 |
ವೇತನ | ನಿಯಮಾನುಸಾರ |
ವಿದ್ಯಾರ್ಹತೆ | ಪದವಿ |
ಉದ್ಯೋಗದ ಸ್ಥಳ | ಭಾರತ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಫೆಬ್ರವರಿ 10, 2023 |
ವಿಭಾಗದ ಹೆಸರು- ಹುದ್ದೆಗಳ ಸಂಖ್ಯೆ
ಅಸನ್ಸೋಲ್- 53
ಬರ್ಧಮಾನ್- 65
ಬೊಂಗೈಗಾಂವ್- 31
ಗುವಾಹಟಿ- 66
ಹೌರಾ- 110
ಜಲ್ಪೈಗುರಿ- 124
ಜೋರ್ಹತ್- 64
ಖರಗ್ಪುರ- 102
KMDO-I- 96
KMDO-II- 118
KSDO- 159
ಸಿಲ್ಚಾರ್- 61
ವಿದ್ಯಾರ್ಹತೆ:
ಭಾರತೀಯ ಜೀವ ವಿಮಾ ನಿಗಮ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.
ಇದನ್ನೂ ಓದಿ: ಮೈಸೂರಿನ CFTRI ನಲ್ಲಿ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ- ನಾಳೆಯೊಳಗೆ Apply ಮಾಡಿ
ವಯೋಮಿತಿ:
ಭಾರತೀಯ ಜೀವ ವಿಮಾ ನಿಗಮ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜನವರಿ 1, 2023ಕ್ಕೆ ಕನಿಷ್ಠ 21 ವರ್ಷ ಮತ್ತು ಗರಿಷ್ಠ 30 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
SC/ST/OBC ಗೆ ಸೇರದ LIC ನೌಕರರು- 12 ವರ್ಷ
ಒಬಿಸಿ ಅಭ್ಯರ್ಥಿ (LIC ಉದ್ಯೋಗಿ)- 15 ವರ್ಷ
SC/ST ಅಭ್ಯರ್ಥಿ (LIC ಉದ್ಯೋಗಿ)- 17 ವರ್ಷ
ಅರ್ಜಿ ಶುಲ್ಕ:
SC/ST ಅಭ್ಯರ್ಥಿಗಳು- 100 ರೂ.
ಉಳಿದ ಎಲ್ಲಾ ಅಭ್ಯರ್ಥಿಗಳು- 750
ಪಾವತಿಸುವ ವಿಧಾನ- ಆನ್ಲೈನ್
ಆಯ್ಕೆ ಪ್ರಕ್ರಿಯೆ:
ಪ್ರಿಲಿಮಿನರಿ ಪರೀಕ್ಷೆ
ಮುಖ್ಯ ಪರೀಕ್ಷೆ
ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು LIC ಯ ಅಧಿಕೃತ ವೆಬ್ಸೈಟ್ licindia.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.
ಜನವರಿ 21 ರಿಂದ ಫೆಬ್ರವರಿ 10 ರ ವರೆಗೆ ಅರ್ಜಿ ಹಾಕಿ.
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: ಜನವರಿ 21, 2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 10, 2023
ಪ್ರಿಲಿಮಿನರಿ ಎಕ್ಸಾಂ ನಡೆಯುವ ದಿನ: ಮಾರ್ಚ್ 12, 2023
ಮುಖ್ಯ ಪರೀಕ್ಷೆ ನಡೆಯುವ ದಿನ: ಏಪ್ರಿಲ್ 8, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ