MGNREGA Recruitment 2021: ನರೇಗಾ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಅವಕಾಶ

ನವೆಂಬರ್ 20ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ನವೆಂಬರ್ 30ರವರೆಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

MGNREGA

MGNREGA

  • Share this:
MGNREGA Recruitment 2021: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(Mahatma Gandhi National Rural Development Guarantee Act)ಯಲ್ಲಿ ಅನೇಕ ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 15 ಅಸಿಸ್ಟೆಂಟ್, ಡಾಟಾ ಎಂಟ್ರಿ ಆಪರೇಟರ್, ಟೆಕ್ನಿಕಲ್ ಅಸಿಸ್ಟೆಂಟ್, ಕಂಪ್ಯೂಟರ್ ಅಸಿಸ್ಟೆಂಟ್, ಅಕೌಂಟ್ಸ್​ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ನವೆಂಬರ್ 20ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ನವೆಂಬರ್ 30ರವರೆಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆಫ್​ಲೈನ್(Offline) ಮೂಲಕ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.









































ಸಂಸ್ಥೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ
ಹುದ್ದೆಯ ಹೆಸರು ಅಸಿಸ್ಟೆಂಟ್, ಡಾಟಾ ಎಂಟ್ರಿ ಆಪರೇಟರ್, ಟೆಕ್ನಿಕಲ್ ಅಸಿಸ್ಟೆಂಟ್, ಕಂಪ್ಯೂಟರ್ ಅಸಿಸ್ಟೆಂಟ್, ಅಕೌಂಟ್ಸ್​ ಅಸಿಸ್ಟೆಂಟ್
ಒಟ್ಟು ಹುದ್ದೆಗಳು 15
ವಿದ್ಯಾರ್ಹತೆ ಬಿ.ಟೆಕ್, ಬಿಎಸ್ಸಿ, ಬಿ.ಕಾಂ, ಬಿಸಿಎ, ಡಿಪ್ಲೋಮಾ, ಎಂ.ಕಾಂ, ಎಂಸಿಎ, ಎಂಎಸ್​
ಉದ್ಯೋಗದ ಸ್ಥಳ ಅಮೃತಸರ
ವೇತನ ಮಾಸಿಕ ₹ 12,000-17,500
ಅರ್ಜಿ ಸಲ್ಲಿಕೆ ವಿಧಾನ ಆಫ್​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ 20/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30/11/2021



ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 20/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30/11/2021

ಇದನ್ನೂ ಓದಿ: KPSC Recruitment 2021: ತಿಂಗಳಿಗೆ ₹ 41,500 ಸಂಬಳ, KPSCಯಲ್ಲಿ 14 ಡ್ರೈವರ್ ಹುದ್ದೆಗಳು ಖಾಲಿ

ಅರ್ಜಿ ಶುಲ್ಕ:

ಸಾಮಾನ್ಯ ವರ್ಗ: 200 ರೂ.
ಒಬಿಸಿ: 150 ರೂ.
SC/ST- 150 ರೂ.

ಹುದ್ದೆಯ ಮಾಹಿತಿ:

ಟೆಕ್ನಿಕಲ್ ಅಸಿಸ್ಟೆಂಟ್-10
ಕಂಪ್ಯೂಟರ್ ಅಸಿಸ್ಟೆಂಟ್-01
ಅಕೌಂಟ್​ ಅಸಿಸ್ಟೆಂಟ್-01
ಡಾಟಾ ಎಂಟ್ರಿ ಆಪರೇಟರ್-02
ಅಸಿಸ್ಟೆಂಟ್-01
ಒಟ್ಟು- 15

ವಿದ್ಯಾರ್ಹತೆ:

ಟೆಕ್ನಿಕಲ್ ಅಸಿಸ್ಟೆಂಟ್- ಪದವಿ/ ಡಿಪ್ಲೋಮಾ
ಕಂಪ್ಯೂಟರ್ ಅಸಿಸ್ಟೆಂಟ್- ಬಿಸಿಎ/ಎಂಸಿಎ/ಬಿ.ಟೆಕ್
ಅಕೌಂಟ್​ ಅಸಿಸ್ಟೆಂಟ್-ಬಿ.ಕಾಂ, ಎಂಕಾಂ, ಸಿಎ
ಡಾಟಾ ಎಂಟ್ರಿ ಆಪರೇಟರ್- ಬಿಎ/ ಬಿಎಸ್ಸಿ
ಅಸಿಸ್ಟೆಂಟ್-ಪದವಿ

ಉದ್ಯೋಗದ ಸ್ಥಳ:

ಟೆಕ್ನಿಕಲ್ ಅಸಿಸ್ಟೆಂಟ್, ಕಂಪ್ಯೂಟರ್ ಅಸಿಸ್ಟೆಂಟ್, ಅಕೌಂಟ್​ ಅಸಿಸ್ಟೆಂಟ್, ಡಾಟಾ ಎಂಟ್ರಿ ಆಪರೇಟರ್, ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪಂಜಾಬ್​ನ ಅಮೃತಸರದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ವೇತನ:

ಟೆಕ್ನಿಕಲ್ ಅಸಿಸ್ಟೆಂಟ್, ಕಂಪ್ಯೂಟರ್ ಅಸಿಸ್ಟೆಂಟ್, ಅಕೌಂಟ್​ ಅಸಿಸ್ಟೆಂಟ್, ಡಾಟಾ ಎಂಟ್ರಿ ಆಪರೇಟರ್, ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 12,000-17,500 ವೇತನ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ

ಇದನ್ನೂ ಓದಿ: UCIL Recruitment 2021: ಯುರೇನಿಯಂ ಕಾರ್ಪೊರೇಷನ್ ಆಫ್​ ಇಂಡಿಯಾದಲ್ಲಿ ವಿವಿಧ ಹುದ್ದೆಗಳು ಖಾಲಿ, ಮಾಸಿಕ ವೇತನ ₹ 46,000

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಜಿಲ್ಲಾ ಪರಿಷತ್ ಕಚೇರಿ
ಫಿರೋಜ್​ಪುರ



ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
Published by:Latha CG
First published: