ಕಲಬುರಗಿಯ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ 42 ಶಿಕ್ಷಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಮೌಲಾನಾ ಆಜಾದ ಆಂಗ್ಲ ಮಾಧ್ಯಮ ಮಾದರಿ ಶಾಲೆಗಳಲ್ಲಿ/ ಮೋರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಪಾಠ ಮಾಡಲು ತಾತ್ಕಲಿಕ ಶಿಕ್ಷಕರ ಭರ್ತಿಗೆ ಕ್ರಮ ಕೈಗೊಳ್ಳಲಾಗಿದ್ದು, ಈ ಸಂಬಂಧ ಅಧಿಸೂಚನೆ ಹೊರಡಿಸಲಾಗಿದೆ. ಆರರಿಂದ 10ನೇ ತರಗತಿವರೆಗೆ ಪಾಠ ಮಾಡುವ ಅರ್ಹತೆ ಹೊಂದಿರುವ ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆಫ್ಲೈನ್ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್ 7 ಆಗಿದೆ.
ಶಿಕ್ಷಕ ವೃತ್ತಿಯ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ. ವಿವಿಧ ವಿಷಯಗಳ ಶಿಕ್ಷಕರ ನೇಮಕಾತಿಗೆ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಮುಂದಾಗಿದ್ದು, ನೇಮಕಾತಿ, ಆಯ್ಕೆ ವಿಧಾನ, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಸೇರಿದಂತೆ ಇನ್ನಿತರ ಮಾಹಿತಿ ಇಲ್ಲಿದೆ.
ಸಂಸ್ಥೆ : ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ, ಕಲಬುರಗಿ
ಹುದ್ದೆ : ಶಿಕ್ಷಕರು
ಹುದ್ದೆ ಗಳ ಸಂಖ್ಯೆ: 42
ವೇತನ: ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ನಿಯಮ ಅನುಸಾರ
ಹುದ್ದೆಗಳು |
ಹುದ್ದೆ ಸಂಖ್ಯೆ |
ವಿದ್ಯಾರ್ಹತೆ |
ಕನ್ನಡ ಶಿಕ್ಷಕರು |
5 |
ಬಿಎ, ಬಿಎಡ್ |
ಇಂಗ್ಲಿಷ್ ಶಿಕ್ಷಕರು |
10 |
ಬಿಎ, ಬಿಎಡ್ |
ವಿಜ್ಞಾನ |
12 |
ಬಿಎಸ್ಸಿ ಬಿಎಸ್ (ಸಿಬಿಝಡ್) |
ಗಣಿತ ಶಿಕ್ಷಕರು |
14 |
ಬಿಎಸ್ಸಿ ಬಿಎಡ್ (ಪಿಸಿಎಂ) |
ಸಮಾಜ ವಿಜ್ಞಾನ |
10 |
ಬಿಎ ಬಿಎಡ್ |
ಉರ್ದು |
1 |
ಬಿಎ . ಬಿಎಡ್ |
ವಿದ್ಯಾರ್ಹತೆ: ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿದ್ದು, ಬಿಎಡ್ ಮುಗಿಸಿರಬೇಕು. ಜೊತೆಗೆ ಟಿಇಟಿಯಲ್ಲಿ ಉತ್ತೀರ್ಣರಾಗಿರಬೇಕು.
ಅರ್ಜಿ ಸಲ್ಲಿಕೆ ಪ್ರಕ್ರಿಯೆ
ಆಫ್ ಲೈನ್
ಅರ್ಜಿ ಶುಲ್ಕ
ಅರ್ಜಿ ಶುಲ್ಕಕ್ಕೆ ವಿನಾಯಿತಿ ನೀಡಲಾಗಿದೆ
ಪ್ರಮುಖ ದಿನಾಂಕ
ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್ 7
ಇದನ್ನು ಓದಿ: ಅಂಚೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗ; 2410 ಹುದ್ದೆಗಳ ನೇಮಕಾತಿ
ಅರ್ಜಿ ಸಲ್ಲಿಕೆ ಪ್ರಕ್ರಿಯೆ
-ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.
-ಆನ್ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.
ಇದನ್ನು ಓದಿ: ರಕ್ಷಣಾ ಸಚಿವಾಲಯದಲ್ಲಿ ನೇಮಕಾತಿ; 174 ಹುದ್ದೆಗೆ ಅರ್ಜಿ ಆಹ್ವಾನ
-ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ ಸ್ವಯಂ ದೃಢೀಕರಣದೊಂದಿಗೆ ಕೆಳಕಂಡ ವಿಳಾಸಕ್ಕೆ ಸ್ಪೀಡ್ ಅಥವಾ ರಿಜಿಸ್ಟರ್ ಪೋಸ್ಟ್ ಮೂಲಕ ಕಳುಹಿಸಬಹುದಾಗಿದೆ.
ಅರ್ಜಿಗಳನ್ನು ಕಲಬುರ್ಗಿ ಜಿಲ್ಲೆ ಆಯಾ ತಾಲೂಕುಗಳ ಅಲ್ಪ ಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕಾಗಿದೆ.
ಹೆಚ್ಚಿನ ಮಾಹಿತಿಗೆ ಈ ಮೊಬೈಲ್ ಸಂಖ್ಯೆಗಳಿಗೆ ಕರೆ ಮಾಡಬಹುದಾಗಿದೆ.
ಕಲಬುರಗಿ ಮತ್ತು ಅಫಜಲಪೂರ ಮೊಬೈಲ್ ಸಂಖ್ಯೆ: 9741279422
ಜೇವರ್ತಿ ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿ: 9535775141
ಆಳಂದ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿ: 8147775722
ಸೇಡಂ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿ: 7892369798
ಚಿತ್ತಾಪೂರ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿ: 97411686861
ಕಲಬುರಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿ: 08472-247260
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ