Mazagon Dock Recruitment 2022: 1041 ಹುದ್ದೆಗಳಿಗೆ ಅರ್ಜಿ ಆಹ್ವಾನ; ಐಟಿಐ, ಡಿಪ್ಲೊಮಾ ಆದವರಿಗೆ ಅವಕಾಶ

ನಾನ್​ ಎಕ್ಸಿಕ್ಯುಟಿವ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಡಿಪ್ಲೊಮಾ, ಐಟಿಐ ಪದವೀಧರರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಕೆಲಸ ಖಾಲಿ ಇದೆ

ಕೆಲಸ ಖಾಲಿ ಇದೆ

  • Share this:
    ಮಝಗಾನ್ ಡಾಕ್‌ ಶಿಪ್‌ಬಿಲ್ಡರ್ಸ್‌ನಲ್ಲಿ (Mazagon Dock Shipbuilders Limited) 1041 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ನಾನ್​ ಎಕ್ಸಿಕ್ಯುಟಿವ್ (Non Executive)​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಡಿಪ್ಲೊಮಾ, ಐಟಿಐ ಪದವೀಧರರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಮಹಾರಾಷ್ಟ್ರದ ಮುಂಬೈನಲ್ಲಿ ಕಾರ್ಯ ನಿರ್ವಹಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಅಭ್ಯರ್ಥಿಗಳು ಅನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 30 ಆಗಿದೆ.

    ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಕೆಳಗಿನಂತಿವೆ.


    ಸಂಸ್ಥೆಯ ಹೆಸರು: ಮಝಗಾನ್ ಡಾಕ್ ಶಿಪ್ ಬಿಲ್ಡರ್ಸ್ ಲಿಮಿಟೆಡ್
    ಹುದ್ದೆಯ ಹೆಸರು: ನಾನ್ ಎಕ್ಸಿಕ್ಯೂಟಿವ್
    ಹುದ್ದೆಗಳ ಸಂಖ್ಯೆ: 1041
    ಉದ್ಯೋಗ ಸ್ಥಳ: ಮುಂಬೈ - ಮಹಾರಾಷ್ಟ್ರ
    ವೇತನ: 13200-83180 ರೂ. ಪ್ರತಿ ತಿಂಗಳು






































    ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆ
    ಸ್ಕೀಲ್ಡ್​​ -I900ಡಿಪ್ಲೊಮಾ, ಸ್ನಾತಕೋತ್ತರ ಪದವಿ
    ಸೆಮಿ ಸ್ಕಿಲ್ಡ್​​-I125ಐಟಿಐ
    ಸೆಮಿ ಸ್ಕಿಲ್ಡ್-III9ಐಟಿಐ
    ಸ್ಕೀಲ್ಡ್​-II2ಸಂಸ್ಥೆಯ ನಿಯಮ  ಅನುಸಾರ
    ಸ್ಪೆಷಲ್​​ ಗ್ರೇಡ್​​2ಸಂಸ್ಥೆಯ ನಿಯಮ  ಅನುಸಾರ
    ವಿಶೇಷ ದರ್ಜೆ3ಸಂಸ್ಥೆಯ ನಿಯಮ  ಅನುಸಾರ

    ವಯೋಮಿತಿ:ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 38 ವರ್ಷಗಳನ್ನು ಹೊಂದಿರಬೇಕು.

    ಇದನ್ನು ಓದಿ: ಕೇಂದ್ರ ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಅವಕಾಶ; ಎಸ್​ಎಸ್​ಸಿ ಸಿಜಿಲ್​ ಅಧಿಸೂಚನೆ ಬಿಡುಗಡೆ

    ವಯೋಮಿತಿ ಸಡಿಲಿಕೆ:
    ಒಬಿಸಿ ಅಭ್ಯರ್ಥಿಗಳು: 3 ವರ್ಷಗಳು
    ಪ.ಜಾ, ಪ.ಪಂ ಅಭ್ಯರ್ಥಿಗಳು: 5 ವರ್ಷಗಳು
    ವಿಕಲಚೇತನ ಅಭ್ಯರ್ಥಿಗಳು: 10 ವರ್ಷಗಳು

    ಅರ್ಜಿ ಶುಲ್ಕ:
    ಪ.ಜಾ, ಪ.ಪಂ, ವಿಕಲಚೇತನ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ
    ಸಾಮಾನ್ಯ, ಒಬಿಸಿ ಅಭ್ಯರ್ಥಿಗಳು: 100 ರೂ.

    ಪಾವತಿ ವಿಧಾನ: ಆನ್‌ಲೈನ್

    ಆಯ್ಕೆ ಪ್ರಕ್ರಿಯೆ:
    ವ್ಯಾಪಾರ ಪರೀಕ್ಷೆ, ಕೌಶಲ್ಯ ಪರೀಕ್ಷೆ, ಅನುಭವ, ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 12 ಸೆಪ್ಟೆಂಬರ್​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಸೆಪ್ಟೆಂಬರ್​​ 2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: mazagondock.in

    ಇದನ್ನು ಓದಿ: ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನೇಮಕಾತಿ; ಇಲ್ಲಿದೆ ಹುದ್ದೆ ವಿವರ

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ

    - ಅರ್ಜಿಯಲ್ಲಿ ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ಸೇರಿದಂತೆ ಇನ್ನಿತರ ಅಗತ್ಯ ದಾಖಲೆಗಳ ಮಾಹಿತಿ ಭರ್ತಿ ಮಾಡಿ.

    -ನಿಮ್ಮ ವರ್ಗಕ್ಕೆ ಅನುಸಾರವಾಗಿ ಅರ್ಜಿ ಶುಲ್ಕ ಪಾವತಿಸಿ, ಅದರ ಮಾಹಿತಿ ಅಪ್​ಡೇಟ್​ ಮಾಡಿ

    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಸಲ್ಲಿಸು ಬಟನ್​ ಕ್ಲಿಕ್​ ಮಾಡಿ
    Published by:Seema R
    First published: